Homeಮುಖಪುಟಅತ್ಯಾಚಾರ ಸಂತ್ರಸ್ತೆ ಮೇಲೆ ಮತ್ತೆ ಅತ್ಯಾಚಾರ ಆರೋಪ: ಆರು ಜನರ ಬಂಧನ, ಉಪ ಜೈಲರ್ ವಿರುದ್ಧ...

ಅತ್ಯಾಚಾರ ಸಂತ್ರಸ್ತೆ ಮೇಲೆ ಮತ್ತೆ ಅತ್ಯಾಚಾರ ಆರೋಪ: ಆರು ಜನರ ಬಂಧನ, ಉಪ ಜೈಲರ್ ವಿರುದ್ಧ ಅಪಹರಣ ಕೇಸ್

- Advertisement -
- Advertisement -

ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯ 17 ವರ್ಷದ ಬಾಲಕಿಯೊಬ್ಬಳು ಎರಡು ದಿನಗಳಲ್ಲಿ ನಾಲ್ವರು ಪುರುಷರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಉಪ ಜೈಲರ್ ಅಪಹರಿಸಿ ಹೋಟೆಲ್ ಕೋಣೆಯಲ್ಲಿ ಬಂಧಿಸಿಟ್ಟಿದ್ದರು ಎಂದು ಆರೋಪಿಸಿದ್ದಾಳೆ. ಈ ಸಂಬಂಧ ಹಲವರ ಬಂಧನವಾಗಿದ್ದು, ತನಿಖೆ ಮುಂದುವರಿದಿದೆ.

ಏಪ್ರಿಲ್ 2ರಂದು ತನ್ನ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿ, ನಂತರ ಶಹದೋಲ್ ಜಿಲ್ಲೆಯ ಪ್ರಮುಖ ಹೋಟೆಲ್‌ನ ಕೋಣೆಯೊಂದರಲ್ಲಿ ಬಂಧಿಸಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಜನರನ್ನು ಬಂಧಿಸಿದ್ದು, ಉಪ ಜೈಲರ್ ವಿರುದ್ಧ ಅಪಹರಣ ಮತ್ತು ಅಕ್ರಮ ಬಂಧನದ ಆರೋಪ ಹೊರಿಸಲಾಗಿದೆ.

ಪೊಲೀಸರ ಪ್ರಕಾರ, ಏಪ್ರಿಲ್ 29ರಂದು ಮಗಳು ಕಾಣೆಯಾದ ನಂತರ ಬಾಲಕಿಯ ತಾಯಿ ನಾಪತ್ತೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ, ಪೊಲೀಸರು ಏಪ್ರಿಲ್ 30ರಂದು ಬಿಎನ್‌ಎಸ್ ಸೆಕ್ಷನ್ 137(2) ಅಡಿಯಲ್ಲಿ ಅಪಹರಣ ಪ್ರಕರಣವನ್ನು ದಾಖಲಿಸಿದ್ದರು.

ಬಾಲಕಿಯನ್ನು ರಕ್ಷಿಸಿದ ನಂತರ ವಿಚಾರಣೆ ನಡೆಸಿದಾಗ, ಏಪ್ರಿಲ್ 29ರಂದು ಸಮೀರ್ ಖಾನ್ ಎಂಬಾತನಿಂದ ತನಗೆ ಫೋನ್ ಕರೆ ಬಂದಿದ್ದು, ಆತ ತನ್ನನ್ನು ಬೈಕ್‌ನಲ್ಲಿ ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾಗಿ ಬಾಲಕಿ ಆರೋಪಿಸಿದ್ದಾಳೆ. ನಂತರ ಸಮೀರ್‌ನ ಆಪ್ತ ಚೋಟು ಮುಸಲ್ಮಾನ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆಕೆ ಹೇಳಿಕೊಂಡಿದ್ದಾಳೆ.

ಏಪ್ರಿಲ್ 30ರಂದು ಶಹದೋಲ್ ರೈಲು ನಿಲ್ದಾಣದಲ್ಲಿ ತನ್ನನ್ನು ಬಿಟ್ಟು ಹೋಗಲಾಗಿತ್ತು, ಅಲ್ಲಿಂದ ಅನ್ಮೋಲ್ ಎಂದು ಗುರುತಿಸಲಾದ ಮತ್ತೊಬ್ಬ ಯುವಕ ತನ್ನನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾಳೆ. ನಂತರ ಅದೇ ದಿನ, ಮುದ್ನಾ ನದಿಯ ಬಳಿ ಅನ್ಮೋಲ್‌ನ ಆಪ್ತ ಶಕೀಬ್ ಖಾನ್ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಬಾಲಕಿಯ ಹೇಳಿಕೆಯ ಪ್ರಕಾರ, ಏಪ್ರಿಲ್ 30ರಂದು ತಡರಾತ್ರಿ ಹಾಸ್ಟೆಲ್ ಬಳಿ ಆಕೆಯನ್ನು ಬಿಟ್ಟು ಹೋಗಲಾಗಿತ್ತು. ಮೇ 1ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬುರ್ಹಾರ್ ಸಬ್ ಜೈಲಿನ ಉಪ ಜೈಲರ್ ವಿಕಾಸ್ ಸಿಂಗ್ ಆಕೆಯನ್ನು ಗಮನಿಸಿ, ತನ್ನ ಕಾರಿನಲ್ಲಿ ಹೋಟೆಲ್‌ಗೆ ಕರೆದೊಯ್ದು ಬಲವಂತವಾಗಿ ಬಂಧಿಸಿಟ್ಟಿದ್ದ. ನಂತರ ಪೊಲೀಸರು ಆಕೆ ಇದ್ದ ಸ್ಥಳವನ್ನು ಪತ್ತೆಹಚ್ಚಿ ಹೋಟೆಲ್ ಕೊಠಡಿಯಿಂದ ರಕ್ಷಿಸಿದ್ದಾರೆ.

2024ರಲ್ಲಿ, ತಾಯಿಯೊಂದಿಗೆ ಜಗಳವಾಡಿ ಮನೆಬಿಟ್ಟ ವೇಳೆ ಐವರು ಪುರುಷರು ತನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಅತ್ಯಾಚಾರ ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾಗಿ ವರದಿಗಳು ಹೇಳಿವೆ.

“ಅಪಹರಣಕ್ಕೆ ಸಂಬಂಧಿಸಿದ ಸೆಕ್ಷನ್ 137(2) ಬಿಎನ್‌ಎಸ್ ಅಡಿಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. 2024ಮತ್ತು ಏಪ್ರಿಲ್ 29 ಮತ್ತು 30, 2025ರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರು ಜನರನ್ನು ಬಂಧಿಸಲಾಗಿದೆ. ಶುಕ್ರವಾರ ಆಕೆಯ ಹೇಳಿಕೆಗಳನ್ನು ನ್ಯಾಯಾಲಯದ ಮುಂದೆ ದಾಖಲಿಸಲಾಗುವುದು, ಅದರ ಆಧಾರದ ಮೇಲೆ ಈ ಪ್ರಕರಣದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಶಹದೋಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ರಾಮ್‌ಜಿ ಶ್ರೀವಾಸ್ತವ ಗುರುವಾರ ಹೇಳಿದ್ದಾರೆ.

“ಬುರ್ಹಾರ್ ಸಬ್ ಜೈಲು ಉಪ ಜೈಲರ್ ವಿಕಾಸ್ ಸಿಂಗ್ ವಿರುದ್ಧ ಅಪಹರಣ ಮತ್ತು ಅಕ್ರಮ ಬಂಧನದ ಆರೋಪ ಹೊರಿಸಲಾಗಿದೆ. ಆದರೆ, ಆತನನ್ನು ಇನ್ನೂ ಬಂಧಿಸಲಾಗಿಲ್ಲ” ಎಂದು ಎಸ್ಪಿ ತಿಳಿಸಿದ್ದಾರೆ.

ತನಿಖೆಯ ಬಗ್ಗೆ ತಿಳಿದಿರುವ ಪೊಲೀಸ್ ಅಧಿಕಾರಿಗಳ ಪ್ರಕಾರ, ಬಾಲಕಿಯ ಆರಂಭಿಕ ಹೇಳಿಕೆಗಳಲ್ಲಿ ಹಲವಾರು ಗೊಂದಲಗಳಿವೆ. ಆಕೆಯ ಔಪಚಾರಿಕ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗುವುದು, ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಶುಕ್ರವಾರ ಆಕೆಯ ವೈದ್ಯಕೀಯ ಪರೀಕ್ಷೆಯನ್ನು ಸಹ ನಡೆಸಲು ನಿರ್ಧರಿಸಲಾಗಿದೆ ಎಂದು newindianexpress.com ವರದಿ ಮಾಡಿದೆ.

ಹಮ್ದರ್ದ್ ರೂಹ್ ಅಫ್ಜಾ ಗುರಿಯಾಗಿಸಿ ಹೇಳಿಕೆ ನೀಡಲ್ಲ: ದೆಹಲಿ ಹೈಕೋರ್ಟ್‌ಗೆ ರಾಮದೇವ್ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...