Homeಮುಖಪುಟ4 ವರ್ಷದ ಮಗು ಮೇಲೆ ಅತ್ಯಾಚಾರ: ಸಿಸಿಕ್ಯಾಮರ ನೆರವಿನಿಂದ ಆರೋಪಿಯ ಬಂಧನ

4 ವರ್ಷದ ಮಗು ಮೇಲೆ ಅತ್ಯಾಚಾರ: ಸಿಸಿಕ್ಯಾಮರ ನೆರವಿನಿಂದ ಆರೋಪಿಯ ಬಂಧನ

- Advertisement -
- Advertisement -

ದೆಹಲಿಯಲ್ಲಿ 4 ವರ್ಷದ ಮಗುವನ್ನು ಕಿಡ್ನಾಪ್ ಮಾಡಿ ಅತ್ಯಾಚಾರವೆಸಗಿದ್ದ ಆರೋಪಿ ಅನಿಲ್ ಪಾಠಕ್ ಎಂಬುವವನನ್ನು ಸಿಸಿಕ್ಯಾಮರ ದೃಶ್ಯಾವಳಿಗಳ ನೆರವಿನಿಂದ ದೆಹಲಿ ಪೊಲೀಸರು ಸೋಮವಾರ ತಡರಾತ್ರಿ ಬಂಧಿಸಿದ್ದಾರೆ.

ಕಳೆದ ವಾರ ಉತ್ತರ ದೆಹಲಿಯ ಹೊರವಲಯದಲ್ಲಿರುವ ಭಾಲ್ಸ್ವಾ ಡೈರಿ ಪ್ರದೇಶದಲ್ಲಿ ದಿನಗೂಲಿ ಕಾರ್ಮಿಕರ 4 ವರ್ಷದ ಮಗಳು ಮನೆ ಹೊರಗೆ ಆಟವಾಡುತ್ತಿರುವಾಗ ಅಪಹರಿಸಲಾಗಿತ್ತು. ಆನಂತರ ಅತ್ಯಾಚಾರವೆಸಗಿ ಪಾರ್ಕ್ ಒಂದರ ಬಳಿ ಬಿಟ್ಟು ಪರಾರಿಯಾಗಿದ್ದ. ಆ ಮಗು ಸದ್ಯ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಗು ಮನೆಗೆ ಬಾರದಿದ್ದರಿಂದ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆಗ ಪೊಲೀಸರು ಆ ಮಗುವಿನ ಭಾವಚಿತ್ರವನ್ನು ಎಲ್ಲಾ ಪೊಲೀಸ್ ಠಾಣೆಗಳಿಗೆ ಕಳಿಸಿ ಹುಡುಕಲು ಆರಂಭಿಸಿದ್ದರು. ಮಾರನೇಯ ದಿನ ಪಾರ್ಕ್ ಒಂದರ ಬಳಿ ಮಗು ಪತ್ತೆಯಾಗಿತ್ತು. ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಸಿಸಿಕ್ಯಾಮರ ಸಹಾಯದಿಂದ ಹುಡುಕಾಡಿದಾಗ ಆರೋಪಿ ಅನಿಲ್ ಪಾಠಕ್ ಎಂಬಾತ ಮಗುವನ್ನು ಹೊತ್ತುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಆ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಮಾತು ಮರೆತ ಭಾರತ-31; ಲಾಕ್‌ಡೌನ್ ಫೈಲ್ಸ್ : ಅಂಬೇಡ್ಕರ್ ಟಿ-ಶರ್ಟ್ ಜಾತಿ ಹೇಳಿತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...