Homeಕರ್ನಾಟಕಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟು ವಿಕೃತಿ ಬಯಲು

ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟು ವಿಕೃತಿ ಬಯಲು

ಇಬ್ಬರು ಬಾಲಕಿಯರು ನೀಡಿದ ದೂರಿನ ಅನ್ವಯ ಪೋಕ್ಸೋ ಅಡಿ ಎಫ್‌ಐಆರ್‌ ದಾಖಲಾಗಿದೆ. ಮತ್ತಷ್ಟು ಆಘಾತಕಾರಿ ಅಂಶಗಳು ಬಯಲಾಗಿವೆ.

- Advertisement -
- Advertisement -

“ಋತುಮತಿಯಾಗದ ಅಪ್ರಾಪ್ತ ಬಾಲಕಿಯ ಮೇಲೆ ಚಿತ್ರದುರ್ಗದ ಮರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಅತ್ಯಾಚಾರ ಎಸಗಿದ್ದಾರೆ” ಎಂದು ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ.

ಈಗಾಗಲೇ ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠಾಧೀಶರ ವಿರುದ್ಧ ಮತ್ತಷ್ಟು ಆಘಾತಕಾರಿ ಸಂಗತಿಗಳು ಹೊರಬೀಳತೊಡಗಿವೆ. “ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿಯೇ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ” ಎಂದು ದೂರು ನೀಡಲಾಗಿದ್ದು, ವಾರ್ಡನ್ ರಶ್ಮಿ ಸೇರಿದಂತೆ ಒಟ್ಟು 7 ಮಂದಿ ವಿರುದ್ಧ ಮೈಸೂರಿನ ನಜರಾಬಾದ್‌ ಪೊಲೀಸ್ ಠಾಣೆಯಲ್ಲಿ ತಡರಾತ್ರಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಶಿವಮೂರ್ತಿ ಮುರುಘಾ ಶರಣರು ಮೊದಲನೇ ಆರೋಪಿಯಾಗಿದ್ದಾರೆ. ವಾರ್ಡನ್ ರಶ್ಮಿ (2ನೇ ಆರೋಪಿ), ಬಸವಾದಿತ್ಯ (ಮೂರನೇ ಆರೋಪಿ), ಪರಮಶಿವಯ್ಯ (4ನೇ ಆರೋಪಿ) ಗಂಗಾಧರಯ್ಯ (5ನೇ ಆರೋಪಿ), ಮಹಾಲಿಂಗ (6ನೇ ಆರೋಪಿ), ಕರಿಬಸಪ್ಪ (7ನೇ ಆರೋಪಿ) ಇತರ ಆರೋಪಿಗಳಾಗಿದ್ದಾರೆ.

ಎಫ್‌ಐಆರ್‌ನಲ್ಲಿ ಇರುವುದೇನು?

ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯರಿಬ್ಬರ ಪೈಕಿ ಒಬ್ಬ ಬಾಲಕಿಯು ಋತುಮತಿಯಾಗುವ ತನಕವೂ ಅಂದರೆ ಅವಳು 7ನೇ ತರಗತಿ ಓದುತ್ತಿರುವವರೆಗೂ ಸತತವಾಗಿ ಮುರುಘಾ ಮಠಾಧೀಶರಿಂದ ಲೈಂಗಿಕ ದೌರ್ಜನ್ಯ ಅನುಭವಿಸಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾರೆ ಎಂದು ಹೇಳಲಾಗಿರುವ ಬಾಲಕಿಯರಿಬ್ಬರ ತಾಯಿಯು ಆರ್ಥಿಕವಾಗಿ ಶಕ್ತರಲ್ಲದ ಕಾರಣ ತನ್ನಿಬ್ಬರು ಮಕ್ಕಳನ್ನೂ ಮಠದಲ್ಲಿನ ವಸತಿ ನಿಲಯಕ್ಕೆ ಸೇರಿಸಿದ್ದರು. ಈ ಮಕ್ಕಳಿಬ್ಬರು ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಬಾಲಕಿಯರನ್ನು ಒತ್ತಾಯಪೂರ್ವಕವಾಗಿ ಶರಣರ ಖಾಸಗಿ ಕೊಠಡಿಗೆ ಕಳಿಸಲಾಗುತ್ತಿತ್ತು. ಬಾಗಿಲಲ್ಲಿ ನಿಂತು ಬೇರೆ ಯಾರೂ ಹೋಗದಂತೆ ಕಾಯ್ದುಕೊಳ್ಳಲಾಗುತ್ತಿತ್ತು. ಮಕ್ಕಳು ಕೊಠಡಿಗೆ ಹೋಗಲು ಹಿಂಜರಿದಾಗ ಅವರನ್ನು ಮುರುಘಾ ಶರಣರ ಸಹಾಯಕರು ಹೆದರಿಸುತ್ತಿದ್ದರು.

ಸಂತ್ರಸ್ತ ಮಕ್ಕಳ ತಾಯಿ ಘಟನೆಗಳನ್ನು ಹೀಗೆ ವಿವರಿಸಿದ್ದಾರೆ:

“ನನಗೆ ಗಂಡನ ಆಸರೆ ಸಿಗದ ಕಾರಣ ನಾನು, ನನ್ನಮಕ್ಕಳು ನನ್ನ ಪೋಷಕರ ಆಶ್ರಯದಲ್ಲಿದ್ದೇವೆ. ನನ್ನ ಪೋಷಕರು ಆರ್ಥಿಕ ಹಿಂದುಳಿದವರಾಗಿದ್ದು ಹಣ್ಣಿನ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ನಾವು ಹಿಂದುಳಿದ ಜಾತಿಗೆ ಸೇರಿದವರಾಗಿರುತ್ತೇವೆ.”

“ನನ್ನ ಗಂಡ ತೊರೆದ ನಂತರ ನನಗೆ ಮಕ್ಕಳನ್ನು ಸಾಕಲು ತೊಂದರೆಯಾಗಿದ್ದರಿಂದ ನನ್ನಮಕ್ಕಳನ್ನು ಮುರುಘಾ ಮಠದ ಆಡಳಿತದಲ್ಲಿರುವ ಎಸ್‌ಜೆಎಂ ಕನ್ನಡ ಮಾಧ್ಯಮ ಶಾಲೆಗೆ 2016ರಲ್ಲಿ 3ನೇ ತರಗತಿ ಮತ್ತು 1ನೇ ತರಗತಿಗೆ ಸೇರಿಸಿ ಮಠದ ಆಶ್ರಯದಲ್ಲಿರುವ ಅಕ್ಕಮಹಾದೇವಿ ವಸತಿ ನಿಲಯದಲ್ಲಿರುವ ಬಸವ ಮಕ್ಕಳ ವಸತಿ ನಿಲಯದಲ್ಲಿ ಆಶ್ರಯಕ್ಕಾಗಿ ದಾಖಲಿಸಿರುತ್ತೇನೆ. ನನ್ನ ಮಕ್ಕಳು ಹಾಸ್ಟೆಲ್‌ನಲ್ಲಿರುತ್ತಿದ್ದರು.”

“ನನ್ನ ಮೊದಲನೇ ಮಗಳು 7ನೇ ತರಗತಿ ಓದುತ್ತಿರುವಾಗ ಅಂದರೆ 2019ರಿಂದ ಹಾಗೂ 2ನೇ ಮಗಳು ಸಹ ಓದುತ್ತಿರುವಾಗ ಕೋವಿಡ್ ರಜೆಯಲ್ಲಿದ್ದಾಗ 2020ರಲ್ಲಿ ಶಿವಮೂರ್ತಿ ಮುರುಘ ಶರಣ ಸ್ವಾಮೀಜಿಯವರು ವಾರ್ಡನ್ ರಶ್ಮಿ ಮುಖಾಂತರ ತಮ್ಮ ಖಾಸಗಿ ಕೋಣೆಗೆ ಕರೆಸಿಕೊಂಡು ಪ್ರಥಮವಾಗಿ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾರೆ ಎಂದು ನನ್ನ ಮಕ್ಕಳು ನನಗೆ ತಿಳಿಸಿರುತ್ತಾರೆ.”

ಇದನ್ನೂ ಓದಿರಿ: ಚೆಕ್‌ಗಳಿಗೆ ಜೈಲಿನಿಂದಲೇ ಸಹಿಹಾಕಲು ಅತ್ಯಾಚಾರ ಆರೋಪಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ

“ಶಿವಮೂರ್ತಿ ಮುರುಘ ಶರಣ ಸ್ವಾಮೀಜಿಯವರು ಅಂದಿನಿಂದಲೂ ಋತುಮತಿಯಾಗುವ ತನಕ ಅಂದರೆ ಅವಳು 7ನೇ ತರಗತಿ ಓದುತ್ತಿರುವವರೆಗೂ ಸತತವಾಗಿ ಲೈಂಗಿಕ ದೌರ್ಜನ್ಯ ಮಾಡಿರುತ್ತಾರೆ.”

“ವಾರ್ಡನ್ ರಶ್ಮಿ ಮಕ್ಕಳ ಮೇಲೆ ಒತ್ತಡ ತಂದು ಮಕ್ಕಳಿಗೆ ಇಷ್ಟವಿಲ್ಲದಿದ್ದರೂ ಹೆದರಿಸಿ ಅವರುಗಳನ್ನು ಸ್ವಾಮೀಜಿಯವರ ಖಾಸಗಿ ಕೊಠಡಿಗೆ ಯಾವುದಾದರೊಂದು ಕಾರಣ ನೀಡಿ ಕಳಿಸುತ್ತಿದ್ದಳು ಎಂದು ಮಕ್ಕಳು ನನಗೆ ತಿಳಿಸಿರುತ್ತಾರೆ. ಸ್ವಾಮೀಜಿಯವರ ಖಾಸಗಿ ಕೊಠಡಿಗೆ ಮಕ್ಕಳು ಹೋಗಲು ಒಪ್ಪದಿದ್ದ ಪಕ್ಷದಲ್ಲಿ ಮುರುಘಾ ಮಠದ ಸಾಧಕರಾದ ಬಸವಾದಿತ್ಯ, ಪರಮಶಿವಯ್ಯ, ಗಂಗಾಧರಯ್ಯ ಇವರುಗಳು ಮಕ್ಕಳನ್ನು ಹೆದರಿಸಿ ಒತ್ತಾಯ ಮಾಡಿ ಕಳಿಸುತ್ತಿದ್ದರು.”

“ಸ್ವಾಮೀಜಿಯ ಅಸಿಸ್ಟೆಂಟ್ ಆಗಿರುವ ಮಹಾಲಿಂಗ ಹಾಗೂ ಅಡುಗೆ ಭಟ್ಟ ಕರಿಬಸಪ್ಪ ಇವರುಗಳು ಮಕ್ಕಳನ್ನು ಸ್ವಾಮೀಜಿಯ ಖಾಸಗಿ ಕೊಠಡಿಗೆ ಕರೆದುಕೊಂಡು ಹೋಗಿ ಬಿಡುವುದು ಹಾಗೂ ಬಾಗಿಲಲ್ಲಿ ನಿಂತು ಬೇರೆ ಯಾರೂ ಹೋಗದಂತೆ ಕಾಯ್ದುಕೊಳ್ಳುವುದು ಮತ್ತು ಮಕ್ಕಳು ಕೊಠಡಿಗೆ ಹೋಗಲು ಹಿಂಜರಿದಾಗ ಹೆದರಿಸುವುದು ಮಾಡುತ್ತಿದ್ದರು” ಎಂದು ಬಾಲಕಿಯರ ತಾಯಿ ದೂರಿನಲ್ಲಿ ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....