Homeಮುಖಪುಟಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

- Advertisement -
- Advertisement -

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ ಮುಂದಿನ ನಡೆ ಏನು ಎಂಬ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. ಅಲ್ಲದೆ, ಎರಡೂ ಕಡೆಯ ನಾಯಕರಿಗೂ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಆತಂಕ ಶುರುವಾಗಿದೆ ಎಂದು indianexpress.com ವರದಿ ಮಾಡಿದೆ.

ಎನ್‌ಸಿಪಿ (ಎಸ್‌ಪಿ) ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಅವರು ಮಂಗಳವಾರ ಸಂಜೆ ಮುಖ್ಯಮಂತ್ರಿ ದೇವೆಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿದ್ದು, ಇದಕ್ಕೂ ಮುನ್ನ, ದಕ್ಷಿಣ ಮುಂಬೈನ ಸಿಲ್ವರ್ ಓಕ್ ನಿವಾಸದಲ್ಲಿ ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ. ಇನ್ನು ಆಡಳಿತಾರೂಢ ಎನ್‌ಸಿಪಿ ನಾಯಕರಾದ ಸುನಿಲ್ ತತ್ಕರೆ ಮತ್ತು ಪ್ರಫುಲ್ ಪಟೇಲ್ ಕೂಡ ಮುಖ್ಯಮಂತ್ರಿಯನ್ನು ಪ್ರತ್ಯೇಕವಾಗಿ ಭೇಟಿಯಾಗಿದ್ದಾರೆ.

ಸಭೆಯಲ್ಲಿ ಭಾಗವಹಿಸಿದ್ದ ನಾಯಕರಾಗಲಿ ಅಥವಾ ಮುಖ್ಯಮಂತ್ರಿಯ ಕಚೇರಿಯಾಗಲಿ ಅಲ್ಲಿ ಏನು ಚರ್ಚೆಯಾಗಿದೆ ಎಂಬ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆಡಳಿತಾರೂಢ ಎನ್‌ಸಿಪಿ ಮತ್ತು ಎನ್‌ಸಿಪಿ (ಎಸ್‌ಪಿ) ಎರಡೂ ಬಣಗಳ ಮೂಲಗಳ ಪ್ರಕಾರ, ಈ ಸಭೆಯ ಕಾರ್ಯಸೂಚಿ (ಅಜೆಂಡಾ) ಏನೆಂಬುದು ತಮಗೂ ತಿಳಿದಿಲ್ಲ ಎಂದು ಹೇಳಿದ್ದಾರೆ.

ಜುಲೈ 2023ರಲ್ಲಿ ಅಜಿತ್ ಪವಾರ್ ಅವರು ಅಖಂಡ ಎನ್‌ಸಿಪಿಯನ್ನು ಒಡೆದು ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಸೇರಿದ ನಂತರ, ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಪಕ್ಷವು ಎದುರಿಸುತ್ತಿರುವ ಅತಿ ದೊಡ್ಡ ಕಾರ್ಯತಂತ್ರದ ಸಂದಿಗ್ಧತೆಯ ಸಮಯದಲ್ಲಿಯೇ ಈ ಸಭೆಗಳು ನಡೆದಿವೆ.

ಎನ್‌ಸಿಪಿ (ಎಸ್‌ಪಿ) ಪಕ್ಷದ ಒಟ್ಟು 10 ಶಾಸಕರಲ್ಲಿ ಕನಿಷ್ಠ ಅರ್ಧದಷ್ಟು ಶಾಸಕರು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಸೇರಲು ಒಲವು ತೋರಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಈ ಹಿಂದೆ indianexpress.com ವರದಿ ಮಾಡಿತ್ತು. ವಿರೋಧ ಪಕ್ಷದಲ್ಲಿಯೇ ಉಳಿಯುವುದರಿಂದ ತಮ್ಮ ಕ್ಷೇತ್ರಗಳಿಗೆ ಅಭಿವೃದ್ಧಿ ಅನುದಾನ ಮತ್ತು ಆಡಳಿತಾತ್ಮಕ ಅನುಮತಿಗಳನ್ನು ಪಡೆಯುವುದು ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿದೆ ಎಂಬುದು ಈ ಶಾಸಕರ ವಾದವಾಗಿದೆ.

ಜಯಂತ್ ಪಾಟೀಲ್ ಅವರು ಇತ್ತೀಚೆಗೆ ಪಕ್ಷದ ಶಾಸಕರಿಗೆ ಈ ಭಾವನೆಯನ್ನು ತಿಳಿಸಿದ್ದು, ಬಹುಪಾಲು ಶಾಸಕರು ಎನ್‌ಡಿಎ ಮೈತ್ರಿಕೂಟದತ್ತ ಒಲವು ಹೊಂದಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಶರದ್ ಪವಾರ್ ಅವರು ಈವರೆಗೆ ಮೌನವಾಗಿಯೇ ಉಳಿದಿದ್ದು, ಪಕ್ಷದ ಮುಂದಿನ ನಡೆಯ ಬಗ್ಗೆ ಸಾರ್ವಜನಿಕವಾಗಿ ಯಾವುದೇ ಮುನ್ಸೂಚನೆ ನೀಡಿಲ್ಲ ಎಂದು ವರದಿ ಉಲ್ಲೇಖಿಸಿದೆ.

ವಿಧಾನಸಭೆಯಲ್ಲಿ 10 ಶಾಸಕರು ಮತ್ತು ಲೋಕಸಭೆಯಲ್ಲಿ 8 ಸಂಸದರನ್ನು ಹೊಂದಿರುವ ಎನ್‌ಸಿಪಿ (ಎಸ್‌ಪಿ) ಮಹಾರಾಷ್ಟ್ರದ ಆರು ಪ್ರಮುಖ ರಾಜಕೀಯ ಪಕ್ಷಗಳಲ್ಲೇ ಅತ್ಯಂತ ಚಿಕ್ಕದಾಗಿದ್ದರೂ, ಮುಂಬರುವ ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್) ಮಸೂದೆ ಸೇರಿದಂತೆ ಪ್ರಮುಖ ಕಾನೂನುಗಳ ಅಂಗೀಕಾರಕ್ಕಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ತನ್ನ ಸಂಸದರ ಬಲವನ್ನು ಹೆಚ್ಚಿಸಿಕೊಳ್ಳಲು ನೋಡುತ್ತಿರುವ ಈ ಸಮಯದಲ್ಲಿ ಅದರ ಸಂಸದೀಯ ಶಕ್ತಿ ಮಹತ್ವದ್ದಾಗಿದೆ. ಎನ್‌ಸಿಪಿ (ಎಸ್‌ಪಿ) ನಂತಹ ಸಣ್ಣ ಪಕ್ಷಗಳ ಬೆಂಬಲವನ್ನು ಪಡೆಯಲು ಎನ್‌ಡಿಎ ಸಿದ್ಧವಿರಬಹುದು ಎಂದು ಪಕ್ಷದ ನಾಯಕರು ನಂಬಿದ್ದಾರೆ.

ಆದರೆ, ಈ ರಾಜಕೀಯ ಗೊಂದಲ ಮತ್ತು ಬದಲಾವಣೆಗಳು ಕೇವಲ ಶರದ್ ಪವಾರ್ ಅವರ ಬಣಕ್ಕೆ ಮಾತ್ರ ಸೀಮಿತವಾಗಿ ಉಳಿದಿಲ್ಲ. ಎರಡೂ ಎನ್‌ಸಿಪಿ ಬಣಗಳ ನಾಯಕರ ಪ್ರಕಾರ, ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಪಕ್ಷವು ಮೊದಲಿಗೆ ಅಜಿತ್ ಪವಾರ್ ಬಣದೊಂದಿಗೆ ರಾಜಿಯಾಗುವ ಯಾವುದೇ ಪ್ರಯತ್ನ ನಡೆಸಿಲ್ಲ. ಬದಲಿಗೆ, ಕಾಂಗ್ರೆಸ್ ಜೊತೆ ವಿಲೀನವಾಗುವುದು ಅಥವಾ ಎನ್‌ಡಿಎ ಮೈತ್ರಿಕೂಟದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವಂತಹ ಆಯ್ಕೆಗಳ ಬಗ್ಗೆ ಸಾರ್ವಜನಿಕವಾಗಿ ಆಲೋಚಿಸುತ್ತಿದೆ. ಇದು ಆಡಳಿತಾರೂಢ ಅಜಿತ್ ಪವಾರ್ ಅವರ ಎನ್‌ಸಿಪಿ ಬಣದೊಳಗೂ ತಲ್ಲಣ ಮೂಡಿಸಿದ್ದು, ತಮ್ಮ ರಾಜಕೀಯ ನಿಲುವು ಹಾಗೂ ಸುನೇತ್ರಾ ಪವಾರ್ ಅವರ ನಾಯಕತ್ವದ ಕುರಿತು ಆಂತರಿಕ ಚರ್ಚೆಗಳು ತೀವ್ರಗೊಳ್ಳುವಂತೆ ಮಾಡಿದೆ.

ಮಂಗಳವಾರ ರಾತ್ರಿಯ ಸಭೆಗಳಿಗಿಂತ ಒಂದು ದಿನ ಮುಂಚಿತವಾಗಿ, ಎನ್‌ಸಿಪಿ ಮಾಜಿ ರಾಷ್ಟ್ರೀಯ ಕಾರ್ಯದರ್ಶಿ ಸಚ್ಚಿದಾನಂದ ಸಿಂಗ್ ಅವರು ಪಕ್ಷದ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಅವರ ಆಯ್ಕೆಯನ್ನು ಪ್ರಶ್ನಿಸಿ ಮತ್ತು ಸಾಂಸ್ಥಿಕ ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಕಾನೂನು ನೋಟಿಸ್ ಜಾರಿ ಮಾಡಿದ್ದರು. ಈ ಸಭೆಗಳು ಆ ನೋಟಿಸ್ ಬೆನ್ನಲ್ಲೇ ನಡೆದಿವೆ. ಸೋಮವಾರ ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷ ಸುನಿಲ್ ತತ್ಕರೆ ಅವರು ಈ ನೋಟಿಸ್ ಅನ್ನು “ಆಧಾರರಹಿತ” ಎಂದು ತಳ್ಳಿಹಾಕಿದ್ದರು, ಪಕ್ಷವು ಸುನೇತ್ರಾ ಪವಾರ್ ಅವರ ನಾಯಕತ್ವದ ಹಿಂದೆ ಒಗ್ಗಟ್ಟಾಗಿದೆ ಎಂದು ಪ್ರತಿಪಾದಿಸಿದ್ದರು ಮತ್ತು ಇದಕ್ಕೆ ಕಾನೂನುಬದ್ಧ ಪ್ರತಿಕ್ರಿಯೆಯನ್ನು ಪಕ್ಷದ ಪ್ರಮುಖ ಸಮಿತಿ (ಕೋರ್ ಕಮಿಟಿ) ನಿರ್ಧರಿಸುತ್ತದೆ ಎಂದು ಹೇಳಿದ್ದರು.

ಆದರೆ ಈ ನೋಟಿಸ್ ಆಡಳಿತಾರೂಢ ಎನ್‌ಸಿಪಿ ಬಣದೊಳಗಿನ ಅಸಮಾಧಾನವನ್ನು ಬಹಿರಂಗಪಡಿಸಿದೆ. ಪಕ್ಷದ ಸಾಂಸ್ಥಿಕ ವ್ಯವಹಾರಗಳಲ್ಲಿ ರಾಜ್ಯಸಭಾ ಸಂಸದ ಪಾರ್ಥ್ ಪವಾರ್ ಅವರ ಪ್ರಭಾವ ಹೆಚ್ಚುತ್ತಿರುವುದರ ವಿರುದ್ಧ ನಾಯಕರಲ್ಲಿ ಬೆಳೆಯುತ್ತಿರುವ ಅತೃಪ್ತಿಯೇ ಈ ನೋಟಿಸ್‌ಗೆ ಕಾರಣ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜುಲೈ 2023ರ ಪಕ್ಷದ ಸೀಳಿನ ನಂತರ ಏರಿಳಿತಗಳನ್ನು ಕಾಣುತ್ತಿರುವ ಈ ರಾಜಕೀಯ ಕಥೆಯಲ್ಲಿ, ಈ ಹೊಸ ಊಹಾಪೋಹಗಳು ಮತ್ತೊಂದು ಪ್ರಮುಖ ತಿರುವನ್ನು ಸೂಚಿಸುತ್ತವೆ. ಈ ವರ್ಷದ ಜನವರಿಯಲ್ಲಿ ನಡೆದ ಬಿಎಂಸಿ ಚುನಾವಣೆ ಫಲಿತಾಂಶಗಳ ಮುನ್ನ ಮತ್ತು ತಕ್ಷಣವೇ, ಎನ್‌ಸಿಪಿಯ ಎರಡೂ ಬಣಗಳು ಮತ್ತೆ ಒಂದಾಗಬಹುದು ಎಂಬ ವ್ಯಾಪಕ ಚರ್ಚೆಗಳು ನಡೆದಿದ್ದವು. ಆದರೆ, ಜನವರಿ ಅಂತ್ಯದಲ್ಲಿ ಅಜಿತ್ ಪವಾರ್ ಅವರ ನಿಧನದ ನಂತರ ಆ ಚರ್ಚೆಗಳು ತಣ್ಣಗಾಗಿದ್ದವು. ಕಳೆದ ಎರಡು ವಾರಗಳಲ್ಲಿ ಈ ವಿಷಯ ಮತ್ತೆ ಮುನ್ನೆಲೆಗೆ ಬಂದಿದ್ದು, ಮೊದಲು ಎನ್‌ಸಿಪಿ (ಎಸ್‌ಪಿ) ಪಕ್ಷವು ಕಾಂಗ್ರೆಸ್‌ನೊಂದಿಗೆ ವಿಲೀನವಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಯಾಯಿತು. ಆದರೆ ಈ ನಡೆಗೆ ರಾಜ್ಯ ಕಾಂಗ್ರೆಸ್‌ನೊಳಗೆ ವಿರೋಧ ವ್ಯಕ್ತವಾಗಿದೆ ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ, ಚರ್ಚೆಯು ಈಗ ಪಕ್ಷದ ಒಂದು ಬಣವು ಕಾಂಗ್ರೆಸ್ ಬದಲಿಗೆ ಎನ್‌ಡಿಎ ಮೈತ್ರಿಕೂಟವನ್ನು ಸೇರಬಹುದು ಎಂಬ ಸಾಧ್ಯತೆಯತ್ತ ವೇಗವಾಗಿ ತಿರುಗಿದೆ.

ಒಟ್ಟಿನಲ್ಲಿ ಎನ್‌ಸಿಪಿಯ ಎರಡೂ ಬಣಗಳ ಆಂತರಿಕ ವಿಚಾರಗಳು ಗೊಂದಲದ ಗೂಡಾಗಿ ಮಾರ್ಪಟ್ಟಿವೆ. ಅಂತಿಮವಾಗಿ ಸಂಪೂರ್ಣ ಎನ್‌ಸಿಪಿಯನ್ನೇ ತನ್ನತ್ತ ಸೆಳೆದು ಕ್ಷೇತ್ರ ಮರುವಿಂಗಡನೆ ಮಸೂದೆಗೆ (ಸಂವಿಧಾನದ 131ನೇ ತಿದ್ದುಪಡಿ) ಅಂಗೀಕಾರ ಪಡೆಯಲು ಬೇಕಾಗುವ 360 ಸ್ಥಾನಗಳನ್ನು ಎನ್‌ಡಿಎ ಗಳಿಸಿಕೊಳ್ಳು ಸಾಧ್ಯತೆ ದಟ್ಟವಾಗಿದೆ.

ಇತ್ತೀಚೆಗಷ್ಟೇ ಟಿಎಂಸಿಯ ಸಂಸದರನ್ನು ಎನ್‌ಡಿಎ ಸೆಳೆದಿತ್ತು. ಅದರ ಬೆನ್ನಿಗೆ ಎನ್‌ಸಿಪಿಯಲ್ಲಿ ಜಟಾಪಟಿ ಶುರುವಾಗಿದೆ. ಅತ್ತ ತಮಿಳುನಾಡಿನ ಡಿಎಂಕೆಯನ್ನೂ ಬಿಜೆಪಿ ಓಲೈಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...