Homeಮುಖಪುಟಅತ್ಯಾಚಾರಕ್ಕೊಳಗಾದ ಬಾಲಕಿ ಆತ್ಮಹತ್ಯೆ; ಎರಡು ತಿಂಗಳ ನಂತರ FIR!

ಅತ್ಯಾಚಾರಕ್ಕೊಳಗಾದ ಬಾಲಕಿ ಆತ್ಮಹತ್ಯೆ; ಎರಡು ತಿಂಗಳ ನಂತರ FIR!

ಅತ್ಯಾಚಾರಕ್ಕೊಳಗಾದ ಕಾರಣ ಆತ್ಮಹತ್ಯೆಗೀಡಾಗಿದ್ದ ಬಾಲಕಿಯ ಶವವನ್ನು ಎರಡು ತಿಂಗಳ ನಂತರ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

- Advertisement -
- Advertisement -

ಛತ್ತೀಸ್‌‌ಗಡ್‌‌ನ ಕೊಂಡಗಾಂವ್ ಜಿಲ್ಲೆಯಲ್ಲಿ ಐದು ಜನರಿಂದ ಸಾಮೂಹಿಕ ಅತ್ಯಾಚಾರಕ್ಕೊಳಪಟ್ಟು ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ. ಎಫ್‌ಐಆರ್‌‌ ದಾಖಲಿಸಲು ಪೊಲೀಸರು ನಿರಾಕರಿಸಿದ್ದಕ್ಕೆ ಬಾಲಕಿಯ ತಂದೆ ಕೂಡಾ ಪ್ರಾಣ ಕಳೆದುಕೊಳ್ಳಲು ಯತ್ನಿಸಿದ ನಂತರ FIR ದಾಖಲಿಸಿದ ಪೊಲೀಸರು, ಬಾಲಕಿಯ ದೇಹವನ್ನು ಎರಡು ತಿಂಗಳ ನಂತರ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಅಕ್ಟೋಬರ್ 7 ರಂದು ಬಾಲಕಿಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಂತ್ರಸ್ತೆಯ ಕುಟುಂಬದ ಪ್ರಕಾರ, ಜುಲೈ 19 ರಂದು 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಮರುದಿನ ಆಕೆ ಆತ್ಮಹತ್ಯೆ ಮಾಡಿಕೊಂಡು ತನ್ನ ಪ್ರಾಣ ಕಳೆದುಕೊಂಡಿದ್ದಾರೆ. ಕುಟುಂಬ ಸದಸ್ಯರು ಬಾಲಕಿಯ ಶವವನ್ನು ಅವರ ಹಳ್ಳಿಯ ಹೊರವಲಯದಲ್ಲಿ ಸಮಾಧಿ ಮಾಡಿದ್ದರು.

ಇದನ್ನೂ ಓದಿ: ದೇಶದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರಗಳು ಹೆಚ್ಚಾಗಿದೆ; ಆದರೆ ಚೌಕಿದಾರ ಕಾಣಿಸುತ್ತಿಲ್ಲ: ಸಿದ್ದರಾಮಯ್ಯ

ಘಟನೆ ನಡೆದ ಸಮಯದಲ್ಲಿ ತಮಗೆ ವರದಿಯಾಗಿಲ್ಲ ಎಂದು ಪೊಲೀಸರು ಹೇಳಿದ್ದು, ಕೆಲವು ಸ್ಥಳೀಯವಾಗಿ ವರದಿಗಳು ಪ್ರಕಟವಾದ ನಂತರ ಗೊತ್ತಾಗಿದೆ ಎಂದಿದ್ದಾರೆ. ಆದರೆ, ಸಂತ್ರಸ್ತೆಯ ಚಿಕ್ಕಪ್ಪ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರೂ ಯಾವುದೆ ಕ್ರಮ ಕೈಗೊಂಡಿರಲಿಲ್ಲ ಎಂದು ಆರೋಪಿಸಿದ್ದಾರೆ.

ಪ್ರಸ್ತುತ ಪೊಲೀಸರು ಮೂವರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಹಾಗೆಯೇ ಐವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾಲಕಿಯ ತಂದೆ ಅಕ್ಟೋಬರ್ 6 ರಂದು ವಿಷ ಸೇವಿಸಿದ್ದರು, ಆದರೆ ಚಿಕಿತ್ಸೆಯ ನಂತರ ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆಯ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಪಿಟಿಐ ಜೊತೆ ಮಾತನಾಡಿದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಬಸ್ತರ್ ರೇಂಜ್) ಸುಂದರರಾಜ್ ಪಿ., “ಧನೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹಳ್ಳಿಯಲ್ಲಿ ಘಟನೆ ನಡೆದಿದ್ದು, ಮಾಹಿತಿ ಪಡೆದ ನಂತರ ಕೊಂಡಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇತರ ಅಧಿಕಾರಿಗಳು ಬುಧವಾರ ಅಲ್ಲಿಗೆ ತೆರಳಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅತ್ಯಾಚಾರದ ದೂರು ದಾಖಲಿಸಲು 900 ಕಿ.ಮೀ ಪ್ರಯಾಣಿಸಿದ ಸಂತ್ರಸ್ತೆ!

“ಬಾಲಕಿಯು ಜುಲೈ 19 ರಂದು ಹತ್ತಿರದ ಕನಗಾಂವ್ ಗ್ರಾಮದಲ್ಲಿ ತನ್ನ ಕುಟುಂಬದೊಂದಿಗೆ ವಿವಾಹ ಸಮಾರಂಭಕ್ಕೆ ಹೋಗಿದ್ದರು. ಅದೇ ರಾತ್ರಿ 11 ಗಂಟೆ ಸುಮಾರಿಗೆ, ಕನಗಾಂವ್‌ನ ಇಬ್ಬರು ಹುಡುಗರು ಆಕೆಯನ್ನು ಹತ್ತಿರದ ಕಾಡಿಗೆ ಎಳೆದೊಯ್ದ, ಅಲ್ಲಿ ಬಾಲಕಿಯ ಮೇಲೆ ಐದು ಜನರಿಂದ ಅತ್ಯಾಚಾರವೆಸಗಿದ್ದಾರೆ” ಎಂದು ಸಂತ್ರಸ್ಥೆಯ ಕುಟುಂಬ ಸದಸ್ಯರೊಬ್ಬರು ಹೇಳಿದ್ದಾರೆ.

ಇದಾಗಿ ಮರುದಿನ ಬೆಳಿಗ್ಗೆ, ಬಾಲಕಿ ಯಾರಿಗೂ ತಿಳಿಸದೆ ಮನೆಯಿಂದ ತೆರಳಿ, ಆತ್ಮಹತ್ಯೆ ಮಾಡಿಕೊಂಡಿದ್ದರು.

“ಬುಧವಾರ ಪೊಲೀಸ್ ತಂಡ ಮತ್ತು ತಹಶೀಲ್ದಾರ್ ಅವರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಸಮಾಧಿಯಿಂದ ಹೊರತೆಗೆಯಲಾಯಿತು. ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ” ಎಂದು ಕುಟುಂಬದ ಸದಸ್ಯರೊಬ್ಬರು ಹೇಳಿದ್ದಾರೆ.

ನನ್ನ ಸಹೋದರನ ಮಗಳ ಮೇಲೆ ಕನಗಾಂವ್‌‌ನಲ್ಲಿ ಕೆಲವರು ಲೈಂಗಿಕ ದೌರ್ಜನ್ಯಕ್ಕೊಳಪಡಿಸಿದ್ದನ್ನು ಇಬ್ಬರು ಸ್ಥಳೀಯ ಹುಡುಗರು ಬಾಲಕಿಯು ಆತ್ಮಹತ್ಯೆ ಮಾಡಿಕೊಂಡ ನಂತರ ಹೇಳಿದ್ದರು. ಇದರ ನಂತರ ದೂರು ನೀಡಿದ್ದರೂ ಪೊಲೀಸರು ಎಫ್‌‌ಐಆರ್‌‌ ದಾಖಲಿಸಿಲ್ಲ ಎಂದು ಬಾಲಕಿಯ ಚಿಕ್ಕಪ್ಪ ಆರೋಪಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ತಡೆಯಲು ಹೆಣ್ಣುಮಕ್ಕಳಲ್ಲಿ ‘ಸಂಸ್ಕಾರ’ ತುಂಬಬೇಕು: ಬಿಜೆಪಿ ಶಾಸಕ ಸುರೇಂದ್ರ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...