Homeಮುಖಪುಟಟಿ-ಸೀರಿಸ್‌ ಕಂಪೆನಿ ಎಂಡಿ ಭೂಷಣ್ ಕುಮಾರ್‌‌‌‌‌ ವಿರುದ್ದ ಅತ್ಯಾಚಾರ ಪ್ರಕರಣ ದಾಖಲು

ಟಿ-ಸೀರಿಸ್‌ ಕಂಪೆನಿ ಎಂಡಿ ಭೂಷಣ್ ಕುಮಾರ್‌‌‌‌‌ ವಿರುದ್ದ ಅತ್ಯಾಚಾರ ಪ್ರಕರಣ ದಾಖಲು

- Advertisement -
- Advertisement -

ಟಿ-ಸೀರಿಸ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಭೂಷಣ್ ಕುಮಾರ್‌‌‌‌‌ ಮಹಿಳೆಯೊಬ್ಬರಿಗೆ ಉದ್ಯೋಗ ನೀಡುವ ಭರವಸೆ ನೀಡಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಮುಂಬೈ ಪೊಲೀಸರು ಅವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ ಎಂದು ಶುಕ್ರವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು 30 ವರ್ಷದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪಶ್ಚಿಮ ಅಂಧೇರಿಯ ಡಿ.ಎನ್‌. ನಗರ ಪೊಲೀಸ್ ಠಾಣೆಯಲ್ಲಿ ಭೂಷಣ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಮೈಸೂರು: ಕೆಆರ್ ಆಸ್ಪತ್ರೆಯಲ್ಲಿ ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಅತ್ಯಾಚಾರ

ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿದಂತೆ ಭೂಷಣ್ ಕುಮಾರ್ ಅವರು ತಮ್ಮ ಸ್ವಂತ ಕಂಪನಿಯ ಕೆಲವು ಪ್ರಾಜೆಕ್ಟ್‌ಗಳಲ್ಲಿ ಉದ್ಯೋಗ ನೀಡುತ್ತೇನೆ ಎಂದು ಪುಸಲಾಯಿಸಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಆದರೆ, ಅಪರಾಧ ಯಾವಾಗ ನಡೆಯಿತು ಎಂಬ ವಿವರಗಳನ್ನು ಪೊಲೀಸರು ನೀಡಿಲ್ಲ.

ಪೊಲೀಸ್‌ ಅಧಿಕಾರಿಯೊಬ್ಬರ ಪ್ರಕಾರ, ಭೂಷಣ್ ಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 376 (ಅತ್ಯಾಚಾರ), 420 (ಮೋಸ), 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಟಿ-ಸೀರೀಸ್ ಎನ್ನುವುದು ಮ್ಯೂಸಿಕ್ ರೆಕಾರ್ಡ್ ಲೇಬಲ್ ಮತ್ತು ಚಲನಚಿತ್ರ ನಿರ್ಮಾಣ ಸಂಸ್ಥೆಯಾಗಿದ್ದು, ಇದನ್ನು ಭೂಷಣ್‌ ಕುಮಾರ್‌ ಅವರ ತಂದೆ ಗುಲ್ಶನ್ ಕುಮಾರ್ ಸ್ಥಾಪಿಸಿದ್ದಾರೆ. ಗುಲ್ಶನ್ ಕುಮಾರ್ ಅವರನ್ನು ‘ಕ್ಯಾಸೆಟ್ ಕಿಂಗ್’ ಎಂದೂ ಕರೆಯಲಾಗುತ್ತಿತ್ತು. 1997 ರಲ್ಲಿ ಗುಲ್ಶನ್ ಕುಮಾರ್ ಅವರನ್ನು ಮುಂಬೈನ ಅಂಧೇರಿಯಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು.

ಇದನ್ನೂ ಓದಿ: ಹರಿಯಾಣ: ದಲಿತ ಯುವತಿಯನ್ನು ಅಪಹರಿಸಿ ಸತತ 9 ದಿನ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...