Homeಮುಖಪುಟರೈತರ ಪರ ವರದಿ ಮಾಡಿದ ಪತ್ರಕರ್ತೆಗೆ ಅತ್ಯಾಚಾರ, ಕೊಲೆ ಬೆದರಿಕೆ: ಎಬಿವಿಪಿ ಸದಸ್ಯನ ಬಂಧನ

ರೈತರ ಪರ ವರದಿ ಮಾಡಿದ ಪತ್ರಕರ್ತೆಗೆ ಅತ್ಯಾಚಾರ, ಕೊಲೆ ಬೆದರಿಕೆ: ಎಬಿವಿಪಿ ಸದಸ್ಯನ ಬಂಧನ

ಪತ್ರಕರ್ತೆಯು ರೈತ ಪ್ರತಿಭಟನೆ ಪರ ವರದಿ ಮಾಡುತ್ತಿದ್ದುದು ತನಗೆ ಕೋಪ ತರಿಸಿದ್ದರಿಂದ ಬೆದರಿಕೆ ಸಂದೇಶ ಕಳಿಸಿದ್ದೆ ಎಂದು ಆರೋಪಿ ಕಪಿಲ್ ವಿಯಾನ್ ಒಪ್ಪಿಕೊಂಡಿದ್ದಾನೆ.

- Advertisement -
- Advertisement -

ಸ್ವತಂತ್ರ ಪತ್ರಕರ್ತೆ ಮತ್ತು ದಿ ವೈರ್‌ಗೆ ಆಗಾಗ್ಗೆ ಕೊಡುಗೆ ನೀಡುವ ರೋಹಿಣಿ ಸಿಂಗ್‌ಗೆ ಕೊಲೆ ಮತ್ತು ಅತ್ಯಾಚಾರ ಬೆದರಿಕೆಗಳ ಸಂದೇಶಗಳನ್ನು ಕಳುಹಿಸಿದ್ದಕ್ಕಾಗಿ ಎಬಿವಿಪಿ ಜೊತೆ ಸಬಂಧವಿರುವ 26 ವರ್ಷದ ಕಾನೂನು ವಿದ್ಯಾರ್ಥಿ ಕಪಿಲ್ ವಿಯಾನ್ ಎಂಬಾತನನ್ನು ರಾಜಸ್ಥಾನ್ ಪೊಲೀಸರು ಬಂಧಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ರೈತರ ಟ್ರಾಕ್ಟರ್ ರ‍್ಯಾಲಿ ಕುರಿತು ರೋಹಿಣಿ ಸಿಂಗ್ ಮಾಡಿದ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ಕಪಿಲ್ ವಿಯಾನ್ ರೋಹಿಣಿ ಅವರಿಗೆ ನೇರ ಸಂದೇಶ ಕಳುಹಿಸಿ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ್ದ. ಬೆದರಿಕೆಗಳ ಬಗ್ಗೆ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದ ರೋಹಿಣಿ ಸಿಂಗ್ ಉದಯಪುರದ ಉನ್ನತ ಪೊಲೀಸರು ಮತ್ತು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಟ್ಯಾಗ್ ಮಾಡಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

ಇದರ ಬೆನ್ನಲ್ಲೇ ತಕ್ಷಣ ಕ್ರಮ ಕೈಗೊಳ್ಳುವಂತೆ ಉದಯಪುರ ಐಜಿ ಮತ್ತು ಎಸ್‌ಪಿಗೆ ಗೆಹ್ಲೋಟ್ ನಿರ್ದೇಶನ ನೀಡಿದರು. ವಿಯಾನ್‌ನನ್ನು ಉದಯಪುರದ ಸೆಮಾರಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಆತ ಬಿಜೆಪಿಯ ವಿದ್ಯಾರ್ಥಿ ವಿಭಾಗ ಅಖಿಲ್ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜೊತೆ ಸಂಬಂಧ ಹೊಂದಿದ್ದಾನೆಂದು ಕಂಡುಬಂದಿದೆ.

ಉದಯಪುರ ವ್ಯಾಪ್ತಿಯ ಇನ್ಸ್ಪೆಕ್ಟರ್ ಜನರಲ್, ಸತ್ಯವೀರ್ ಸಿಂಗ್, ಕಪಿಲ್ ವಿಯಾನ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ದೃಢಪಡಿಸಿದ್ದಾರೆ.

“ನಮ್ಮ ತಂಡವು ಸೆಮರಿ ನಿವಾಸಿ ಕಪಿಲ್ ವಿಯಾನ್‌ನನ್ನು ಬಂಧಿಸಿದೆ. ಅವನು ಪತ್ರಕರ್ತೆ ರೋಹಿಣಿ ಸಿಂಗ್ ಅವರಿಗೆ ಕೊಲೆ ಮತ್ತು ಅತ್ಯಾಚಾರ ಬೆದರಿಕೆಗಳನ್ನು ಕಳುಹಿಸುತ್ತಿದ್ದ” ಎಂದು ಐಜಿಪಿ ಟ್ವೀಟ್ ಮಾಡಿದ್ದಾರೆ.

ರೈತರ ರ‍್ಯಾಲಿಯ ಬಗ್ಗೆ ರೋಹಿಣಿ ಸಿಂಗ್ ವರದಿ ಮಾಡಿರುವುದು ತನಗೆ ಕೋಪ ತಂದಿತ್ತು. ಹಾಗಾಗಿ ಬೆದರಿಕೆ ಸಂದೇಶ ಕಳಿಸಿದ್ದೆ ಎಂದು ವಿಯಾನ್ ಪೊಲೀಸರಿಗೆ ತಿಳಿಸಿದ್ದಾನೆ.

ತ್ವರಿತ ಕ್ರಮ ಕೈಗೊಂಡಿದ್ದಾಗಿ ಪತ್ರಕರ್ತೆ ರೋಹಿಣಿ ಸಿಂಗ್ ರಾಜಸ್ಥಾನ ಸಿಎಂ ಮತ್ತು ಉದಯಪುರ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ. ಭಿನ್ನಾಭಿಪ್ರಾಯವಿದ್ದ ಕಾರಣಕ್ಕೆ ಯಾರೂ ಯಾರಿಗೂ ಯಾವುದೇ ಬೆದರಿಕೆ ಹಾಕುವುದು ಸರಿಯಲ್ಲ. ಮಹಿಳೆಯರಿಗೆ ಸಮಾಜ ಮತ್ತು ಅಂತರ್ಜಾಲ ಎರಡೂ ಕಡೆ ರಕ್ಷಣೆ ಬೇಕು ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ರೈತರು ಪ್ರತಿಭಟನೆಗೆ ತಲುಪದಂತೆ ರೈಲನ್ನೇ ತಿರುಗಿಸಿದ ಕೇಂದ್ರ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...