Homeಕರ್ನಾಟಕಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ| ಆ.1ಕ್ಕೆ ತೀರ್ಪು ಮುಂದೂಡಿದ ನ್ಯಾಯಾಲಯ

ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ| ಆ.1ಕ್ಕೆ ತೀರ್ಪು ಮುಂದೂಡಿದ ನ್ಯಾಯಾಲಯ

- Advertisement -
- Advertisement -

ಹಲವಾರು ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಪ್ರಕರಣವೊಂದರ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪೂರ್ಣಗೊಳಿಸಿದೆ. ಇಂದು (ಬುಧವಾರ) ಪ್ರಕಟವಾಗಬೇಕಿದ್ದ ತೀರ್ಪನ್ನು ಆಗಸ್ಟ್‌ 1ಕ್ಕೆ ಮುಂದೂಡಿದೆ.

ಪ್ರಜ್ವಲ್ ರೇವಣ್ಣ ಸಂಸದರಾಗಿದ್ದ ಸಮಯದಲ್ಲಿ ಹಲವಾರು ಹೆಣ್ಣುಮಕ್ಕಳು ಮತ್ತು ಮಹಿಳೆಯರನ್ನು ಬೆದರಿಸಿ, ಆಮಿಷವೊಡ್ಡಿ ಅತ್ಯಾಚಾರವೆಸಗಿರುವ ಆರೋಪವಿದೆ. ತನ್ನ ಕೃತ್ಯಗಳನ್ನು ತಾನೇ ವಿಡಿಯೋ ಮಾಡಿಕೊಂಡಿದ್ದರು ಎನ್ನಲಾಗಿದೆ. ಪ್ರಜ್ವಲ್‌ ಅವರ ಕಾಮಕೃತ್ಯಗಳದ್ದು ಎನ್ನಲಾದ ವಿಡಿಯೋಗಳುಳ್ಳ ಪೆನ್‌ಡ್ರೈವ್‌ಗಳು 2024ರ ಲೋಕಸಭಾ ಚುನಾವಣೆ ವೇಳೆ ಹಾಸನದಾದ್ಯಂತ ದೊರೆತಿದ್ದವು. ಬಳಿಕ ಪ್ರಜ್ವಲ್ ವಿರುದ್ಧ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿತ್ತು.

ಈ ನಾಲ್ಕು ಪ್ರಕರಣಗಳ ಪೈಕಿ, ಮೈಸೂರಿನ ಕೆ.ಆರ್ ನಗರದ ಸಂತ್ರಸ್ತೆ (ಮನೆ ಕೆಲಸದ ಮಹಿಳೆ) ಮೇಲಿನ ಅತ್ಯಾಚಾರ ಮತ್ತು ಅಪಹರಣ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 26 ಸಾಕ್ಷಿಗಳ ಹೇಳಿಕೆಗಳು ಹಾಗೂ ಪರ-ವಿರೋಧ ವಾದಗಳನ್ನು ಆಲಿಸಿದೆ. ವಿಚಾರಣೆಯನ್ನು ಪೂರ್ಣಗೊಳಿಸಿದ್ದು, ಇಂದು ತೀರ್ಪು ನೀಡುವುದಾಗಿ ತಿಳಿಸಿತ್ತು.

ಆದಾಗ್ಯೂ, ಪ್ರಕರಣದಲ್ಲಿ ಒದಗಿಸಿರುವ ಗೂಗಲ್ ಮ್ಯಾಪ್ ಮತ್ತು ಎಫ್‌ಎಸ್‌ಎಲ್‌ ವರದಿಯ ಬಗ್ಗೆ ಸ್ಪಷ್ಟನೆ ಬೇಕೆಂದು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಹೇಳಿದ್ದಾರೆ. ಸ್ಪಷ್ಟನೆ ನೀಡುವಂತೆ ತನಿಖಾಧಿಕಾರಿಗಳಿಗೆ ಸೂಚಿಸಿದ್ದಾರೆ. ಹೀಗಾಗಿ, ತೀರ್ಪನ್ನು ಆಗಸ್ಟ್‌ 1ಕ್ಕೆ ಮುಂದೂಡಲಾಗಿದೆ ಎಂದು ಈದಿನ.ಕಾಂ ವರದಿ ಮಾಡಿದೆ.

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ನಟ ಪ್ರಕಾಶ್ ರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...