Homeಮುಖಪುಟಸನ್ಯಾಸಿನಿ ಅತ್ಯಾಚಾರ ಪ್ರಕರಣ: ಬಿಷಪ್ ಫ್ರಾಂಕೋ ಖುಲಾಸೆ ವಿರುದ್ಧ ಮೇಲ್ಮನವಿಗೆ ಯೋಜಿಸಿದ ಕೇರಳ ಪೊಲೀಸ್‌‌

ಸನ್ಯಾಸಿನಿ ಅತ್ಯಾಚಾರ ಪ್ರಕರಣ: ಬಿಷಪ್ ಫ್ರಾಂಕೋ ಖುಲಾಸೆ ವಿರುದ್ಧ ಮೇಲ್ಮನವಿಗೆ ಯೋಜಿಸಿದ ಕೇರಳ ಪೊಲೀಸ್‌‌

- Advertisement -

ಕೇರಳದ ಕೊಟ್ಟಾಯಂ ಸೆಷನ್ಸ್‌ ನ್ಯಾಯಾಲಯವು ಬಿಷಪ್‌ ಫ್ರಾಂಕೋ ಮುಲಕ್ಕಲ್‌ ಅವರನ್ನು ರಾಜ್ಯದ ಕಾನ್ವೆಂಟ್‌ನಲ್ಲಿ ಸನ್ಯಾಸಿನಿಯೊಬ್ಬರ ಮೇಲೆ ಅತ್ಯಾಚಾರದ ಆರೋಪದಿಂದ ಇತ್ತಿಚೆಗೆ ಖುಲಾಸೆಗೊಳಿಸಿತ್ತು. ಇದಾಗಿ ಒಂದು ದಿನದ ನಂತರ, ಕೇರಳ ಪೊಲೀಸರು ಶನಿವಾರ ಹೈಕೋರ್ಟ್‌ನಲ್ಲಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನು ಸಲಹೆಯನ್ನು ಕೋರಿದ್ದಾರೆ.

ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಪೊಲೀಸರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ನಿಂದ ಕಾನೂನು ಅಭಿಪ್ರಾಯ ಕೇಳಿದ್ದಾರೆ ಎಂದು ಕೊಟ್ಟಾಯಂ ಎಸ್‌ಪಿಡಿ ಶಿಲ್ಪಾ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. “ನಾವು ಶುಕ್ರವಾರದಂದು ತಡವಾಗಿ ವಿವರವಾದ ತೀರ್ಪನ್ನು ಪಡೆದುಕೊಂಡಿದ್ದೇವೆ. ಮೇಲ್ಮನವಿ ಸಲ್ಲಿಸಲು ನಾವು ಕಾನೂನು ಅಭಿಪ್ರಾಯವನ್ನು ಕೇಳಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಕೇರಳ: ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಬಿಷಪ್ ಫ್ರಾಂಕೋ ಖುಲಾಸೆ

ಈ ಮಧ್ಯೆ, ಬಿಷಪ್ ವಿವಿಧ ಚರ್ಚ್‌ಗಳಿಗೆ ಭೇಟಿ ನೀಡಿ ಮಾಜಿ ಶಾಸಕ ಪಿ ಸಿ ಜಾರ್ಜ್ ಅವರನ್ನು ಭೇಟಿಯಾಗಿದ್ದಾರೆ. ಆರೋಪದಿಂದ ಖುಲಾಸೆಗೊಂಡ ನಂತರ ಪಿಸಿ ಜಾರ್ಜ್ ಅವರು ಪ್ರಾಂಕೋ ಅವರನ್ನು ಬೆಂಬಲಿಸಿದ್ದಾರೆ.

ಬಿಷಪ್‌ ಪ್ರಾಂಕೋ ಅವರು ಪಿಸಿ ಜಾರ್ಜ್ ಅವರೊಂದಿಗಿನ ಸಭೆ ನಡೆಸಿ, ಹತ್ತಿರದ ಚರ್ಚ್‌ಗಳಿಗೆ ಭೇಟಿ ಮಾಡಿದ್ದಾರೆ. ಆದರೆ ಈ ವೇಳೆ ಅವರು ಮಾಧ್ಯಮಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ್ದರು. ಈ ಸಭೆಯ ನಂತರ ಮಾಧ್ಯಮದ ಜೊತಗೆ ಮಾತನಾಡಿದ ಅವರು, “ಈ ಪ್ರಕರಣವು ಚರ್ಚ್‌ ಮತ್ತು ಭಕ್ತರನ್ನು ಗುರಿಯಾಗಿಸುವ ಪಿತೂರಿಯ ಭಾಗವಾಗಿ ಮಾಡಿದ ಪ್ರಯತ್ನವಾಗಿದೆ” ಎಂದು ಹೇಳಿದ್ದಾರೆ.

ಜಲಂಧರ್ ಡಯಾಸಿಸ್‌ನ ಬಿಷಪ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ, ಮಿಷನರೀಸ್ ಆಫ್ ಜೀಸಸ್ ಸಭೆಗೆ ಸೇರಿದ ಸನ್ಯಾಸಿನಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಫ್ರಾಂಕೋ ಮೇಲೆ ಹೊರಿಸಲಾಗಿತ್ತು. 2014 ಮತ್ತು 2016 ರ ನಡುವೆ ಕೇರಳಕ್ಕೆ ಭೇಟಿ ನೀಡಿದಾಗ, 43 ವರ್ಷದ ಸನ್ಯಾಸಿನಿಯ ಮೇಲೆ 13 ಬಾರಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪ ಹೊರಿಸಲಾಗಿತ್ತು. ಈ ಆರೋಪದ ನಂತರ ಫ್ರಾಂಕೊ ಅವರನ್ನು ಜಲಂಧರ್ ಡಯಾಸಿಸ್ ಉಸ್ತುವಾರಿಯಿಂದ ತೆಗೆದುಹಾಕಲಾಗಿತ್ತು.

ಇದನ್ನೂ ಓದಿ:ಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ – ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

ಬಿಷಪ್ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ಜೂನ್ 2018 ರಲ್ಲಿ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ದಾಖಲಿಸಲಾಗಿತ್ತು. ಇದರ ನಂತರ ಆರೋಪಿಯನ್ನು ಸೆಪ್ಟೆಂಬರ್ 21, 2018 ರಂದು ಬಂಧಿಸಲಾಯಿತು. ಅಕ್ಟೋಬರ್ 16, 2018 ರಂದು ಜಾಮೀನು ಪಡೆದಿದ್ದರು. ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡವು ಬಿಷಪ್ ಅವರನ್ನು ಬಂಧಿಸಿ ಅಕ್ರಮ ಬಂಧನ, ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಕ್ರಿಮಿನಲ್ ಬೆದರಿಕೆಯ ಆರೋಪವನ್ನು ಹೊರಿಸಿತ್ತು.

ಪ್ರಕರಣದ ವಿಚಾರಣೆ ನವೆಂಬರ್ 2019 ರಲ್ಲಿ ಪ್ರಾರಂಭವಾಯಿತು. ಸಿರೋ-ಮಲಬಾರ್ ಕ್ಯಾಥೋಲಿಕ್ ಚರ್ಚ್‌ನ ಕಾರ್ಡಿನಲ್ ಮಾರ್ ಜಾರ್ಜ್ ಅಲೆಂಚೇರಿ, ಮೂವರು ಬಿಷಪ್‌ಗಳು, 11 ಪಾದ್ರಿಗಳು ಮತ್ತು 22 ಸನ್ಯಾಸಿನಿಯರು ಸೇರಿದಂತೆ 83 ಸಾಕ್ಷಿಗಳನ್ನು ಚಾರ್ಜ್‌ಶೀಟ್‌‌ ಹೆಸರಿಸಿದೆ. 83 ಸಾಕ್ಷಿಗಳ ಪೈಕಿ 39 ಮಂದಿಯನ್ನು ಕರೆಸಿ ವಿಚಾರಣೆ ನಡೆಸಲಾಯಿದೆ.

ಈ ಮಧ್ಯೆ, ಫ್ರಾಂಕೋ ತನ್ನ ವಿರುದ್ಧದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೇರಳ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಆದರೆ ಎರಡೂ ನ್ಯಾಯಾಲಯಗಳು ಇದನ್ನು ನಿರಾಕರಿಸಿದ್ದವು. ಅಂತಿಮವಾಗಿ ಜನವರಿ 14 ರಂದು ಕೊಟ್ಟಾಯಂ ಸೆಷನ್ಸ್‌ ನ್ಯಾಯಾಲಯವು ಅವರನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.

ಇದನ್ನೂ ಓದಿ:ಅತ್ಯಾಚಾರ ಆರೋಪಿ ಬಿಷಪ್‌ ಫ್ರಾಂಕೊ ಮುಲಕ್ಕಲ್‌ನ ಅರ್ಜಿ ವಜಾ ಮಾಡಿದ ಸುಪ್ರೀಂ‌‌

+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಭಾರತದ ಮಾತೃ ಭಾಷೆ ಸಂಸ್ಕೃತವೇ? ದ್ರಾವಿಡವೇ?

ಯಾವುದೇ ಭಾಷೆಯ ಮೂಲ ಉದ್ದೇಶ ಸಂವಹನ. ಸಂವಹನದ ಉದ್ದೇಶದಿಂದ ಬಳಸಲಾಗುವ ಯಾವುದೇ ಭಾಷೆಗಳಲ್ಲಿ ಮೇಲು ಕೀಳು ಎಂಬ ಭಾವವೇ ನಿಕೃಷ್ಟವಾದದ್ದು. ಜಗತ್ತಿನ ಮೂಲೆ ಮೂಲೆಗಳಲ್ಲಿ ಮನುಷ್ಯರು ಬಳಸುವ ಎಲ್ಲಾ ಭಾಷೆಗಳಿಗೂ ತನ್ನದೇ ಆದ...
Wordpress Social Share Plugin powered by Ultimatelysocial