Homeಮುಖಪುಟಅತ್ಯಾಚಾರ ಪ್ರಕರಣ: ಮಲಯಾಳಂ ನಟ ಸಿದ್ದಿಕ್ ಬಂಧನ

ಅತ್ಯಾಚಾರ ಪ್ರಕರಣ: ಮಲಯಾಳಂ ನಟ ಸಿದ್ದಿಕ್ ಬಂಧನ

- Advertisement -
- Advertisement -

ತಿರುವನಂತಪುರಂ: ಅತ್ಯಾಚಾರ ಪ್ರಕರಣದಲ್ಲಿ ಮಲಯಾಳಂ ನಟ ಸಿದ್ದಿಕ್ ಅವರನ್ನು ಡಿಸೆಂಬರ್ 6ರಂದು ಬಂಧಿಸಿ, ಬಳಿಕ ಜಾಮೀನಿನ ಮೇಲೆ  ಬಿಡುಗಡೆ ಮಾಡಲಾಗಿದೆ.

ಅತ್ಯಾಚಾರ ಪ್ರಕರಣದಲ್ಲಿ ಮಲಯಾಳಂನ ಹಿರಿಯ ನಟ ಸಿದ್ದಿಕ್‌ಗೆ ಸುಪ್ರೀಂ ಕೋರ್ಟ್ ಬಂಧನದಿಂದ ರಕ್ಷಣೆ ನೀಡಿದ ವಾರಗಳ ನಂತರ, ಅವರು ಶುಕ್ರವಾರ (ಡಿ.6) ತನಿಖಾ ಸಂಸ್ಥೆಯ ಮುಂದೆ ಹಾಜರಾಗಿ, ಔಪಚಾರಿಕವಾಗಿ ಅವರ ಬಂಧನ ನಡೆಸಿ, ನಂತರ ಜಾಮೀನಿನ ಮೇಲೆ ಬಿಡುಗಡೆಯಾದರು.

ನಟ ಸಿದ್ದಿಕ್  ಅವರನ್ನು ಔಪಚಾರಿಕವಾಗಿ ಬಂಧಿಸಲಾಯಿತು, ನಂತರ ಅವರ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಯಿತು. ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ನವೆಂಬರ್ 19 ರಂದು ಸುಪ್ರೀಂ ಕೋರ್ಟ್ ಅವರಿಗೆ ಬಂಧನದಿಂದ ರಕ್ಷಣೆ ನೀಡಿತ್ತು.

ಸೆಪ್ಟೆಂಬರ್ 24 ರಂದು ಕೇರಳ ಹೈಕೋರ್ಟ್  ಜಾಮೀನು ನಿರಾಕರಿಸಿದ ನಂತರ ಸಿದ್ದಿಕ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆರೋಪಗಳ ಗಂಭೀರತೆಯ ದೃಷ್ಟಿಯಿಂದ, ಅಪರಾಧದ ಸರಿಯಾದ ತನಿಖೆಗಾಗಿ ಅವರ ಕಸ್ಟಡಿ ವಿಚಾರಣೆ ಅನಿವಾರ್ಯವಾಗಿತ್ತು.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಅಪರಾಧಗಳಿಗಾಗಿ ಪ್ರಕರಣದಲ್ಲಿ ನಟನ ವಿರುದ್ಧ ದೂರು ದಾಖಲಿಸಲಾಗಿದೆ. 2019ರಿಂದ ಅಂದರೆ ದೀರ್ಘಕಾಲದಿಂದ ಕಿರುಕುಳಕ್ಕೆ ಮತ್ತು ಸುಳ್ಳು ಆರೋಪಕ್ಕೆ ತನ್ನನ್ನು ಒಳಪಡಿಸಲಾಗಿದೆ ಎಂದು ನಟ ಮನವಿಯಲ್ಲಿ ಹೇಳಿಕೊಂಡಿದ್ದಾರೆ. ಅವರು ತಮ್ಮ ವಿರುದ್ಧ ಅತ್ಯಾಚಾರ ಆರೋಪಕ್ಕಾಗಿ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯು ಮಲಯಾಳಂ ಚಿತ್ರರಂಗದ ಅನೇಕ ನಿರ್ದೇಶಕರು ಮತ್ತು ನಟರ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳನ್ನು ಬಹಿರಂಗಪಡಿಸಿದ ನಂತರ  ಅವರ ವಿರುದ್ಧ ದೂರು ದಾಖಲಿಸಲಾಗಿದೆ.

2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದ ನಂತರ ಕೇರಳ ಸರ್ಕಾರವು ಹೇಮಾ ಸಮಿತಿಯನ್ನು ರಚಿಸಿತು ಮತ್ತು ಇದು ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಹಿಳೆಯರಿಗೆ ಕಿರುಕುಳ ಮತ್ತು ಶೋಷಣೆಯ ನಿದರ್ಶನಗಳನ್ನು ಬಹಿರಂಗಪಡಿಸಿತು. ಹಲವಾರು ನಟರು ಮತ್ತು ನಿರ್ದೇಶಕರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಶೋಷಣೆಯ ಆರೋಪಗಳ ನಂತರ, ರಾಜ್ಯ ಸರ್ಕಾರವು ಆಗಸ್ಟ್ 25 ರಂದು ಆರೋಪಗಳನ್ನು ತನಿಖೆ ಮಾಡಲು ಏಳು ಸದಸ್ಯರ ವಿಶೇಷ ತನಿಖಾ ತಂಡವನ್ನು ಸ್ಥಾಪಿಸುವುದಾಗಿ ಘೋಷಿಸಿತು.

ಇದನ್ನೂ ಓದಿ….ಉಪ ಮುಖ್ಯಮಂತ್ರಿಯಾದ ಮರುದಿನ ಅಜಿತ್ ಪವಾರ್ ಮೇಲಿನ ಬೇನಾಮಿ ಆರೋಪ ತೆರವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...