Homeಮುಖಪುಟಮಲಯಾಳಂ ನಟ ಸಿದ್ದೀಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಮಲಯಾಳಂ ನಟ ಸಿದ್ದೀಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

- Advertisement -
- Advertisement -

ಯುವ ನಟಿಯ ದೂರಿನ ಮೇರೆಗೆ ಮಲಯಾಳಂ ಸಿನಿಮಾ ರಂಗದ ಖ್ಯಾತ ನಟ ಸಿದ್ದೀಕ್ ವಿರುದ್ಧ ಕೇರಳ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

2016ರಲ್ಲಿ ಸಿದ್ದೀಕ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಕೆಲ ದಿನಗಳ ಹಿಂದೆ ನಟಿಯೊಬ್ಬರು ಆರೋಪಿಸಿದ್ದರು. ಅದೇ ನಟಿ ಇದೀಗ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ದೂರು ಆಧರಿಸಿ ತಿರುವನಂತಪುರಂನ ಮ್ಯೂಸಿಯಂ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಸಿದ್ದೀಕ್ ವಿರುದ್ದ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಕ್ರಿಮಿನಲ್ ಕಾನೂನು ಐಪಿಸಿ ಈಗ ಬಿಎನ್‌ಎಸ್ ಆದರೂ, 2016ರಲ್ಲೇ ದೌರ್ಜನ್ಯ ನಡೆದಿರುವ ಆರೋಪ ಕೇಳಿ ಬಂದಿರುವುದರಿಂದ ಐಪಿಸಿ ಅಡಿಯೇ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಿದ್ದೀಕ್, ತನ್ನ ವಿರುದ್ದ ಆರೋಪ ಕೇಳಿ ಬಂದ ಬೆನ್ನಲ್ಲೇ ರಾಜೀನಾಮೆ ನೀಡಿದ್ದರು.

ಸಿದ್ದೀಕ್ ರೀತಿಯೇ ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಂಜಿತ್ ವಿರುದ್ದವೂ ಬೆಂಗಾಲಿ ನಟಿಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದು, ದೂರು ದಾಖಲಿಸಿದ್ದಾರೆ.

ಮಲಯಾಳಂ ನಟರಾದ ಜಯಸೂರ್ಯ, ಮಣಿಯನ್ ಪಿಳ್ಳ ರಾಜು, ಶಾಸಕ ಹಾಗೂ ನಟ ಮುಖೇಶ್, ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಪ್ರಮುಖ ನಾಯಕ ಇಡವೇಳ ಬಾಬು ವಿರುದ್ದ ನಟಿ ಮಿನು ಮುನೀರ್ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಎಲ್ಲರ ವಿರುದ್ದ ದೂರು ದಾಖಲಿಸುವುದಾಗಿ ತಿಳಿಸಿದ್ದಾರೆ.

ಮತ್ತೊಂದೆಡೆ, ಮಲಯಾಳಂ ಚಿತ್ರರಂಗದ ಜೂನಿಯರ್ ಕಲಾವಿದೆಯೊಬ್ಬರು ಪ್ರಶಸ್ತಿ ವಿಜೇತ ನಟ ಮತ್ತು ನಿರ್ದೇಶಕ ಬಾಬುರಾಜ್ ಮೇಲೆ ಅತ್ಯಾಚಾರ ಆರೋಪ ಮಾಡಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್ ಲಾಲ್ ನಿನ್ನೆ (ಆ.27) ರಾಜೀನಾಮೆ ನೀಡಿದ್ದಾರೆ. ವರದಿಗಳ ಪ್ರಕಾರ, ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಜಂಟಿಯಾಗಿ ರಾಜೀನಾಮೆ ಸಲ್ಲಿಸಿದ್ದು, ಸಮಿತಿಯನ್ನು ವಿಸರ್ಜಿಸಲಾಗಿದೆ.

ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯಗಳ ಕುರಿತ ಆಫಾತಕಾರಿ ವಿಷಯಗಳನ್ನು ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಇತ್ತೀಚೆಗೆ ಬಿಚ್ಚಿಟ್ಟಿತ್ತು. ಆ ಬಳಿಕ ಒಬ್ಬೊಬ್ಬರಾಗಿಯೇ ನಟಿಯರು ನಟರ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಮಾಡುತ್ತಿದ್ದಾರೆ.

ಇಂತಹ ಆರೋಪಗಳ ತನಿಖೆಗೆ ಕೇರಳ ಸರ್ಕಾರ ಏಳು ಮಂದಿ ಪೊಲೀಸರ ವಿಶೇಷ ತಂಡವನ್ನು ರಚಿಸಿದೆ. ಈ ತಂಡದಲ್ಲಿ ನಾಲ್ವರು ಮಹಿಳಾ ಐಪಿಎಸ್ ಅಧಿಕಾರಿಗಳೂ ಇದ್ದಾರೆ.

ಇದನ್ನೂ ಓದಿ : ‘ಅಮ್ಮ’ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ : ಸಂಪೂರ್ಣ ಸಮಿತಿ ವಿಸರ್ಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...