Homeಮುಖಪುಟಅತ್ಯಾಚಾರ ಪ್ರಕರಣ: ಎದೆ ನೋವು ನೆಪದಲ್ಲಿ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಆದ ಮುರುಘಾ ಶರಣರು

ಅತ್ಯಾಚಾರ ಪ್ರಕರಣ: ಎದೆ ನೋವು ನೆಪದಲ್ಲಿ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಆದ ಮುರುಘಾ ಶರಣರು

- Advertisement -
- Advertisement -

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಗುರುವಾರ ತಡರಾತ್ರಿ ಬಂಧನವಾಗಿದ್ದ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮರುಘಾ ಶರಣರನ್ನು ಎದೆ ನೋವು ಕಾರಣದಿಂದ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎನ್ನಲಾಗಿದೆ.

ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಪೋಕ್ಸೊ ಪ್ರಕರಣದಡಿಯಲ್ಲಿ ಬಂಧಿಸಲಾಗಿತ್ತು. ಎಲ್ಲಾ ವೈದ್ಯಕೀಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದರು. ಅದರಂತೆ ಬೆಳಗ್ಗಿನ ಜಾವ ಮುರುಘಾ ಶರಣರನ್ನು ಚಿತ್ರದುರ್ಗ ಜಿಲ್ಲಾ ಬಂಧೀಖಾನೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಪದೇ ಪದೇ ಎದೆ ನೋವು ಎಂದು ಹೇಳಿದ್ದರು. ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಿಸಲಾಗಿತ್ತು. ಆನಂತರ ಇಸಿಜಿ ಮಾಡಿಸಲಾಗಿತ್ತು ಎಂದು ವರದಿಯಾಗಿದೆ.

ಮುರುಘಾ ಶರಣರನ್ನು ಆಸ್ಪತ್ರೆಗೆ ದಾಖಲಿಸಿದ ಕೂಡಲೇ ಚಿತ್ರದುರ್ಗ ಎಸ್‌ಪಿ ಕೆ.ಪರಶುರಾಮ್‌ ಸ್ಥಳಕ್ಕೆ ಧಾವಿಸಿ ಮಾಹಿತಿ ಪಡೆದಿದ್ದರು. ಮಠದ ಸಿಬ್ಬಂದಿಗಳು ಶರಣರಿಗೆ ಬಿಪಿ ಮತ್ತು ಹೃದಯ ರೋಗದ ಸಮಸ್ಯೆಯಿದೆ ಎಂದು ಹೇಳಿಕೆ ನೀಡಿದ್ದಾರೆ.

ಸದ್ಯ ಹಿರಿಯ ವೈದ್ಯರೊಡನೆ ಚರ್ಚಿಸುತ್ತಿರುವ ಜಿಲ್ಲಾಸ್ಪತ್ರೆ ವೈದ್ಯರು ಮುರುಘಾ ಶರಣರನ್ನು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಸ್ಥಳಾಂತರಿಸಲು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಪೋಕ್ಸೋ ಪ್ರಕರಣ ದಾಖಲಾಗಿ 6 ದಿನದ ನಂತರ ಬಂಧನವಾಗಿದೆ. ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಬಂಧನಕ್ಕೆ ಮೀನಾಮೇಷ ಎಣಿಸುತ್ತಿದ್ದರು. ಈಗ ಬಂಧನವಾದ ಕೂಡಲೇ ಎದೆನೋವಿನ ನಾಟಕವಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯವಾಡಲಾಗಿದೆ. ಬಂಧನದ ಸಮಯದಲ್ಲಿಯೇ ಹಲವರು ನೋಡಿ ಆರೋಪಿ ಮುರುಘಾ ಶರಣರಿಗೆ ಎದೆ ನೋವು ಬರುತ್ತದೆ ಎಂದು ಹೇಳಿದ್ದರು. ಅದರಂತೆಯೇ ಎದೆನೋವಿನ ವರದಿಗಳು ಬಂದ ನಂತರ ಟ್ರೋಲ್‌ಗಳ ಸಹ ಆರಂಭವಾಗಿವೆ.

ಇದನ್ನೂ ಓದಿ; ಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಕಾಸರಗೋಡು: ಅಣಕು ಮತದಾನದ ವೇಳೆ ಬಿಜೆಪಿ ಚಿಹ್ನೆಯೊಂದಿಗೆ ಹೆಚ್ಚುವರಿ ಸ್ಲಿಪ್ ಮುದ್ರಿಸಿದ ವಿವಿಪ್ಯಾಟ್

0
ಕೇರಳದ ಕಾಸರಗೋಡಿನಲ್ಲಿ ಬುಧವಾರ (ಏ.17) ನಡೆದ ಅಣಕು ಮತದಾನದ ಸಂದರ್ಭದಲ್ಲಿ ಮೂರು ವಿವಿ ಪ್ಯಾಟ್ (ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್) ಯಂತ್ರಗಳು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಮಲದ ಚಿಹ್ನೆಯೊಂದಿಗೆ ತಲಾ...