Homeಮುಖಪುಟಪೆರೋಲ್‌ನಲ್ಲಿ ಹೊರಗಿರುವ ರೇಪ್ ಪ್ರಕರಣದ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಆನ್‌ಲೈನ್‌ನಲ್ಲಿ ಪ್ರವಚನ!: ಬಿಜೆಪಿ ಮುಖಂಡರ...

ಪೆರೋಲ್‌ನಲ್ಲಿ ಹೊರಗಿರುವ ರೇಪ್ ಪ್ರಕರಣದ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಆನ್‌ಲೈನ್‌ನಲ್ಲಿ ಪ್ರವಚನ!: ಬಿಜೆಪಿ ಮುಖಂಡರ ಭಾಗಿ

ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ, ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಆತನಿಗೆ ಈ ವರ್ಷ ಚುನಾವಣೆಗಳು ಹತ್ತಿರವಿದ್ದಾಗ ಮೂರು ಬಾರಿ ಪೆರೋಲ್ ನೀಡಲಾಗಿದೆ!

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆ ಅಪರಾಧಿ, ಡೇರಾ ಸಚ್ಚಾ ಸೌಧದ ವಿವಾದಾತ್ಮಕ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಿಂದ 40 ದಿನಗಳ ಪೆರೋಲ್‌ನಲ್ಲಿರುವಾಗ ಆನ್‌ಲೈನ್ ಸತ್ಸಂಗ (ಪ್ರವಚನ) ನಡೆಸಲು ಪ್ರಾರಂಭಿಸಿದ್ದಾರೆ. ಮಂಗಳವಾರ ಬಿಜೆಪಿ ನಾಯಕ ಮತ್ತು ಕರ್ನಾಲ್‌ನ ಮಾಜಿ ಮೇಯರ್ ರೇಣು ಬಾಲ ಗುಪ್ತಾ ಕೂಡ ಅವರ ಆರ್ಶಿವಾದ ಪಡೆದಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ಬರ್ಸಾದಿಂದ ನಡೆಸಿದ ಸುಮಾರು ಎರಡು ಗಂಟೆಗಳ ಸತ್ಸಂಗದಲ್ಲಿ ಹಲವಾರು ಇತರ ಸ್ಥಳೀಯ ರಾಜಕಾರಣಿಗಳು ಸಹ ಭಾಗವಹಿಸಿದ್ದರು. ಅಲ್ಲಿ ಗುಪ್ತಾ ಡೇರಾ ಮುಖ್ಯಸ್ಥರನ್ನು “ಪಿತಾಜಿ” ಎಂದು ಸಂಬೋಧಿಸಿದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹರಿಯಾಣದಲ್ಲಿ ಪಂಚಾಯತ್ ಚುನಾವಣೆಗಳು ಮತ್ತು ಆದಂಪುರ ಉಪಚುನಾವಣೆ ಕೆಲವೆ ದಿನಗಳಲ್ಲಿ ನಡೆಯುವ ಸಂದರ್ಭದಲ್ಲಿ ಅತ್ಯಾಚಾರ ಅಪರಾಧಿಗೆ ಪೆರೋಲ್ ನೀಡಿದ್ದು ಏಕೆ ಎಂಬ ಪ್ರಶ್ನೆಗಳು ಎದ್ದಿವೆ. ಆದರೆ  ಕರ್ನಾಲ್ ಕ್ಷೇತ್ರವನ್ನು ಪ್ರತಿನಿಧಿಸುವ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಕಾರಾಗೃಹಗ ಸಚಿವ ರಂಜಿತ್ ಸಿಂಗ್ ಪೆರೋಲ್ ನೀಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಇದೊಂದು “ವಾಡಿಕೆಯ ಕಾರ್ಯವಿಧಾನ” ಮತ್ತು “ಅಪರಾಧಿಯ ಕಾನೂನುಬದ್ಧ ಹಕ್ಕು” ಎಂದು ಬಣ್ಣಿಸಿದ್ದಾರೆ.

ರೇಪ್ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾಗಿರುವ ಗುರ್ಮೀತ್ ರಾಮ್ ರಹೀಮ್ ಸಿಂಗ್ ಪೆರೋಲ್ ಮೇಲೆ ಹೊರಬಂದು ಸತ್ಸಂಗ ನಡೆಸುತ್ತಾರೆ. ಸ್ಥಳೀಯ ಚುನಾವಣೆಗಳು ಹತ್ತಿರವಿರುವುದರಿಂದ ಕರ್ನಾಲ್ ಮಾಜಿ ಮೇಯರ್ ಮತ್ತು ಹಿಸ್ಸಾ ಮೇಯರ್ ಅಪರಾಧಿಯ ಆರ್ಶಿವಾದ ಪಡೆಯುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದ್ರುವ್ ರಾಠೀ ಟ್ವೀಟ್ ಮಾಡಿದ್ದಾರೆ.

ತನ್ನ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪಂಚಕುಲ ವಿಶೇ‍ಷ ಸಿಬಿಐ ನ್ಯಾಯಾಲಯವು 2017ರಲ್ಲಿ ಆತನನ್ನು ದೋಷಿ ಎಂದು ಪರಿಗಣಿಸಿ 20 ವರ್ಷಗಳ ಶಿಕ್ಷೆ ವಿಧಿಸಿದೆ. ಅಲ್ಲದೆ ಪತ್ರಕರ್ತನ ಹತ್ಯೆ ಮತ್ತು ಮಾಜಿ ಮ್ಯಾನೇಜರ್‌ನ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಗುರ್ಮೀತ್ ರಾಮ್ ರಹೀಮ್‌ನನ್ನು ಅಪರಾಧಿ ಎಂದು ಘೋಷಿಸಲಾಗಿದೆ. ಆದರೆ ಈ ಒಂದು ವರ್ಷದಲ್ಲಿ ಚುನಾವಣೆಗಳು ಹತ್ತಿರವಿದ್ದಾಗ ಆತನಿಗೆ ಮೂರು ಬಾರಿ ಪೆರೋಲ್ ನೀಡಲಾಗಿದೆ! ಫೆಬ್ರವರಿಯಲ್ಲಿ ಪಂಜಾಬ್ ಚುನಾವಣೆಗಿದ್ದಾಗ, ಜೂನ್‌ನಲ್ಲಿ ಮತ್ತು ಅಕ್ಟೋಬರ್ 14 ರಂದು ಆತನಿಗೆ ಪೆರೋಲ್ ನೀಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ನಾನು ಆಶ್ರಮವನ್ನು ತಲುಪಿದ್ದೇನೆ. ದೇವರು ಎಲ್ಲರಿಗೂ ಸಂತೋಷ ನೀಡಲಿ. ಮೊದಲೇ ಹೇಳಿದಂತೆ ನಂಬಿಕೆ ಇರಲಿ. ನನ್ನ ಮಕ್ಕಳ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಪರಮ ತಂದೆ, ಪರಮಾತ್ಮ, ನಿಮಗೆ ಬಹಳಷ್ಟು ಸಂತೋಷವನ್ನು ನೀಡಲಿ. ಸ್ವಲ್ಪ ಸಮಯದ ಹಿಂದೆ ಇಲ್ಲಿ ಬಂದರು. ನೀವು ಆ ಸಮುದ್ರಗಳನ್ನು ನೆನಪಿಸಿಕೊಳ್ಳುತ್ತೀರಿ. ಸಮುದ್ರಗಳು ಹೆಚ್ಚು ಏರಿವೆ. ನೀವೆಲ್ಲರೂ ಅದನ್ನು ನೋಡುತ್ತಿದ್ದೀರಿ. ನಾನು ನಿಮ್ಮೊಂದಿಗೆ ಮಾತನಾಡುತ್ತಲೇ ಇರುತ್ತೇನೆ. ಮಕ್ಕಳು, ಯುವಕರು ಮತ್ತು ಹಿರಿಯರಿಗೆ ಆಶೀರ್ವಾದ” ಎಂದು ಅವರು ವೀಡಿಯೊದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಇಂದು ಭಾರತದ ಸ್ವಧರ್ಮದ ಮೇಲೆ ಅತ್ಯಂತ ಘೋರ ದಾಳಿಯಾಗುತ್ತಿದೆಯೇ? – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...