Homeಮುಖಪುಟಅತ್ಯಾಚಾರ ಅಪರಾದಿ ರಾಮ್ ರಹೀಮ್‌ಗೆ ಪೆರೋಲ್; ಹರಿಯಾಣ ಸರ್ಕಾರದ ವಿರುದ್ಧ ಅಕಲ್ ತಖ್ತ್ ಮುಖ್ಯಸ್ಥ ವಾಗ್ದಾಳಿ

ಅತ್ಯಾಚಾರ ಅಪರಾದಿ ರಾಮ್ ರಹೀಮ್‌ಗೆ ಪೆರೋಲ್; ಹರಿಯಾಣ ಸರ್ಕಾರದ ವಿರುದ್ಧ ಅಕಲ್ ತಖ್ತ್ ಮುಖ್ಯಸ್ಥ ವಾಗ್ದಾಳಿ

- Advertisement -
- Advertisement -

ಡೇರಾ ಸಚ್ಚಾ ಸೌದಾ ಮುಖ್ಯಸ್ಥ, ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್‌ಗೆ ಪದೇ ಪದೇ ಪೆರೋಲ್ ನೀಡುತ್ತಿರುವ ಹರಿಯಾಣ ಸರ್ಕಾರದ ಕ್ರಮವನ್ನು ಅಕಲ್ ತಖ್ತ್ ಜಥೇದಾರ್ ಗಿಯಾನಿ ರಘುಬೀರ್ ಸಿಂಗ್ ತೀವ್ರವಾಗಿ ಟೀಕಿಸಿದರು, “ಇದು ಸಿಖ್ಖರಿಗೆ ಮಾಡಿದ ಅವಮಾನ ಹಾಗೂ ನ್ಯಾಯಕ್ಕೆ ಬೆದರಿಕೆ” ಎಂದು ಕರೆದಿದ್ದಾರೆ.

ಶಿಕ್ಷೆಗೊಳಗಾದ ಅಪರಾಧಿಗೆ ಪೆರೋಲ್ ನೀಡುವ ಮೂಲಕ ಸರ್ಕಾರ ಸಿಖ್ಖರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತಿದೆ. ಸಿಖ್ ಕೈದಿಗಳನ್ನು ಶಿಕ್ಷೆಯ ಅವಧಿಯನ್ನು ಪೂರ್ಣಗೊಳಿಸಿದ್ದರೂ ದಶಕಗಳ ಕಾಲ ಜೈಲಿನಲ್ಲಿ ಇರಿಸಿದೆ ಎಂದು ಆರೋಪಿಸಿದರು.

“ರಾಜಕೀಯ ಕಾರಣಗಳಿಗಾಗಿ ಸರ್ಕಾರ ಡೇರಾ ಮುಖ್ಯಸ್ಥರನ್ನು ಪದೇಪದೆ ಬಿಡುಗಡೆ ಮಾಡುತ್ತಿರುವುದು ಕಾನೂನಿನ ಮೇಲಿನ ನಂಬಿಕೆಯನ್ನು ನಾಶಪಡಿಸುತ್ತಿದೆ. ಸಿಖ್ ಕೈದಿಗಳು ಜೈಲಿನಲ್ಲಿದ್ದರೂ, ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಗೆ ಹಲವು ಬಾರಿ ಪೆರೋಲ್ ನೀಡಲಾಗುತ್ತಿದೆ” ಎಂದರು.

ಈ ರೀತಿಯ ವರ್ತನೆ ಸಿಖ್ಖರನ್ನು ತಮ್ಮದೇ ದೇಶದಲ್ಲಿ ಪ್ರತ್ಯೇಕಿಸುತ್ತಿದೆ, ಇದು ಭಾರತದ ಪ್ರಜಾಪ್ರಭುತ್ವಕ್ಕೆ ನಾಚಿಕೆಗೇಡಿನ ಸಂಗತಿ. ಸಿಖ್ಖರು ಭಾರತದ ಸ್ವಾತಂತ್ರ್ಯಕ್ಕಾಗಿ ಗಮನಾರ್ಹ ತ್ಯಾಗಗಳನ್ನು ಮಾಡಿದ್ದಾರೆ, ಅವರನ್ನು ಅನ್ಯಾಯವಾಗಿ ನಡೆಸಿಕೊಳ್ಳಬಾರದು ಎಂದು ಅವರು ನೆನಪಿಸಿದರು.

ಎರಡು ಅತ್ಯಾಚಾರ ಪ್ರಕರಣಗಳಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಮ್‌ಗೆ ಮಂಗಳವಾರ ಒಂದು ತಿಂಗಳ ಕಾಲ ಪೆರೋಲ್ ನೀಡಲಾಗಿದೆ. ಫೆಬ್ರವರಿ 5 ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಈ ಪೆರೋಲ್ ಬಂದಿದೆ.

ಇದನ್ನೂ ಓದಿ; ಭಗವಂತ್ ಮಾನ್ ನಿವಾಸದ ಮೇಲೆ ದೆಹಲಿ ಪೊಲೀಸರಿಂದ ದಾಳಿ: ಎಎಪಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...