Homeಕರ್ನಾಟಕರ‍್ಯಾಪಿಡೋ ಪ್ರಕರಣ | ಆದೇಶವನ್ನು ಕಾಯ್ದಿರಿಸಿದ ಹೈಕೋರ್ಟ್

ರ‍್ಯಾಪಿಡೋ ಪ್ರಕರಣ | ಆದೇಶವನ್ನು ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದ ರ‍್ಯಾಪಿಡೋ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ ಸೋಮವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಮೋಟಾರು ವಾಹನಗಳ ಕಾಯ್ದೆಯಡಿಯಲ್ಲಿ ನೀಡಲಾದ ಸೂಕ್ತ ಅನುಮತಿಗಳೊಂದಿಗೆ ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸುವಂತೆ ಸಂಸ್ಥೆಯು ಕೇಳಿತ್ತು. ರ‍್ಯಾಪಿಡೋ ಪ್ರಕರಣ

ಕಳೆದ ಮೂರು ವರ್ಷಗಳಿಂದ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರ ಏಕಸದಸ್ಯ ಪೀಠವು ಡಿಸೆಂಬರ್ ಮೊದಲ ಅಥವಾ ಎರಡನೇ ವಾರದಲ್ಲಿ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2021ರ ಜುಲೈ 19ರಂದು ನೀಡಲಾಗಿದ್ದ ಬೈಕ್-ಟ್ಯಾಕ್ಸಿ ಕಾರ್ಯಾಚರಣೆಗಳನ್ನು ವಿರೋಧಿಸುವ ಸರ್ಕಾರಿ ಆದೇಶವನ್ನು ನ್ಯಾಯಾಲಯವು ರದ್ದುಗೊಳಿಸಬೇಕೆಂದು ರ‍್ಯಾಪಿಡೊ ಬಯಸಿದೆ. 2021 ರಲ್ಲಿ, ಸಂಸ್ಥೆಯ ಬೈಕ್ ಟ್ಯಾಕ್ಸಿಗಳ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ನ್ಯಾಯಾಲಯವು ಮಧ್ಯಂತರ ಆದೇಶವನ್ನು ನೀಡಿತ್ತು.

10 ಲಕ್ಷಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿ ಸವಾರರು ಮತ್ತು ಪ್ರತಿ ವಾರ ಸುಮಾರು 20 ಲಕ್ಷ ಸವಾರಿಗಳೊಂದಿಗೆ ಕಾರ್ಯಾಚರಣೆ ನಡೆಸುತ್ತಿದ್ದು, ಇದು ಕರ್ನಾಟಕದ ಸಾರಿಗೆ ಪರಿಸರ ವ್ಯವಸ್ಥೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದೆ ಎಂದು ರ‍್ಯಾಪಿಡೊ ವಾದಿಸಿದೆ.

ದ್ವಿಚಕ್ರ ವಾಹನಗಳಿಗೆ ಕಾಂಟ್ರಾಕ್ಟ್ ಕ್ಯಾರೇಜ್ ಪರ್ಮಿಟ್ ಮಂಜೂರಾತಿಗೆ ಸಂಬಂಧಿಸಿದಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನೀಡಿರುವ ಸಲಹೆ ಮತ್ತು ಮೋಟಾರು ವಾಹನ ಕಾಯ್ದೆಯ ನಿಬಂಧನೆಗಳಿಗೆ ಅನುಗುಣವಾಗಿ ಸಾರಿಗೆ ಇಲಾಖೆಯು ಹೆಚ್ಚು ಸಮಗ್ರ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ರಾಪಿಡೋದ ಸಹ ಸಂಸ್ಥಾಪಕ ಪವನ್ ಗುಂಟುಪಲ್ಲಿ ಹೇಳಿದ್ದಾರೆ. ರ‍್ಯಾಪಿಡೋ ಪ್ರಕರಣ

ಅದಾಗ್ಯೂ, ರಾಜ್ಯ ಸರ್ಕಾರವು ಬಿಳಿ ನಂಬರ್ ಪ್ಲೇಟ್‌ಗಳನ್ನು ಹೊಂದಿರುವ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯು ಕರ್ನಾಟಕ ಮೋಟಾರು ವಾಹನ ನಿಯಮಗಳನ್ನು ಉಲ್ಲಂಘಿಸುತ್ತದೆ, ಅಂತಹ ದ್ವಿಚಕ್ರ ವಾಹನಗಳು ಕಾನೂನಿನ ಪ್ರಕಾರ ವಾಣಿಜ್ಯ ಕಾರ್ಯಾಚರಣೆಗಳನ್ನು ನಡೆಸುವಂತಿಲ್ಲ ಎಂದು ವಾದಿಸಿದೆ. ಜೊತೆಗೆ ಸರ್ಕಾರವು ಬೈಕ್-ಟ್ಯಾಕ್ಸಿಗಳಲ್ಲಿ ಪ್ರಯಾಣಿಕರಿಗೆ ಸುರಕ್ಷತಾ ಕ್ರಮಗಳ ಕೊರತೆಯನ್ನು ಕೂಡಾ ಉಲ್ಲೇಖಿಸಿದ್ದು, ಅವರ ಕಾರ್ಯಾಚರಣೆಯು ಕಾನೂನುಬಾಹಿರ ಎಂದು ಹೇಳಿದೆ.

ಬೈಕು ಟ್ಯಾಕ್ಸಿಗಳು ಬೆಂಗಳೂರಿನಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿವೆ ಮತ್ತು ಅವರ ಕಡಿಮೆ ವೆಚ್ಚದ ಸಾರಿಗೆಯ ಕಾರಣಕ್ಕೆ ಹಲವಾರು ಆಟೋರಿಕ್ಷಾ ಚಾಲಕರ ಜೀವನೋಪಾಯಕ್ಕೆ ಹಾನಿಯಾಗಿದೆ ಎಂದು ಆಟೋರಿಕ್ಷಾ ಚಾಲಕರು ವಾದಿಸುತ್ತಿದ್ದಾರೆ. ಬೈಕ್ ಟ್ಯಾಕ್ಸಿಗಳ ವಿರುದ್ಧ ಆಟೋ ಒಕ್ಕೂಟಗಳು ಅನೇಕ ಪ್ರತಿಭಟನೆಗಳನ್ನು ನಡೆಸಿವೆ. ಕೆಲವು ಸಂದರ್ಭಗಳಲ್ಲಿ, ಆಟೋರಿಕ್ಷಾ ಚಾಲಕರು ಮತ್ತು ಬೈಕ್ ಟ್ಯಾಕ್ಸಿ ನಿರ್ವಾಹಕರ ನಡುವೆ ದೈಹಿಕ ಘರ್ಷಣೆ ಕೂಡಾ ನಡೆದಿತ್ತು.

ರ‍್ಯಾಪಿಡೋ ಬೈಕ್ ಸವಾರರ ಮೇಲೆ ದಾಳಿ ಮಾಡುವ, ಬೆದರಿಸುವ ಅಥವಾ ಕಿರುಕುಳ ನೀಡುವ ಆಟೋರಿಕ್ಷಾ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಏಪ್ರಿಲ್‌ನಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ದಿ ಬೈಕ್ ಟ್ಯಾಕ್ಸಿ ವೆಲ್ಫೇರ್ ಅಸೋಸಿಯೇಷನ್ ​​ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ ಹೈಕೋರ್ಟ್‌ ಈ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: ಹಾಸನ: ಅರಕಲಗೂಡಿನಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಕುಟುಂಬದ ಮೇಲೆ ಹಲ್ಲೆ

ಹಾಸನ: ಅರಕಲಗೂಡಿನಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಕುಟುಂಬದ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...