ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿ, ಆಕೆಯ ಬೆಲೆಬಾಳುವ ವಸ್ತುಗಳನ್ನು ದೋಚಿದ ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಬಂಧಿತರು ಸೇರಿ ಒಟ್ಟು ಐವರು ಮಂಗಳವಾರ ರಾತ್ರಿ (ಅ.21) ಮಹಿಳೆಯ ಮನೆಗೆ ನುಗ್ಗಿ ಬೆದರಿಸಿ, ಹಣ ಮತ್ತು ಬೆಲೆಬಾಳುವ ವಸ್ತುಗಳಿಗೆ ಬೇಡಿಕೆ ಇಟ್ಟಿದ್ದಾರೆ. ಅಲ್ಲದೆ, ಮೂವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಉಳಿದ ಇಬ್ಬರು ದುಷ್ಕೃತ್ಯಕ್ಕೆ ಕಾವಲು ನಿಂತಿದ್ದಾರೆ ಎಂದು ಮಾದನಾಯಕನಹಳ್ಳಿ ಪೊಲೀಸರನ್ನು ಮಾಹಿತಿ ಉಲ್ಲೇಖಿಸಿ ವರದಿಗಳು ಹೇಳಿವೆ.
ಮಹಿಳೆಯ ದೂರು ಆಧರಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ನೇತೃತ್ವದ ಪೊಲೀಸ್ ತಂಡ ಪರಿಸ್ಥಿತಿಯನ್ನು ಅವಲೋಕಿಸಿತ್ತು. ಬಳಿಕ ಪೊಲೀಸರು ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ, ದುಷ್ಕೃತ್ಯ ಎಸಗಿದ ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಉಳಿದ ಮೂವರು ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಸಂತ್ರಸ್ತೆಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಆಕೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮತ್ತೋರ್ವ ಸರ್ಕಾರಿ ನೌಕರ ಅಮಾನತು