ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಜರಾಜೇಶ್ವರಿನಗರದ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ ಇಂದು (ಅ.15) ಜಾಮೀನು ಮಂಜೂರು ಮಾಡಿದೆ.
ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುನಿರತ್ನಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ.
ಮುನಿರತ್ನ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದಾರೆ.
ಬಿಬಿಎಂಪಿ ಗುತ್ತಿಗೆದಾರನಿಗೆ ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಸೆಪ್ಟೆಂಬರ್ 19ರಂದು ಷರತ್ತುಬದ್ದ ಜಾಮೀನು ಪಡೆದಿದ್ದ ಮುನಿರತ್ನ ಅವರು, ಸೆಪ್ಟೆಂಬರ್ 20ರಂದು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃದಿಂದ ಬಿಡುಗಡೆಯಾಗಿದ್ದರು. ಈ ವೇಳೆ ಅಲ್ಲೇ ಕಾದು ಕುಳಿತಿದ್ದ ಕಗ್ಗಲೀಪುರ ಪೊಲೀಸರು ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧಿಸಿದ್ದರು. ಸೆಪ್ಟೆಂಬರ್ 21ರಂದು ಮುನಿರತ್ನಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.
ಬಿಬಿಎಂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಪ್ರಕರಣದ ಮೂವರು ಆರೋಪಿಗಳಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ : ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ


