Homeಮುಖಪುಟಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಆರೋಪಿಯ ಗಲ್ಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಆರೋಪಿಯ ಗಲ್ಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ

- Advertisement -
- Advertisement -

2018 ರಲ್ಲಿ ಡೆಹ್ರಾಡೂನ್‌ನಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದಿದ್ದ ಆರೋಪಿಯೊಬ್ಬರಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವಿಚಾರಣಾ ನ್ಯಾಯಾಲಯವು ನೀಡಿದ್ದ ಮರಣದಂಡನೆಯನ್ನು ಅನುಮೋದಿಸಿದ್ದ ಉತ್ತರಾಖಂಡ ಹೈಕೋರ್ಟ್‌ನ ಜನವರಿ 2020 ರ ತೀರ್ಪಿನ ವಿರುದ್ಧ ಆರೋಪಿ ಸುಪ್ರೀಂ ಕೋರ್ಟ್‌‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅರ್ಜಿದಾರನ ಮಾನಸಿಕ ಸ್ಥಿತಿಯನ್ನು ಮೌಲ್ಯಮಾಪನವನ್ನು ಮಾಡಿ ಅದರ ವರದಿಯನ್ನು ನೀಡುವಂತೆ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠ ಸೂಚಿಸಿದೆ.

“ಪ್ರಕರಣದಲ್ಲಿ ಹೆಚ್ಚಿನ ಪರಿಗಣನೆಗೆ ಬಾಕಿಯಿದೆ, ಅರ್ಜಿದಾರನಿಗೆ ನೀಡಲಾದ ಮರಣದಂಡನೆಯ ಕಾರ್ಯಾಚರಣೆಯನ್ನು ತಡೆಹಿಡಿಯಲಾಗುತ್ತದೆ. ಈ ಸಂಬಂಧದ ಸೂಚನೆಯನ್ನು ತಕ್ಷಣವೇ ಸಂಬಂಧಪಟ್ಟ ಕಾರಾಗೃಹಕ್ಕೆ ಕಳುಹಿಸಲಿ” ಎಂದು ನ್ಯಾಯಮೂರ್ತಿಗಳಾದ ಎಸ್‌ಆರ್ ಭಟ್ ಮತ್ತು ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠ ಮಾರ್ಚ್ 2 ಆದೇಶದಲ್ಲಿ ಹೇಳಿದೆ.

ಇದನ್ನೂ ಓದಿ: ಕೊಲೆ ಯತ್ನ ಪ್ರಕರಣ: ವಕೀಲ ಜಗದೀಶ್‌ಗೆ ಜಾಮೀನು, ಇನ್ನೊಂದು ಪ್ರಕರಣದ ವಿಚಾರಣೆ ಮಾ.7ಕ್ಕೆ

ಈ ವಿಷಯದಲ್ಲಿ ಸಂಪೂರ್ಣ ವರದಿ ಪಡೆಯುವ ಸಲುವಾಗಿ, ಅಪರಾಧಿ ಜೈಲಿನಲ್ಲಿದ್ದಾಗ ಮಾಡಿದ ಕೆಲಸಗಳ ಸ್ವರೂಪದ ಬಗ್ಗೆ ಸಂಬಂಧಿಸಿದ ಜೈಲು ಆಡಳಿತ ಏಪ್ರಿಲ್ 25 ರೊಳಗೆ ವರದಿಯನ್ನು ತನ್ನ ಮುಂದೆ ಇಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜೊತೆಗೆ ನ್ಯಾಯದ ಹಿತಾಸಕ್ತಿಗಾಗಿ ನಾವು ಮೇಲ್ಮನವಿದಾರರ ಮಾನಸಿಕ ಸ್ಥಿತಿಗತಿಯ ಮೌಲ್ಯಮಾಪನವನ್ನು ಪಡೆಯಬೇಕೆಂದು ಭಾವಿಸುತ್ತೇವೆ” ಎಂದು ಪೀಠ ತಿಳಿಸಿದೆ.

ಘಟನೆ ಹಿನ್ನೆಲೆ: 

ಜುಲೈ 2018 ರಲ್ಲಿ ಡೆಹ್ರಾಡೂನ್‌ನಲ್ಲಿ 11 ವರ್ಷದ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಅಪರಾಧಿ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ತನ್ನ ಮಗಳು ನಾಮತ್ತೆಯಾಗಿದ್ದಾರೆ. ಮಕ್ಕಳ ಬಳಿ ತನ್ನ ಮಗಳ ಬಗ್ಗೆ ವಿಚಾರಿಸಿದಾಗ ಆರೋಪಿ ಜೈ ಪ್ರಕಾಶ್ ಆಕೆಯನ್ನು ತನ್ನ ಗುಡಿಸಲಿನ ಕಡೆಗೆ ಕರೆದೊಯ್ದಿದ್ದಾನೆ ಎಂದು ತಿಳಿಸಲಾಗಿತ್ತು. ಗುಡಿಸಲಿನಲ್ಲಿ ಸಂತ್ರಸ್ತೆಯ ಶವ ಪತ್ತೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ವಿಚಾರಣೆ ವೇಳೆ ಆರೋಪಿಯು ನಿರಪರಾಧಿ ಎಂದು ಹೇಳಿಕೊಂಡಿದ್ದು, ಈ ಪ್ರಕರಣದಲ್ಲಿ ತನ್ನನ್ನು ತಪ್ಪಾಗಿ ಸಿಲುಕಿಸಲಾಗಿದೆ ಎಂದು ಹೇಳಿದ್ದರು.

ಆರೋಪಿ ಜೈ ಪ್ರಕಾಶ್ ವಿರುದ್ಧ ಅವರನ್ನು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಅತ್ಯಾಚಾರ ಮತ್ತು ಕೊಲೆ ಸೇರಿದಂತೆ ಪೋಕ್ಸೊ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಆಗಸ್ಟ್ 2019 ರಲ್ಲಿ ವಿಚಾರಣಾ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿತ್ತು. ಜೊತೆಗೆ  ಆರೋಪಿಯು ಅಸಹಾಯಕಳಾದ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂಬುದನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ಯಶಸ್ವಿಯಾಗಿದೆ ಎಂದು ಹೈಕೋರ್ಟ್ ಹೇಳಿತ್ತು.


ಇದನ್ನೂ ಓದಿ: ನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...

ನ್ಯಾಷನಲ್ ಹೆರಾಲ್ಡ್ ಪ್ರಕರಣ : ಮೋದಿ, ಅಮಿತ್ ಶಾ ರಾಜೀನಾಮೆಗೆ ಖರ್ಗೆ ಒತ್ತಾಯ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ದ ಜಾರಿ ನಿರ್ದೇನಾಲಯ (ಇಡಿ) ದಾಖಲಿಸಿದ್ದ ಹಣ ಅಕ್ರಮ ವರ್ಗಾವಣೆ (ಪಿಎಂಎಲ್‌ಎ) ದೂರು ಸ್ವೀಕರಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿರುವುದನ್ನು ಕಾಂಗ್ರೆಸ್‌ ಸ್ವಾಗತಿಸಿದೆ. ಬಿಜೆಪಿ...

ಹಿಜಾಬ್ ಎಳೆದ ನಿತೀಶ್ ಕುಮಾರ್: ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ ವೈದ್ಯೆ?

ಆಯುಷ್ ವೈದ್ಯೆ ನುಸ್ರತ್ ಪರ್ವೀನ್ ಇತ್ತೀಚೆಗೆ ತಮ್ಮ ನೇಮಕಾತಿ ಪತ್ರವನ್ನು ಪಡೆದಿದ್ದರೂ ಬಿಹಾರ ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪಾಟ್ನಾದಲ್ಲಿ ನಡೆದ ಸಕಾfರಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ...

ಮಹಿಳೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನ ವಕೀಲರಿಂದ ದೂರು

ಬೆಂಗಳೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳೆಯೊಬ್ಬರ ಹಿಜಾಬ್ ಅನ್ನು ಹಿಡಿದ ಎಳೆದ ವಿಚಾರಕ್ಕೆ ಸಂಬಂಧ ಪಟ್ಟಂತೆ ಅವರ ವಿರುದ್ಧ ಬೆಂಗಳೂರು ಮೂಲದ ವಕೀಲರೊಬ್ಬರು ಮಂಗಳವಾರ ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್...

ಕೇರಳ| ನಿರ್ಗಮಿತ ದಲಿತ ಪಂಚಾಯತ್ ಅಧ್ಯಕ್ಷರ ವಿರುದ್ಧ ‘ಶುದ್ಧೀಕರಣ ಆಚರಣೆ’; ವರದಿ ಕೇಳಿದ ಎಸ್‌ಸಿ/ಎಸ್‌ಟಿ ಆಯೋಗ

ಕೋಝಿಕ್ಕೋಡ್‌ನ ಪೆರಂಬ್ರಾದ ಚಂಗರೋತ್ ಪಂಚಾಯತ್ ಕಚೇರಿಯ ಮುಂದೆ ದಲಿತ ಸಮುದಾಯಕ್ಕೆ ಸೇರಿದ ನಿರ್ಗಮಿತ ಅಧ್ಯಕ್ಷ ಉನ್ನಿ ವೆಂಗೇರಿ ಅವರನ್ನು ಅವಮಾನಿಸಲು "ಶುದ್ಧೀಕರಣ ಆಚರಣೆ" ನಡೆಸಲಾಗಿದೆ ಎಂಬ ಆರೋಪದ ಮೇಲೆ ಕೇರಳ ರಾಜ್ಯ ಪರಿಶಿಷ್ಟ...

ಬೆಳ್ತಂಗಡಿ | ಆಭರಣ ಮಳಿಗೆ ವ್ಯವಸ್ಥಾಪಕನಿಂದ ಮೂವರು ವಿದ್ಯಾರ್ಥಿಗಳಿಗೆ ಹಲ್ಲೆ : ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪಟ್ಟಣದಲ್ಲಿ ಸೋಮವಾರ (ಡಿ.16) ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಂ ವಿದ್ಯಾರ್ಥಿಗಳಿಗೆ ಆಭರಣ ಮಳಿಗೆಯ ವ್ಯವಸ್ಥಾಪಕ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ...

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ರಾಜೀನಾಮೆ

ಡಿಸೆಂಬರ್ 13ರಂದು ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಭೇಟಿ ನೀಡಿದ ಸಂದರ್ಭದಲ್ಲಿ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅವ್ಯವಸ್ಥೆ ಉಂಟಾದ ಹಿನ್ನೆಲೆ, ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಅವರು ತನ್ನ...