Homeಮುಖಪುಟಶಾಸಕನ ವಿರುದ್ಧದ ಅತ್ಯಾಚಾರ ಪ್ರಕರಣ : ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದಾತನ ಬಂಧನ

ಶಾಸಕನ ವಿರುದ್ಧದ ಅತ್ಯಾಚಾರ ಪ್ರಕರಣ : ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದಾತನ ಬಂಧನ

- Advertisement -
- Advertisement -

ಕೇರಳದ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ದ ಅತ್ಯಾಚಾರದ ಆರೋಪ ಹೊರಿಸಿದ ಮಹಿಳೆಯ ಗುರುತು ಬಹಿರಂಗಪಡಿಸಿ, ಅಪಮಾನ ಮಾಡಿದ ಆರೋಪದ ಮೇಲೆ ಪುರುಷ ಹಕ್ಕುಗಳ ಕಾರ್ಯಕರ್ತ ಮತ್ತು ಟಿವಿ ನಿರೂಪಕ ರಾಹುಲ್ ಈಶ್ವರ್ ಅವರನ್ನು ಭಾನುವಾರ (ನ.30) ತಿರುವನಂತಪುರದಲ್ಲಿ ಬಂಧಿಸಲಾಗಿದೆ. ಹಲವಾರು ಗಂಟೆಗಳ ವಿಚಾರಣೆಯ ನಂತರ ಭಾನುವಾರ ತಡರಾತ್ರಿ ಅವರ ಬಂಧನವನ್ನು ಖಚಿತಪಡಿಸಲಾಗಿದೆ.

ರಾಹುಲ್ ಈಶ್ವರ್ ಅವರನ್ನು ಭಾನುವಾರ ರಾತ್ರಿ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದ್ದು, ಸೋಮವಾರ (ಡಿ.1) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ವರದಿಗಳು ಹೇಳಿವೆ.

ರಾಹುಲ್ ಈಶ್ವರ್ ವಿರುದ್ಧ ಮಹಿಳೆಯ ಘನತೆಗೆ ಧಕ್ಕೆ ತಂದಿರುವ ಆರೋಪ ಮತ್ತು ಬಿಎನ್ಎಸ್ ಸೆಕ್ಷನ್ 75 (3) ರ ಲೈಂಗಿಕ ಕಿರುಕುಳದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಿರುವನಂತಪುರಂ ಸೈಬರ್ ಪೊಲೀಸರಿಗೆ ಮಹಿಳೆ ನೀಡಿದ್ದ ದೂರು ಆಧರಿಸಿ ಈಶ್ವರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈಶ್ವರ್ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಂದೀಪ್ ವಾರಿಯರ್ ಸಾಮಾಜಿಕ ಮತ್ತು ಇತರ ಮಾಧ್ಯಮಗಳಲ್ಲಿ ತನ್ನನ್ನು ಪದೇ ಪದೇ ಗುರಿಯಾಗಿಸಿಕೊಂಡು, ತನ್ನ ಸಮಗ್ರತೆಯನ್ನು ಪ್ರಶ್ನಿಸಿ, ಗುರುತಿನ ಬಗ್ಗೆ ಸುಳಿವು ನೀಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಪೊಲೀಸರ ಪ್ರಕಾರ, ಪತ್ತನಂತಿಟ್ಟ ಮಹಿಳಾ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಜಿತಾ ಪುಲಿಕ್ಕಲ್, ವಕೀಲೆ ದೀಪಾ ಜೋಸೆಫ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಂದೀಪ್ ವಾರಿಯರ್ ಮತ್ತು ರಾಹುಲ್ ಈಶ್ವರ್ ಸೇರಿದಂತೆ ನಾಲ್ವರ ವಿರುದ್ಧ ಸಂತ್ರಸ್ತೆಯನ್ನು ಅವಮಾನಿಸಿ, ಅವರ ಗುರುತು ತಿಳಿಯಬಹುದಾದ ವಿವರಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 43 ಮತ್ತು 66 ಹಾಗೂ ಬಿಎನ್‌ಎಸ್‌ನ ಸೆಕ್ಷನ್ 72 (ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವುದು) ಮತ್ತು 79 (ಮಹಿಳೆಯ ಗೌರವಕ್ಕೆ ಅವಮಾನ) ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ.

ಈ ನಡುವೆ ರಾಹುಲ್ ಮಾಂಕೂಟತ್ತಿಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಭಾನುವಾರ ಪಾಲಕ್ಕಾಡ್‌ನಲ್ಲಿರುವ ಅವರ ಫ್ಲಾಟ್‌ನಲ್ಲಿ ಶೋಧ ನಡೆಸಿದ್ದಾರೆ. ರಾಹುಲ್ ಎಲ್ಲಿದ್ದಾರೆ ಎಂಬುವುದು ಇನ್ನೂ ಗೊತ್ತಾಗಿಲ್ಲ.

ಸಂತ್ರಸ್ತೆಯ ಬಗ್ಗೆ ಮಾಹಿತಿ ಪ್ರಸಾರ ಮಾಡುವ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಕೇರಳ ಪೊಲೀಸರು ಕಠಿಣ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಈ ಕುರಿತು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಅಂತಹ ವಿಷಯವನ್ನು ಹರಡಲು ಬಳಸುವ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ” : ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ದೆಹಲಿಯ ವಾಯು ಮಾಲಿನ್ಯದಂತಹ ನಿರ್ಣಾಯಕ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವುದು ನಾಟಕವಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ...

ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ: ಸಿಬಿಐ ತನಿಖೆಗೆ ಆಗ್ರಹಿಸಿ, ಕೇರಳ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ರಾಜೀವ್ ಚಂದ್ರಶೇಖರ್

ಕೊಚ್ಚಿ: ಶಬರಿಮಲೆ ದೇವಸ್ಥಾನದಿಂದ ಚಿನ್ನ ನಾಪತ್ತೆಯಾಗಿರುವ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಘಟನೆಯ ಬಗ್ಗೆ ಸಮಗ್ರ ತನಿಖೆ ಅಗತ್ಯ ಎಂದು ಚಂದ್ರಶೇಖರ್ ತಮ್ಮ ಅರ್ಜಿಯಲ್ಲಿ...

ಆರ್‌ಎಸ್‌ಎಫ್‌ ‘ಪತ್ರಿಕಾ ಸ್ವಾತಂತ್ರ್ಯ ಹರಣಗಾರರ’ ಪಟ್ಟಿಯಲ್ಲಿ ಅದಾನಿ ಗ್ರೂಪ್, ಒಪ್‌ಇಂಡಿಯಾ

ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಪ್ರಕಟಿಸಿದ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 180 ದೇಶಗಳ ಪೈಕಿ ಭಾರತ 151ನೇ ಸ್ಥಾನ ಪಡೆದಿದೆ. ಕಳೆದ ತಿಂಗಳು (ನೆವಂಬರ್ 2) ಪ್ರಕಟಿಸಿದ ಪತ್ರಿಕಾ ಸ್ವಾತಂತ್ರ್ಯ ಹರಣಗಾರರ ಪಟ್ಟಿಯಲ್ಲಿ...

‘ನನ್ನ ರಾಜಕೀಯದ ಬ್ರ್ಯಾಂಡ್ ನೇರವಾದದ್ದು, ಯಾರ ಬೆನ್ನಿಗೂ ಚೂರಿ ಹಾಕಲ್ಲ’: ಡಿ.ಕೆ. ಶಿವಕುಮಾರ್ 

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗಿನ ಕದನ ವಿರಾಮದ ನಂತರ ಸಿಎಂ ಜೊತೆಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನನ್ನ ಇತಿಮಿತಿ ತಿಳಿದಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭಾನುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ...

ದಕ್ಷಿಣ ಭಾರತೀಯರಲ್ಲಿ ಹೃದಯ ಕಾಯಿಲೆಗಳ ಅಪಾಯ ಹೆಚ್ಚು: ಸಂಶೋಧನಾ ವರದಿಯಲ್ಲಿ ಬಹಿರಂಗ

ಬೆಂಗಳೂರಿನಲ್ಲಿ ನಡೆಸಿದ ಹೊಸ ಅಧ್ಯಯನವೊಂದರಲ್ಲಿ ದಕ್ಷಿಣ ಭಾರತೀಯರು ಹೈಪರ್ಟ್ರೋಫಿಕ್ ಕಾರ್ಡಿಯೊಮಯೋಪತಿಯ ಅಪಾಯವನ್ನು ಹೆಚ್ಚಿಸುವ ಹಾನಿಕಾರಕ ಆನುವಂಶಿಕ ರೂಪಾಂತರಗಳನ್ನು ಹೊಂದಿದ್ದಾರೆ ಎಂಬ ವಿಚಾರವನ್ನು ಬಹಿರಂಗಪಡಿಸಿದೆ. ಈ ಬಗ್ಗೆ ಡೆಕ್ಕನ್ ಹೆರಾಲ್ಡ್‌ ಮತ್ತು ಹಿಂದೂಸ್ತಾನ್ ಟೈಮ್ಸ್...

ಜಾತಿ ಕಾರಣಕ್ಕೆ ಪ್ರೇಮಿಯ ಮರ್ಯಾದೆಗೇಡು ಹತ್ಯೆ; ಶವವನ್ನೇ ಮದುವೆಯಾದ ಯುವತಿ

ಮಹಾರಾಷ್ಟ್ರದ ನಾಂದೇಡ್‌ನಲ್ಲಿ 20 ವರ್ಷದ ವ್ಯಕ್ತಿಯೊಬ್ಬನನ್ನು ಥಳಿಸಿ, ಗುಂಡು ಹಾರಿಸಿ, ಕಲ್ಲಿನಿಂದ ತಲೆ ಜಜ್ಜಿ ಕೊಲೆ ಮಾಡಲಾಗಿದೆ. ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಆತನ ಗೆಳತಿ, ಹಣೆಯ ಮೇಲೆ ಸಿಂಧೂರ ಹಚ್ಚಿಕೊಂಡು, ಆತನ ಮನೆಯಲ್ಲಿ ಸೊಸೆಯಾಗಿ...

ಭಾರೀ ಪ್ರವಾಹ, ಭೂಕುಸಿತ : ಸಾವಿರ ದಾಟಿದ ಸಾವಿನ ಸಂಖ್ಯೆ

ದಕ್ಷಿಣ ಏಷ್ಯಾದ ನಾಲ್ಕು ದೇಶಗಳಾದ ಶ್ರೀಲಂಕಾ, ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್‌ನಲ್ಲಿ ಉಂಟಾದ ಭಾರೀ ಪ್ರವಾಹ ಮತ್ತು ಭೂಕುಸಿತ ಘಟನೆಗಳಿಂದ ಸಾವನ್ನಪ್ಪಿದವರ ಸಂಖ್ಯೆ ಒಂದು ಸಾವಿರ ದಾಟಿದೆ ಎಂದು ಸೋಮವಾರ (ಡಿಸೆಂಬರ್ 1)...

ಮಸಾಲಾ ಬಾಂಡ್ ಪ್ರಕರಣ : ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಶೋಕಾಸ್ ನೋಟಿಸ್ ನೀಡಿದ ಇಡಿ

ಕೆಐಐಎಫ್‌ಬಿ ಮಸಾಲಾ ಬಾಂಡ್ ಪ್ರಕರಣದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್, ಮಾಜಿ ಹಣಕಾಸು ಸಚಿವ ಥಾಮಸ್ ಐಸಾಕ್ ಮತ್ತು ಮುಖ್ಯಮಂತ್ರಿಗಳ ಕಾರ್ಯದರ್ಶಿ ಕೆ.ಎಂ ಅಬ್ರಹಾಂ ಅವರಿಗೆ ಜಾರಿ ನಿರ್ದೇಶನಾಲ 466 ಕೋಟಿ ರೂ.ಗಳ...

ಸಂಸತ್ತಿನ ಚಳಿಗಾಲದ ಅಧಿವೇಶನ : ಎಸ್‌ಐಆರ್ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್

ಸೋಮವಾರ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನವೇ, ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ತುರ್ತು ಚರ್ಚೆ ನಡೆಸಬೇಕೆಂದು ಕೋರಿ ಕಾಂಗ್ರೆಸ್ ನಿಲುವಳಿ ಸೂಚನೆ...

ತಮಿಳುನಾಡಿನಲ್ಲಿ ಎರಡು ಬಸ್ಸುಗಳು ಡಿಕ್ಕಿ:10ಕ್ಕೂ ಹೆಚ್ಚು ಜನರ ಸಾವು, 20 ಜನರಿಗೆ ಗಂಭೀರ ಗಾಯಗಳಾಗಿವೆ

ಚೆನ್ನೈ: ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಭಾನುವಾರ ಸಂಜೆ ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿ, 20 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು...