Homeಕರ್ನಾಟಕಅಲೆಮಾರಿ ಸಮುದಾಯದ ಯುವತಿಯರ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಅಲೆಮಾರಿ ಸಮುದಾಯದ ಯುವತಿಯರ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

- Advertisement -
- Advertisement -

ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ಚಿಂದಿ ಆಯಲು ಹೋಗಿದ್ದ ಬುಡ್ಗ ಜಂಗಮ ಅಲೆಮಾರಿ ಸಮುದಾಯದ ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ (ಫೆ.25) ಸಂಜೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡ ವಡ್ಡಗೆರೆ ನಾಗರಾಜಯ್ಯ ಅವರು, “ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ ಕೊಲೆ ನಡೆದು ಹತ್ತು ದಿನಗಳಾಗಿವೆ. ಆದರೆ, ಈವರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸದಿರುವುದು ಖಂಡನೀಯ. ಇದು ಹಲವು ಅನುಮಾನಗಳಿವೆ ಎಡೆ ಮಾಡಿಕೊಟ್ಟಿದೆ. ಕರ್ನಾಟಕ ಎಂದಲ್ಲ, ಇಡೀ ದೇಶದಲ್ಲಿ ಪ್ರಸ್ತುತ ದಲಿತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ನಡೆಯುತ್ತಿದೆ. ಆದರೆ, ಸರ್ಕಾರಗಳು, ಪೊಲೀಸರು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಗಳ ಪರ ನಿಲ್ಲಬೇಕು. ಅತ್ಯಾಚಾರವೆಸಗಿ, ಕೊಲೆಗೈದವರನ್ನು ತಕ್ಷಣ ಬಂಧಿಸಬೇಕು” ಎಂದು ಒತ್ತಾಯಿಸಿದರು.

ಬರಹಗಾರ, ದಲಿತ ಮುಖಂಡ ಹುಲಿಕುಂಟೆ ಮೂರ್ತಿ ಮಾತನಾಡಿ, “ಆರೋಪಿಗಳು ಸಂತ್ರಸ್ತರ ಮನೆಗಳ ಬಳಿ ಹೋಗಿ ಧಮ್ಕಿ ಹಾಕಿರುವುದು ಗೊತ್ತಾಗಿದೆ. ಆದರೆ, ಪೊಲೀಸರು ಆರೋಪಿಗಳು ಸಿಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಿಮಗೆ ಬಾಬಾ ಸಾಹೇಬರ ಮೇಲೆ ನಿಜಕ್ಕೂ ಗೌರವ ಇದ್ದರೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದರು.

ಹಿರಿಯ ಚಿಂತಕ ಜಿ ರಾಮಕೃಷ್ಣ ಅವರು ಮಾತನಾಡಿ, “ಈ ದೇಶದಲ್ಲಿ ನಡೆಯುತ್ತಿರುವ ಅನಾಚಾರ, ಅತ್ಯಾಚಾರ ಗಮನಿಸಿದರೆ ನಾವು ಮನುಷ್ಯರಾಗಿ ಬದುಕುತ್ತಿದ್ದೇವಾ ಎಂಬ ಅನುಮಾನ ಮೂಡುತ್ತಿದೆ. ಉತ್ತರ ಪ್ರದೇಶದಲ್ಲಿ ದಲಿತ ಹೆಣ್ಣು ಮಗಳು ನದಿಯಲ್ಲಿ ಸ್ನಾನ ಮಾಡಲು ಇಳಿದಳೆಂದು ಕ್ರೂರಿಗಳು ಆಕೆಯನ್ನು ಬಡಿಗೆಗಳಿಂದ ಹೊಡೆದು ಸಾಯಿಸಿದ್ದರು. ಇಂಥವರಿಗೆ ರಕ್ಷಣೆ ಕೊಡುವ ಸಂಸ್ಕೃತಿ ನಮ್ಮ ದೇಶದಲ್ಲಿ ಇದೆ. ಇಂತಹ ಸಮಾಜದಲ್ಲಿ ನಾವಿನ್ನೂ ಫ್ಯಾಸಿಸ್ಟ್‌ ಆಗಿದ್ದೀವಾ, ಅರೆ ಫ್ಯಾಸಿಸ್ಟ್ ಆಗಿದ್ದೀವಾ, ಸೆಮಿ ಫ್ಯಾಸಿಸ್ಟ್ ಆಗಿದ್ದೀವಾ ಎಂದು ಚರ್ಚೆ ಮಾಡುತ್ತಿದ್ದೇವೆ. ದೇಶದೆಲ್ಲೆಡೆ ಈಗ ಪುನೀತರಾದ ಜನರೇ ಇರುವುದು. ಯಮುನೆಯಲ್ಲಿ ಸ್ನಾನ ಮಾಡಿ ಬಂದಿದ್ದಾರೆ. ಐವತ್ತು ಕೋಟಿ ಜನರಲ್ಲಿ ನಲುವತ್ತು ಕೋಟಿ ಜನರಿಗೆ ಒಂದು ತರಹದ ನೀರು, ಇನ್ನು ಹತ್ತು ಕೋಟಿ ಜನರಿಗೆ ಒಂದು ತರಹದ ನೀರು. ನಾರಾಯಣ ಮೂರ್ತಿ, ಸುಧಾಮೂರ್ತಿ ತರದವರಿಗೆ ಬೇಲಿ ಕಟ್ಟಿ ಚೆನ್ನಾಗಿ ನೀರು ಹರಿಯುವ ಜಾಗ, ಸಾಮಾನ್ಯ ಜನರಿಗೆ ಚರಂಡಿ ನೀರು ಸೇರುವ ಜಾಗ. ಇದೇ ರೀತಿ ಈ ಅತ್ಯಾಚಾರ ವಿಚಾರದಲ್ಲೂ ಬಡವರಿಗೆ ಒಂದು ನ್ಯಾಯ, ಉಳ್ಳವರಿಗೆ ಮತ್ತೊಂದು ನ್ಯಾಯ ಎಂಬಂತಾಗಿದೆ. ಯಾದಗಿರಿಯೇನು ಬೆಂಗಳೂರಲ್ಲ, ಪುಟ್ಟ ಹಳ್ಳಿ. ಆರೋಪಿಗಳನ್ನು ಪತ್ತೆ ಹಚ್ಚುವುದು ಅಷ್ಟೇನೂ ಕಷ್ಟ ಅಲ್ಲ. ಆದರೆ, ಇದು ಅಧಿಕಾರಿಗಳಿಗೆ ಬಡವರ ಮೇಲೆ ಇರುವ ಅಸಡ್ಡೆ ತೋರಿಸುತ್ತದೆ” ಎಂದು ಹೇಳಿದರು.

“ಇಡೀ ದೇಶದಲ್ಲಿ ಯಾವುದೇ ಸರ್ಕಾರ, ಅಲೆಮಾರಿಗಳಿಗೆ ಇದುವರೆಗೆ ಯಾವುದೇ ರೀತಿಯಲ್ಲಿ ರಕ್ಷಣೆ ಕೊಟ್ಟಿಲ್ಲ, ಮನೆ ಕೊಟ್ಟಿಲ್ಲ. ಯಾಕೆ ಅಲೆಮಾರಿಗಳಾಗಿದ್ದಾರೆ ಎಂಬ ಮೂಲ ಪ್ರಶ್ನೆ ಕೇಳಬೇಕಾಗಿದೆ. ಯಾರೂ ಸರ್ಕಾರಗಳ ಮೇಲೆ ಒತ್ತಡ ಹಾಕುತ್ತಿಲ್ಲ. ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ನಾವು ಯಾಕೆ ಹೀಗಿದ್ದೇವೆ? ನಾವೀಗ ಒಟ್ಟಾಗಿ ಅಲೆಮಾರಿಗಳಿಗೆ ಭೂಮಿ ಕೊಡಿ ನೌಕರಿ ಕೊಡಿ ಎಂದು ಕೇಳಬೇಕಿದೆ. ಯಾದಗಿರಿಯ ಅತ್ಯಾಚಾರ ಪ್ರಕರಣದಲ್ಲಿ ಅರೋಪಿಗಳ ಬಂಧನ ಸರ್ಕಾರದ ಕೈಯಲ್ಲಿ ಆಗಲ್ಲ ಅಂತಲ್ಲ, ಪೊಲೀಸರು ಮನಸ್ಸು ಮಾಡಿದರೆ ಆರೋಪಿಗಳನ್ನು ಬಂಧಿಸುವುದು ಕಷ್ಟವೇನಲ್ಲ. ಹಾಗಾಗಿ, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು” ಎಂದು ಅಲೆಮಾರಿ ಸಮುದಾಯಗಳ ಹೋರಾಟಗಾರರು ಎಚ್ಚರಿಸಿದರು.

‘ತಮಟೆ ಮೀಡಿಯಾ’ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ಅಲೆಮಾರಿ ಬಡಕಟ್ಟು ಮಹಾಸಭಾ, ಸಫಾಯಿ ಕರ್ಮಚಾರಿ ಕಾವಲು ಸಮಿತಿ ಕರ್ನಾಟ, ಸುಡುಗಾಡು ಸಿದ್ದ ಮಹಾಸಂಘ, ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ದಲಿತ ವಿದ್ಯಾರ್ಥಿ ಪರಿಷತ್ತು, ಕರ್ನಾಟಕ ಜನಶಕ್ತಿ, ನಾವೆದ್ದು ನಿಲ್ಲದಿದ್ದರೆ, ಜಾಗೃತ ಕರ್ನಾಟಕ, AICCTU, AIPWA ಸೇರಿದಂತೆ ಹಲವು ಸಂಘಟನೆಯವರು ಪಾಲ್ಗೊಂಡಿದ್ದರು.

ಕರ್ನಾಟಕಕ್ಕೆ ಸಂಚರಿಸುವ ಬಸ್‌ಗಳಲ್ಲಿ ಪೊಲೀಸ್‌ ನಿಯೋಜನೆಗೆ ಮುಂದಾದ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...