Homeಮುಖಪುಟಅತ್ಯಾಚಾರ ಅಪರಾಧಿ ಗುರ್ಮೀತ್‌ ಸಿಂಗ್‌ಗೆ ಮತ್ತೆ ಪೆರೋಲ್‌: ನಾಲ್ಕು ವರ್ಷಗಳಲ್ಲಿ 9ನೇ ಬಾರಿ ಬಿಡುಗಡೆ ಭಾಗ್ಯ!

ಅತ್ಯಾಚಾರ ಅಪರಾಧಿ ಗುರ್ಮೀತ್‌ ಸಿಂಗ್‌ಗೆ ಮತ್ತೆ ಪೆರೋಲ್‌: ನಾಲ್ಕು ವರ್ಷಗಳಲ್ಲಿ 9ನೇ ಬಾರಿ ಬಿಡುಗಡೆ ಭಾಗ್ಯ!

- Advertisement -
- Advertisement -

ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹರ್ಯಾಣದ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ಗೆ ಮತ್ತೆ ಪೆರೋಲ್‌ ಮಂಜೂರಾಗಿದೆ.

ಈ ಬಾರಿ ಗುರ್ಮೀತ್ ಸಿಂಗ್‌ಗೆ 50 ದಿನಗಳ ಪೆರೋಲ್ ನೀಡಲಾಗಿದೆ. ಅತ್ಯಾಚಾರ ಪ್ರಕರಣದ ಅಪರಾಧಿಯಾಗಿರುವ ಈತ, ಕಳೆದ 24 ತಿಂಗಳಲ್ಲಿ ಏಳನೇ ಬಾರಿ ಮತ್ತು ಕಳೆದ ನಾಲ್ಕು ವರ್ಷಗಳಲ್ಲಿ ಒಂಬತ್ತನೇ ಬಾರಿ ಪೆರೋಲ್ ಪಡೆದಿದ್ದಾನೆ.

ಹರ್ಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಲ್ಲಿರುವ ಗುರ್ಮೀತ್ ಸಿಂಗ್‌ಗೆ ಕಳೆದ ವರ್ಷ ನವೆಂಬರ್‌ನಲ್ಲಿ 21 ದಿನ, ಜುಲೈನಲ್ಲಿ 30 ದಿನ ಮತ್ತು ಜನವರಿಯಲ್ಲಿ ಡೇರಾ ಸಚ್ಚಾ ಸೌಧದ ಮಾಜಿ ಮುಖ್ಯಸ್ಥ ಶಾ ಸತ್ನಾಮ್ ಅವರ ಜನ್ಮ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು 40 ದಿನ ಸೇರಿ, ಒಟ್ಟು 91 ದಿನಗಳ ಪೆರೋಲ್ ನೀಡಲಾಗಿತ್ತು.

ಕಳೆದ ವರ್ಷ ಪೆರೋಲ್‌ ಮೇಲೆ ಜೈಲಿನಿಂದ ಹೊರಗಿದ್ದಾಗಲೇ ಗುರ್ಮೀತ್ ಸಿಂಗ್ ತಲವಾರಿನಿಂದ ತನ್ನ ಹುಟ್ಟು ಹಬ್ಬದ ಕೇಕ್ ಕತ್ತರಿಸಿದ್ದ. ಈ ಕುರಿತ ಫೋಟೋ, ವಿಡಿಯೋ ವೈರಲ್ ಆಗಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಆ ವೇಳೆ ” ನಾನು ಐದು ವರ್ಷಗಳ ಬಳಿಕ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸುತ್ತಿದ್ದೇನೆ. ಒಟ್ಟು ಐದು ಕೇಕ್ ಕತ್ತರಿಸಬೇಕಿದೆ. ಇದು ಮೊದಲನೆಯದ್ದು” ಎಂದು ಗುರ್ಮೀತ್ ಸಿಂಗ್ ಹೇಳಿದ್ದ ವಿಡಿಯೋ ವೈರಲ್ ಆಗಿತ್ತು.

ಆಯುಧಗಳ ಸಾರ್ವಜನಿಕ ಪ್ರದರ್ಶನವನ್ನು (ಕತ್ತಿಯಿಂದ ಕೇಕ್ ಕತ್ತರಿಸುವುದು ಆ ವರ್ಗಕ್ಕೆ ಸೇರುತ್ತದೆ) ಶಸ್ತ್ರಾಸ್ತ್ರ ಕಾಯಿದೆಯಡಿಯಲ್ಲಿ ನಿಷೇಧಿಸಲಾಗಿದೆ. ಆದರೆ, ಗುರ್ಮೀತ್ ಮೇಲೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಗುರ್ಮೀತ್ ಸಿಂಗ್‌ಗೆ ಜನವರಿ 2023ರಲ್ಲಿ ಲಭಿಸಿದ್ದ ಪೆರೋಲ್, ವಿಶೇಷವಾಗಿ ಹರ್ಯಾಣದ ಮುಖ್ಯಮಂತ್ರಿ ಮನೋಹರಲಾಲ್‌ ಖಟ್ಟರ್ ಅದನ್ನು ಸಮರ್ಥಿಸಿಕೊಂಡ ಬಳಿಕ ವಿವಾದವನ್ನು ಸೃಷ್ಟಿಸಿತ್ತು.

“ರಾಮ್‌ ರಹೀಮ್ ಗೆ ಪೆರೋಲ್ ಸಿಕ್ಕಿರುವುದು ನನಗೆ ಗೊತ್ತಿಲ್ಲ. ಆದರೆ, ಪೆರೋಲ್ ಸಿಕ್ಕಿದ್ದು ಹೌದಾದರೆ ಎಲ್ಲ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿದ ಬಳಿಕವೇ ಅದು ಮಂಜೂರಾಗಿರಬೇಕು ಮತ್ತು ಅದು ಆತನ ಹಕ್ಕು ಆಗಿದೆ. ಅದರಲ್ಲಿ ನಾನು ಮಧ್ಯಪ್ರವೇಶ ಮಾಡುವುದಿಲ್ಲ” ಎಂದು ಖಟ್ಟರ್ ಹೇಳಿದ್ದರು.

2022ರಲ್ಲಿಯೂ ಹರಿಯಾಣದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಗುರ್ಮೀತ್‌ಗೆ ಮೂರು ಸಲ ಪೆರೋಲ್ ನೀಡಿತ್ತು. ತನ್ನ ತಾಯಿಯನ್ನು ಭೇಟಿಯಾಗಲು 2021 ಮತ್ತು 2020ರಲ್ಲೂ ಆತನಿಗೆ ತಲಾ ಒಂದು ಬಾರಿ ಪೆರೋಲ್ ಲಭಿಸಿತ್ತು.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಹರ್ಯಾಣದಲ್ಲಿ ಪಂಚಾಯತ್ ಚುನಾವಣೆಗೆ ಮುನ್ನ ಸಿಂಗ್‌ಗೆ ಪೆರೋಲ್ ಲಭಿಸಿದ್ದಾಗ ಆತ ನಡೆಸಿದ್ದ ‘ವರ್ಚುವಲ್ ಸತ್ಸಂಗ’ ದಲ್ಲಿ ಹಲವಾರು ಬಿಜೆಪಿ ನಾಯಕರು ಭಾಗವಹಿಸಿದ್ದರು. ಇದರ ವಿರುದ್ದ ಪ್ರತಿಪಕ್ಷಗಳು ಕಿಡಿಕಾರಿತ್ತು.

ಹರ್ಯಾಣದ ಪಂಚಕುಲಾದ ವಿಶೇಷ ಸಿಬಿಐ ನ್ಯಾಯಾಲಯವು ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆಗಸ್ಟ್ 2017ರಲ್ಲಿ ಗುರ್ಮೀತ್‌ನನ್ನು ಅಪರಾಧಿ ಎಂದು ಘೋಷಿಸಿತ್ತು.

ಇದನ್ನೂ ಓದಿ: ಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...