Homeಮುಖಪುಟಮಹಾರಾಷ್ಟ್ರ | ಅತ್ಯಾಚಾರ ಎಸಗಿ ವಿಡಿಯೊ ವೈರಲ್ ಮಾಡಿದ ದುಷ್ಕರ್ಮಿಗಳು

ಮಹಾರಾಷ್ಟ್ರ | ಅತ್ಯಾಚಾರ ಎಸಗಿ ವಿಡಿಯೊ ವೈರಲ್ ಮಾಡಿದ ದುಷ್ಕರ್ಮಿಗಳು

- Advertisement -
- Advertisement -

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 19 ವರ್ಷದ ಯುವತಿಯ ಮೇಲೆ ಆಕೆಯ ಸ್ನೇಹಿತ ಅತ್ಯಾಚಾರ ಎಸಗಿದ್ದು, ಇತರ ಇಬ್ಬರು ಈ ಕೃತ್ಯವನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಘಟನೆಯು ಡಿಸೆಂಬರ್ 29, 2024 ರಂದು ಭಿವಾಂಡಿಯ ಕಾಮತ್‌ಘರ್ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಭಿವಾಂಡಿ ಪೊಲೀಸರು ಭಾನುವಾರ ಯುವತಿಯ 22 ವರ್ಷದ ಸ್ನೇಹಿತ ಮತ್ತು ಆಕೆಯ ಗೆಳತಿ ಮತ್ತು ಹಲ್ಲೆಯನ್ನು ಚಿತ್ರೀಕರಿಸಿದ ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅತ್ಯಾಚಾರ ನಡೆದು ಒಂದು ತಿಂಗಳ ನಂತರ ವೀಡಿಯೊ ವೈರಲ್ ಆಗಿದ್ದು, ಹಾಗಾಗಿ ಯುವತಿಯು ಪೊಲೀಸ್ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತ ಯುವತಿಯ ಸ್ನೇಹಿತ ಮಧ್ಯಾಹ್ನ ತನ್ನೊಂದಿಗೆ ವಾಕಿಂಗ್‌ಗೆ ಬರುವಂತೆ ಆಮಿಷವೊಡ್ಡಿ, ನಂತರ ಲಾಡ್ಜ್‌ಗೆ ಕರೆದೊಯ್ದು, ಅಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅಧಿಕಾರಿ ಹೇಳಿದ್ದಾರೆ. ಇತರ ಇಬ್ಬರು ಆರೋಪಿಗಳು ಕೃತ್ಯವನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

“ಈ ಪಿತೂರಿಯಲ್ಲಿ ಭಾಗಿಯಾಗಿದ್ದ ಇಬ್ಬರು ಪುರುಷರು ಮತ್ತು ಸಂತ್ರಸ್ತೆಯ ಗೆಳತಿಯನ್ನು ನಾವು ಬಂಧಿಸಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಕೃಷ್ಣದೇವ್ ಖರಾಡೆ ಹೇಳಿದ್ದಾರೆ. ಮೂವರನ್ನು ಫೆಬ್ರವರಿ 12 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಆರೋಪಿಗಳನ್ನು 22 ವರ್ಷದ ಚಂದ್ ಖಾನ್ ಮತ್ತು ಅವರ ಇಬ್ಬರು ಸಹಚರರಾದ ಜಮೀರ್ ಖಾನ್ (22) ಮತ್ತು 20 ವರ್ಷದ ಕವಿತಾ ಎಂದು ಗುರುತಿಸಲಾಗಿದೆ. ಅರೋಪಿಯು ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಅದನ್ನು ತನ್ನ ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸಿ, ವೀಡಿಯೊವನ್ನು ಸಂತ್ರಸ್ತೆಯೊಂದಿಗೆ ವಾಟ್ಸಾಪ್‌ನಲ್ಲಿ ಹಂಚಿಕೊಂಡಿದ್ದಾನೆ. ಯುವತಿಯು ತನ್ನೊಂದಿಗೆ ಲೈಂಗಿಕ ಸಂಬಂಧವನ್ನು ಮುಂದುವರಿಸದಿದ್ದರೆ, ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವುದಾಗಿ ಬೆದರಿಸಿದ್ದನು.

ಪೊಲೀಸರು ನಡೆಸಿದ್ದ ಹೆಚ್ಚಿನ ತನಿಖೆಯಲ್ಲಿ ಜಮೀರ್ ಖಾನ್ ಮತ್ತು ಕವಿತಾ ಎಂಬ ಇಬ್ಬರು ಆರೋಪಿಗಳು ಈ ಕೃತ್ಯದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು, ಅವರು ಹಲ್ಲೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವುದಾಗಿ ಮತ್ತು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಅಂತಿಮವಾಗಿ, ವೀಡಿಯೊ ವೈರಲ್ ಆಗಿತ್ತು.

ಸುಮಾರು ಒಂದು ತಿಂಗಳ ಕಾಲ ಮೌನವಾಗಿದ್ದ ಯುವತಿ ಅಂತಿಮವಾಗಿ ಭಿವಂಡಿ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ದೂರಿನ ಮೇರೆಗೆ ಪೊಲೀಸರು ಚಂದ್ ಖಾನ್, ಜಮೀರ್ ಖಾನ್ ಮತ್ತು ಕವಿತಾ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಕೃಷ್ಣ ದೇವ್ ಖರಡೆ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ದೃಢಪಡಿಸಿದ್ದಾರೆ, ನ್ಯಾಯಾಲಯವು ಅವರನ್ನು ಬುಧವಾರದವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.

ಇದನ್ನೂಓದಿ:  ಮೈಸೂರು | ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಪೋಸ್ಟ್ : ಆರೋಪಿ ಸುರೇಶ್ ಬಂಧನ

ಮೈಸೂರು | ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಪೋಸ್ಟ್ : ಆರೋಪಿ ಸುರೇಶ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...