Homeಮುಖಪುಟಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

- Advertisement -
- Advertisement -

ಯುವತಿಯೊಬ್ಬರ ಮೇಲೆ ನಡೆದ ಅತ್ಯಾಚಾರಕ್ಕೆ ಅವರೇ ಕಾರಣ ಎಂಬಂತೆ ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ಅಘಾತಕಾರಿ ತೀರ್ಪೊಂದನ್ನು ನೀಡಿದೆ. 2024 ರಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯ ಬಗ್ಗೆ ”ಮಹಿಳೆಯೆ ಸಮಸ್ಯೆಯನ್ನು ಮೈಗೆಳೆದುಕೊಂಡಿದ್ದಾರೆ” ಎಂದು ಎಂದು ಹೇಳಿದ್ದು, ಅವರ ವಿರುದ್ಧ ನಡೆದ ಅಪರಾಧಕ್ಕೆ ಅವರೇ ಕಾರಣರಾಗಿದ್ದಾರೆ ಎಂದು ಆರೋಪಿಗೆ ಜಾಮೀನು ನೀಡುವಾಗ ತೀರ್ಪು ನೀಡಿದೆ.

ನ್ಯಾಯಾಧೀಶ ಸಂಜಯ್ ಕುಮಾರ್ ಸಿಂಗ್ ಅವರು ಮಾರ್ಚ್ 11 ರಂದು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ನಿಶ್ಚಲ್ ಚಂದಕ್‌ಗೆ ಜಾಮೀನು ಮಂಜೂರು ಮಾಡುವ ತಮ್ಮ ಆದೇಶದಲ್ಲಿ ಈ ಹೇಳಿಕೆ ನೀಡಿದ್ದಾರೆ. ಡಿಸೆಂಬರ್ 2024 ರಲ್ಲಿ ಈ ಪ್ರಕರಣದಲ್ಲಿ ನಿಶ್ಚಲ್‌ನನ್ನು ಬಂಧಿಸಲಾಗಿತ್ತು.

“ಸಂತ್ರಸ್ತೆಯ ಆರೋಪ ನಿಜವೆಂದು ಒಪ್ಪಿಕೊಂಡರೂ ಸಹ, ಅವಳೆ ಸಮಸ್ಯೆಯನ್ನು ಸ್ವತಃ ಮೈಗೆಳೆದುಕೊಂಡಿದ್ದಾರೆ ಮತ್ತು ಅಪರಾಧಕ್ಕೆ ಕಾರಣಳಾಗಿದ್ದಾಳೆ ಎಂದು ತೀರ್ಮಾನಿಸಬಹುದು ಎಂದು ಈ ನ್ಯಾಯಾಲಯ ಅಭಿಪ್ರಾಯಪಟ್ಟಿದೆ” ಎಂದು ಸಂಜಯ್ ಸಿಂಗ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ನೋಯ್ಡಾ ಪೊಲೀಸರಿಗೆ ಸಲ್ಲಿಸಿದ ದೂರಿನ ಪ್ರಕಾರ, ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದ ಯುವತಿ, ಸೆಪ್ಟೆಂಬರ್ 2024 ರಲ್ಲಿ ತನ್ನ ಮೂವರು ಮಹಿಳಾ ಸ್ನೇಹಿತರೊಂದಿಗೆ ದೆಹಲಿಯ ಬಾರ್‌ಗೆ ಹೋಗಿದ್ದೆ ಎಂದು ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಯುವತಿ ಬಾರ್‌ನಲ್ಲಿ ಕೆಲವು ಪುರುಷ ಪರಿಚಯಸ್ಥರನ್ನು ಭೇಟಿಯಾದಳು ಮತ್ತು ಚಂದಕ್ ಕೂಡ ಈ ಗುಂಪಿನ ಭಾಗವಾಗಿದ್ದನು ಎಂದು ಯುವತಿ ನೀಡಿದ್ದ ದೂರಿನಲ್ಲಿ ತಿಳಿಸಲಾಗಿದೆ. ಮಹಿಳೆ ಮದ್ಯ ಸೇವಿಸಿ ಬೆಳಗಿನ ಜಾವ 3 ಗಂಟೆಯವರೆಗೆ ಬಾರ್‌ನಲ್ಲಿಯೇ ಇದ್ದರು ಎಂದು ದೂರಿನಲ್ಲಿ ಯುವತಿ ಹೇಳಿದ್ದಾರೆ.

ಈ ವೇಳೆ ಚಂದಕ್ ತನ್ನೊಂದಿಗೆ ಬರುವಂತೆ ಕೇಳುತ್ತಲೇ ಇದ್ದನು ಎಂದು ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಚಂದಕ್‌ನ ಒತ್ತಾಯದ ಮೇರೆಗೆ ತಾನು ಕೊನೆಗೆ ಅವನೊಂದಿಗೆ ಅವನ ಮನೆಗೆ ವಿಶ್ರಾಂತಿ ಪಡೆಯಲು ಹೋಗಲು ಒಪ್ಪಿಕೊಂಡೆ ಎಂದು ಯುವತಿ ಹೇಳಿದ್ದಾರೆ.

ಮನೆಗೆ ಹೋಗುವ ದಾರಿಯಲ್ಲಿ ಚಂದಕ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸುತ್ತಲೇ ಇದ್ದನು ಮತ್ತು ನೋಯ್ಡಾದಲ್ಲಿರುವ ತನ್ನ ಮನೆಗೆ ಕರೆದೊಯ್ಯುವ ಬದಲು, ಗುರ್ಗಾಂವ್‌ನಲ್ಲಿರುವ ತನ್ನ ಸಂಬಂಧಿಕರ ಫ್ಲಾಟ್‌ಗೆ ಕರೆದೊಯ್ದು ತನ್ನ ಮೇಲೆ ಅತ್ಯಾಚಾರ ಮಾಡಿದನು ಎಂದು ಯುವತಿ ದೂರಿದ್ದಾರೆ.

ಯುವತಿ ಸಲ್ಲಿಸಿದ ದೂರಿನ ಆಧಾರದ ಮೇಲೆ ನೋಯ್ಡಾದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿತ್ತು. ಡಿಸೆಂಬರ್ 11, 2024 ರಂದು ಚಂದಕ್ ಅವರನ್ನು ಬಂಧಿಸಲಾಗಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಚಂದಕ್ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯಲ್ಲಿ, ಯುವತಿಯನ್ನು ತನ್ನ ಸಂಬಂಧಿಕರ ಫ್ಲಾಟ್‌ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ. ತಮ್ಮಿಬ್ಬರ ನಡುವೆ ನಡೆದದ್ದು ಸಮ್ಮತಿಯ ಲೈಂಗಿಕತೆಯೆ ಹೊರತು, ಅತ್ಯಾಚಾರವಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಯುವತಿಯೆ ಸ್ವತಃ ತಮ್ಮ ಮನೆಗೆ ಬಂದು ವಿಶ್ರಾಂತಿ ಪಡೆಯಲು ಒಪ್ಪಿಕೊಂಡಿದ್ದರು ಎಂದು ಅವರು ಹೇಳಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಸಿಂಗ್ ತನ್ನ ಆದೇಶದಲ್ಲಿ, ಮಹಿಳೆ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು, ಎಫ್‌ಐಆರ್‌ನಲ್ಲಿ ಬಹಿರಂಗಪಡಿಸಿದಂತೆ ಆಕೆಯ ಕೃತ್ಯದ ನೈತಿಕತೆ ಮತ್ತು ಮಹತ್ವವನ್ನು ಅರ್ಥಮಾಡಿಕೊಳ್ಳುವಷ್ಟು ಸಮರ್ಥಳಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

“ಮಹಿಳೆಯ ವೈದ್ಯಕೀಯ ಪರೀಕ್ಷೆಯಲ್ಲಿ, ಆಕೆಯ ಕನ್ಯಾಪೊರೆ ಹರಿದಿರುವುದು ಕಂಡುಬಂದಿದೆ ಆದರೆ ವೈದ್ಯರು ಲೈಂಗಿಕ ದೌರ್ಜನ್ಯದ ಬಗ್ಗೆ ಯಾವುದೇ ಅಭಿಪ್ರಾಯವನ್ನು ನೀಡಿಲ್ಲ ಎಂದು ಆದೇಶದಲ್ಲಿ ಹೇಳಿದ್ದಾರೆ.

“ಪ್ರಕರಣದ ಸಂಗತಿಗಳು ಮತ್ತು ಸಂದರ್ಭಗಳನ್ನು ಹಾಗೂ ಅಪರಾಧದ ಸ್ವರೂಪ, ಸಾಕ್ಷ್ಯಗಳು, ಆರೋಪಿಗಳ ಶಾಮೀಲುದಾರಿಕೆ ಮತ್ತು ಎರಡು ಕಡೆಯವರ ವಕೀಲರ ವಾದಗಳನ್ನು ಗಮನದಲ್ಲಿಟ್ಟುಕೊಂಡು, ಅರ್ಜಿದಾರರು ಜಾಮೀನಿಗೆ ಸೂಕ್ತವಾದ ಪ್ರಕರಣವನ್ನು ಮಂಡಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ.” ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಅತ್ಯಾಚಾರಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...