ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಹತ್ತು ವರ್ಷದ ವಿದ್ಯಾರ್ಥಿನಿಯನ್ನು ಶಾಲೆಯ ಪ್ರಾಂಶುಪಾಲನೇ ಅತ್ಯಾಚಾರಗೈದಿರುವ ಅಮಾನುಷ ಪ್ರಕರಣ ವರದಿಯಾಗಿದೆ.
ವರ್ತೂರು ಸಮೀಪದ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿದ್ದು, ಆರೋಪಿ ಶಾಲಾ ಸಂಸ್ಥಾಪಕ ಮತ್ತು ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 3ರ ಗುರುವಾರ 10 ವರ್ಷದ ವಿದ್ಯಾರ್ಥಿನಿ ಶಾಲೆಗೆ ತೆರಳಿದ್ದಳು. ಶಾಲೆಗೆ ಬಂದ ವಿದ್ಯಾರ್ಥಿನಿಯನ್ನು ಕಂಡ ಪ್ರಾಂಶುಪಾಲ ವಿದ್ಯಾರ್ಥಿನಿಯನ್ನು ಖಾಲಿಯಾಗಿದ್ದ ಕೊಠಡಿಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ.
ಮನೆಗೆ ಬಂದ ಬಳಿಕ ವಿದ್ಯಾರ್ಥಿನಿ ನೋವು ತಾಳದೆ ಒದ್ದಾಡುತ್ತಿರುವುದನ್ನು ಗಮನಿಸಿ, ಪೋಷಕರು ಮಗಳ ಬಳಿ ವಿಚಾರಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಸ್ನಾನ ಮಾಡಿಸಿ ಕರೆತರುವಾಗ ರಕ್ತದ ಕಲೆಗಳು ಕಂಡುಬಂದಿದ್ದು, ಈ ವಿಚಾರವಾಗಿ ಕೇಳಿದಾಗ ಬಾಲಕಿ ನಡೆದ ಘಟನೆ ವಿವರಿಸಿದ್ದಾಳೆ.
ಮೊದಲು ಪ್ರಾಂಶುಪಾಲರ ಕೊಠಡಿಗೆ ಕರೆದುಕೊಂಡು ಹೋದರು. ವಿಶ್ರಾಂತಿ ಪಡೆಯುವಂತೆ ಹೇಳಿ ಅತ್ಯಾಚಾರ ಎಸಗಿದರು. ನಂತರ ಕೇಕ್ ತಿನ್ನಿಸಿ ಕಳುಹಿಸಿದರು ಎಂದು ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ಪ್ರಾಂಶುಪಾಲನ ಕೃತ್ಯವನ್ನು ವಿವರಿಸಿದ್ದಾಳೆ.
ಸದ್ಯ ಮಗುವಿಗೆ ರಕ್ತಸ್ರಾವ ಹೆಚ್ಚಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ವರದಿಯಾಗಿದೆ.
ಅತ್ಯಾಚಾರಕ್ಕೊಳಗಾದ 10 ವರ್ಷದ ಬಾಲಕಿ ನರದೌರ್ಬಲ್ಯ(Mild Dyslexia oct) ಎಂಬ ಕಾಯಿಲೆಯಿಂದ ಬಳಲುತ್ತಿದ್ದಳು. ವರ್ತೂರಿನ ಗುಂಜೂರು ಸಮೀಪದ ಖಾಸಗಿ ಶಾಲೆಯಲ್ಲಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು ಎಂದು ವರದಿಯಾಗಿದೆ.
ಇದನ್ನೂ ಓದಿ; ಸೌಜನ್ಯ ತಾಯಿಯ ಮೇಲೆ ವೀರೇಂದ್ರ ಹೆಗಡೆ ಬೆಂಬಲಿಗರಿಂದ ಹಲ್ಲೆಗೆ ಯತ್ನ


