Homeಕರ್ನಾಟಕಬಾಲಕಿಯರ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿ ಮುರುಘಾ ಮಠದ ಶಿವಮೂರ್ತಿ ಪೊಲೀಸ್‌ ವಶಕ್ಕೆ

ಬಾಲಕಿಯರ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿ ಮುರುಘಾ ಮಠದ ಶಿವಮೂರ್ತಿ ಪೊಲೀಸ್‌ ವಶಕ್ಕೆ

- Advertisement -
- Advertisement -

ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾವೇರಿ ಜಿಲ್ಲೆಯ ಬಂಕಾಪುರದ ಬಳಿ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗಾಗಿ ಮಠಕ್ಕೆ ಕರೆದೊಯ್ಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿದೆ. ಆರೋಪಿ ಕಾರಿನಲ್ಲಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಮುರುಘಾ ಶರಣರ ವಿರುದ್ಧ ಪ್ರಕರಣ ಮೈಸೂರಿನಲ್ಲಿ ದಾಖಲಾಗಿದೆ. ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಠದ ವಿದ್ಯಾರ್ಥಿನಿಲಯದ ಹಲವು ವಿದ್ಯಾರ್ಥಿನಿಯರಿಗೆ ಮಠಾಧೀಶರು ಹಲವು ದಿನಗಳಿಂದಲೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲಿ ನ್ಯಾಯ ದೊರಕುವುದಿಲ್ಲ ಎಂಬ ಆತಂಕದಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿನಿಯರು ಮೈಸೂರಿನಲ್ಲಿರುವ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿ ಪ್ರಕರಣವನ್ನು ಬೆಳಕಿಗೆ ತಂದಿದ್ದರು.

ಇದನ್ನೂ ಓದಿ: ಮುರುಘಾ ಶರಣರ ಮೇಲಿನ ಪೋಕ್ಸೋ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆ

ದೌರ್ಜನ್ಯಕ್ಕೊಳಗಾದ ಹೆಣ್ಣುಮಕ್ಕಳ ಪೋಷಣೆಯಲ್ಲಿ ಪ್ರಮುಖಪಾತ್ರ ವಹಿಸುತ್ತಿರುವ ಒಡನಾಡಿ ಸಂಸ್ಥೆಯು ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಶುಕ್ರವಾರ ವಿಚಾರಣೆ ನಡೆಸಿತ್ತು. ತೊಂದರೆಗೊಳಗಾದ ವಿದ್ಯಾರ್ಥಿನಿಯರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂಬುದನ್ನು ಖಚಿತಪಡಿಸಿಕೊಂಡ ನಂತರ ಮುರುಘಾ ಪೀಠಾಧೀಶನ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿಯು ಆದೇಶ ಹೊರಡಿಸಿತ್ತು.

ಆರಂಭದಲ್ಲಿ ಪ್ರಕರಣ ದಾಖಲಿಸಲು ನಜರಾಬಾದ್ ಠಾಣೆ ಪೊಲೀಸರು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಆನಂತರ ಜಿಲ್ಲಾಧಿಕಾರಿಯವರ ಗಮನಕ್ಕೆ ತಂದ ಬಳಿಕ ಪ್ರಕರಣ ದಾಖಲಿಸಲಾಗಿದೆ. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆಧರಿಸಿ ನಜರ್‌ಬಾದ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆ ಚಿತ್ರದುರ್ಗದಲ್ಲಿ ನಡೆದಿರುವುದರಿಂದ ಪೊಲೀಸರು ಇಡೀ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡಿದ್ದಾರೆ. ಎಫ್‌ಆರ್‌ಐಆರ್‌ನಲ್ಲಿ ಮೊದಲ ಆರೋಪಿಯಾಗಿ ಮುರುಘಾ ಪೀಠಾಧೀಶರು, ಎರಡನೇ ಆರೋಪಿಯಾಗಿ ವಾರ್ಡನ್‌ ರಶ್ಮೀ, ಮೂರನೇ ಆರೋಪಿಯಾಗಿ ಮರುಘಾ ಮಠದ ಮರಿಸ್ವಾಮಿ ಬಸವಾದಿತ್ಯ, ನಾಲ್ಕನೇ ಆರೋಪಿಯಾಗಿ ಮೈಸೂರಿನ ಪರಮಶಿವಯ್ಯ ಅವರನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ: ದಲಿತರ ಆಗ್ರಹ

ಮತ್ತುಬರಿಸಿ ಲೈಂಗಿಕ ದೌರ್ಜನ್ಯ; ಮಕ್ಕಳ ಆರೋಪ

“ಚಿತ್ರದುರ್ಗದ ಮುರುಘಾಮಠದ ವಿದ್ಯಾರ್ಥಿನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು” ಎಂದು ಎಸ್‌ಎಸ್‌ಎಲ್‌ಸಿ ಓದುತ್ತಿರುವ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.

“ಇದೇ ರೀತಿಯ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರೂ ದೂರು ನೀಡಲು ಹೆದರುತ್ತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದೆವು” ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ಹೇಳಿಕೆ ಆಧರಿಸಿ ಒಡನಾಡಿ ಸಂಸ್ಥೆಯವರು ದೂರು ನೀಡಿದ್ದರು. ವಿಚಾರಣೆ ನಡೆಸಿದಾಗ ಮಕ್ಕಳು ತಮಗಾದ ಅನುಭವವನ್ನು ಸಮಿತಿ ಮುಂದೆ ದಾಖಲಿಸಿದ್ದರು. ವಿಸ್ಕೃತ ವಿಚಾರಣೆ ನಂತರ ಸಮಿತಿಯು ಮೊಕದ್ದಮೆ ದಾಖಲಿಸಲು ಮಕ್ಕಳ ರಕ್ಷಣಾಧಿಕಾರಿಗೆ ಆದೇಶ ನೀಡಿತ್ತು. ಸಮಿತಿ ಅಧ್ಯಕ್ಷರಾದ ಕಮಲ ಅವರು ರಜೆ ಇದ್ದ ಕಾರಣ ಹಿರಿಯ ಸದಸ್ಯ ಧನಂಜಯ ಎಲಿಯೂರು, ಸದಸ್ಯರಾದ ಅಶೋಕ್ ಹಾಗೂ ಸವಿತಾಕುಮಾರಿ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

ಈ ಹಿಂದೆ ತಡೆಯಾಜ್ಞೆ ಕೋರಿದ್ದ ಮುರುಘಾ ಪೀಠಾಧೀಶ

“ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಪೋಷಕರು ಎಂದು ಹೇಳಿಕೊಳ್ಳುತ್ತಲೇ ತಮ್ಮ ಕುರಿತಾದ ಅಪ್ರಿಯವಾದ ಸಂಗತಿಗಳ ಕುರಿತು ಯಾರೂ ಪ್ರಕಟಿಸಬಾರದು ಮತ್ತು ಚರ್ಚಿಸಬಾರದು” ಎಂದು ಶಿವಮೂರ್ತಿ ಮುರುಘಾ ಶರಣರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅಸಲು ದಾವೆ ಸಲ್ಲಿಸಿದ್ದರು. ಆದರೆ ನಿರ್ದಿಷ್ಟ ಪ್ರಕರಣ, ನಿರ್ದಿಷ್ಟ ವಸ್ತು ಸಂಗತಿಯನ್ನು ಉಲ್ಲೇಖಿಸದೇ ತಡೆಯಾಜ್ಞೆ ಕೋರಿದ್ದರು ಎಂದು ‘ದಿ ಫೈಲ್‌’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಭಾವಿ ಮಠಾಧೀಶರಾದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಯಾದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ತಪ್ಪು ಮಾಡಿರುವ ಸಾಧ್ಯತೆ ಇರುವುದರಿಂದಲೇ ಮಹಾರಾಷ್ಟ್ರ ರಾಜ್ಯ ಕ್ಕೆ ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿದಾಗ ಸಿಕ್ಕಿಬಿದ್ದಿರುವುದು, ಇಂತಹವರು ತೋರಿಕೆಗಾಗಿ ಬಸವ ಪ್ರಶಸ್ತಿ ಯನ್ನು ನೀಡುತ್ತಿದ್ದರೆಂದು ತೋರುತ್ತದೆ,‌ .
    ಇವರನ್ನು ಗೋಮುಖ ವ್ಯಾಘ್ರ ‌‌‌ಗಳೆಂದು ಕರೆಯಬಹುದು

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...