Homeಮುಖಪುಟಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

- Advertisement -
- Advertisement -

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ 21 ದಿನಗಳ ಪೆರೋಲ್ ಮಂಜೂರು ಮಾಡಿದೆ. ರೋಹ್ಟಕ್‌ನ ಸುನೇರಿಯಾ ಜೈಲಿನಿಂದ ಆತ ಇಂದು (ಆಗಸ್ಟ್ 25, 2026) ಬೆಳಿಗ್ಗೆ ಸುಮಾರು 6:05ಕ್ಕೆ ಅಧಿಕೃತವಾಗಿ ಹೊರನಡೆದು ಸಿರ್ಸಾದ ಡೇರಾ ಪ್ರಧಾನ ಕಚೇರಿಗೆ ತೆರಳಿದ್ದಾನೆ.

2020ರಿಂದ ಇಂದಿನವರೆಗೆ ರಾಮ್ ರಹೀಮ್ ಜೈಲಿನಿಂದ ತಾತ್ಕಾಲಿಕವಾಗಿ ಬಿಡುಗಡೆ ಹೊಂದುತ್ತಿರುವುದು ಇದು 17ನೇ ಬಾರಿ. ಗಂಭೀರ ಅಪರಾಧಕ್ಕೆ ಶಿಕ್ಷೆಗೊಳಗಾದ ಕೈದಿಗೆ ಕಾನೂನು ವ್ಯವಸ್ಥೆ ಪದೇ ಪದೇ ಇಷ್ಟೊಂದು ಸವಲತ್ತು ನೀಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

“ಅತ್ಯಾಚಾರದಂತಹ ಘೋರ ಅಪರಾಧ ಮಾಡಿದವನಿಗೆ ಇಷ್ಟೊಂದು ಸುಲಭವಾಗಿ ಪೆರೋಲ್ ಸಿಗುವುದಾದರೆ, ಈ ವ್ಯವಸ್ಥೆಯು ಅಪರಾಧಿಗಳಿಗೆ ಯಾವ ರೀತಿಯ ಸಂದೇಶ ನೀಡುತ್ತಿದೆ?” ಎಂದು ಪ್ರಮುಖ ಮಾಧ್ಯಮಗಳು ಮತ್ತು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುತ್ತಿದ್ದಾರೆ.

ರಾಮ್ ರಹೀಮ್ 2017ರಲ್ಲಿ ವಿಶೇಷ ಸಿಬಿಐ ನ್ಯಾಯಾಲಯದಿಂದ ದೋಷಿ ಎಂದು ತೀರ್ಪು ಪಡೆದಿದ್ದು, ಪ್ರತಿ ಅತ್ಯಾಚಾರ ಪ್ರಕರಣಕ್ಕೆ 10 ವರ್ಷದಂತೆ ಒಟ್ಟು 20 ವರ್ಷಗಳ ಶಿಕ್ಷೆಗೆ ಒಳಗಾಗಿದ್ದಾನೆ. ಪೆರೋಲ್ ಅವಧಿಯಲ್ಲಿ ಆತ ಹರಿಯಾಣದ ಸಿರ್ಸಾದಲ್ಲಿರುವ ತನ್ನ ಡೇರಾ ಪ್ರಧಾನ ಕಚೇರಿಯಲ್ಲೇ ಇರಲಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮೊದಲು ಮೇ 2026ರಲ್ಲಿ 30 ದಿನಗಳು ಮತ್ತು ಜನವರಿ 2026ರಲ್ಲಿ 40 ದಿನಗಳ ಪೆರೋಲ್ ಪಡೆದಿದ್ದನು. ಅತ್ಯಾಚಾರದಂತಹ ಘೋರ ಅಪರಾಧಕ್ಕಾಗಿ 20 ವರ್ಷಗಳ ಕಠಿಣ ಜೈಲು ಶಿಕ್ಷೆಗೆ ಗುರಿಯಾಗಿರುವ ಈತ ಪೆರೋಲ್ ಹಾಗೂ ಫರ್ಲೋ ಸವಲತ್ತುಗಳ ಮೂಲಕ ಈಗಾಗಲೇ ಬರೋಬ್ಬರಿ 400ಕ್ಕೂ ಹೆಚ್ಚು ದಿನಗಳನ್ನು ಜೈಲಿನಿಂದ ಹೊರಗೆ ಸಾರ್ವಜನಿಕ ಜೀವನದಲ್ಲೇ ಕಳೆದಿದ್ದಾನೆ. 2017ರಲ್ಲಿ ದೋಷಿ ಎಂದು ತೀರ್ಪು ಬಂದಾಗಿನಿಂದ ನಿರಂತರವಾಗಿ ತಾತ್ಕಾಲಿಕ ಬಿಡುಗಡೆ ಪಡೆಯುತ್ತಿರುವ ಈತ, ಕೃಷಿ ಕೆಲಸ ಹಾಗೂ ಧಾರ್ಮಿಕ ಸಮಾವೇಶಗಳ ನೆಪದಲ್ಲಿ ಸುಧೀರ್ಘ ಅವಧಿಗೆ ಜೈಲಿನಿಂದ ಹೊರಗೇ ಉಳಿದಿರುವುದು ಕಾನೂನು ವ್ಯವಸ್ಥೆ ಮತ್ತು ಸರ್ಕಾರದ ನಡೆ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ರಾಮ್ ರಹೀಮ್‌ಗೆ ಮಾತ್ರವಲ್ಲ: ಇತರೆ ಪ್ರಬಲ ಗುರುಗಳಿಗೂ ಪದೇ ಪದೇ ಪೆರೋಲ್!

ರಾಮ್ ರಹೀಮ್‌ನಂತೆಯೇ ಇತರೆ ಪ್ರಭಾವಿ ಧಾರ್ಮಿಕ ನಾಯಕರಿಗೂ ಪದೇ ಪದೇ ಪೆರೋಲ್, ಫರ್ಲೋ ಅಥವಾ ವೈದ್ಯಕೀಯ ಜಾಮೀನು ಸಿಗುತ್ತಿರುವುದು ಗಮನಾರ್ಹ. ಇದು “ಪ್ರಭಾವವುಳ್ಳವರಿಗೆ ಬೇರೆ ನಿಯಮ” ಎಂಬ ಟೀಕೆಗಳನ್ನು ಬಲಪಡಿಸುತ್ತಿದೆ.

ಆಸಾರಾಮ್ ಬಾಪು: ಅಲ್ಪವಯಸ್ಕ ಹುಡುಗಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾದ ಈ ಸ್ವಯಂ-ಘೋಷಿತ ಗುರುವಿಗೆ ಇತ್ತೀಚೆಗೆ (ಆಗಸ್ಟ್ 2026) ರಾಜಸ್ಥಾನ ಹೈಕೋರ್ಟ್ 20 ದಿನಗಳ ನಿಯಮಿತ ಪೆರೋಲ್ ಮಂಜೂರು ಮಾಡಿದೆ. ಇದು ಅವರ ಮೊದಲ ನಿಯಮಿತ ಪೆರೋಲ್. ಇದಕ್ಕೂ ಮೊದಲು 2024-2026ರ ನಡುವೆ ಹಲವಾರು ಬಾರಿ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮತ್ತು ಪೆರೋಲ್ ಪಡೆದಿದ್ದಾರೆ. 13 ವರ್ಷಗಳಿಗೂ ಹೆಚ್ಚು ಜೈಲಿನಲ್ಲಿದ್ದರೂ, ಆರೋಗ್ಯ ಕಾರಣಗಳನ್ನು ಮುಂದಿಟ್ಟುಕೊಂಡು ಪದೇ ಪದೇ ಬಿಡುಗಡೆ ಪಡೆಯುತ್ತಿರುವುದು ತೀವ್ರ ಟೀಕೆಗೆ ಒಳಗಾಗಿದೆ.

ಮುರುಘಾ ಶ್ರೀ (ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿ): ಕರ್ನಾಟಕದಲ್ಲಿ ಪೋಕ್ಸೋ ಪ್ರಕರಣಗಳಲ್ಲಿ ಆರೋಪಿತರಾಗಿದ್ದ ಶಿವಮೂರ್ತಿ ಮುರುಘಾ ಸ್ವಾಮೀಜಿ ಹಲವಾರು ಬಾರಿ ಜಾಮೀನು ಮತ್ತು ನ್ಯಾಯಾಂಗ ಬಂಧನದಿಂದ ಬಿಡುಗಡೆ ಪಡೆದಿದ್ದರು. 2022ರಿಂದ 2025ರವರೆಗೆ ಪ್ರಕರಣಗಳು ನಡೆದು, ನವೆಂಬರ್ 2025ರಲ್ಲಿ ಒಂದು ಪ್ರಮುಖ ಪೋಕ್ಸೋ ಪ್ರಕರಣದಲ್ಲಿ ನಿರ್ದೋಷಿ ಎಂದು ಘೋಷಿಸಲಾಗಿದೆ. ಆದರೂ ಆರಂಭಿಕ ಹಂತಗಳಲ್ಲಿ ಅವರಿಗೆ ಪದೇ ಪದೆ ಜೈಲು-ಬಿಡುಗಡೆ ದೊರೆತದ್ದು ಸಾರ್ವಜನಿಕ ಚರ್ಚೆಗೆ ಕಾರಣವಾಗಿತ್ತು.

ಮತ್ತೊಂದೆಡೆ, ಉಮರ್ ಖಾಲಿದ್ ಅವರಂತಹ ಸಾಮಾಜಿಕ ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ವಿಚಾರಣಾಧೀನ ಕೈದಿಗಳಾಗಿ ವರ್ಷಗಳಿಂದ ಜಾಮೀನಿಗಾಗಿ ಸುದೀರ್ಘ ಹೋರಾಟ ನಡೆಸಬೇಕಾಗಿ ಬಂದಿರುವುದು ನಮ್ಮ ವ್ಯವಸ್ಥೆಯಲ್ಲಿ ಎದ್ದು ಕಾಣುವ ದೊಡ್ಡ ವ್ಯತ್ಯಾಸವಾಗಿದೆ. ಸ್ಟಾನ್ ಸ್ವಾಮಿ ಅವರಂತಹ ಹಿರಿಯ ಹೋರಾಟಗಾರರು ಜೈಲಿನಲ್ಲಿದ್ದಾಗಲೇ ಕೊನೆಯುಸಿರೆಳೆದದ್ದು ಹಾಗೂ ಆನಂದ್ ತೆಲ್ತುಂಬ್ಡೆ ಅವರಂತಹ ಸಮಾಜಚಿಂತಕರು ಸುದೀರ್ಘ ಕಾಯುವಿಕೆಯ ನಂತರವಷ್ಟೇ ಜಾಮೀನು ಪಡೆದದ್ದನ್ನೂ ಇಲ್ಲಿ ಸ್ಮರಿಸಬಹುದು.

ಪ್ರಭಾವಿ ಧಾರ್ಮಿಕ ನಾಯಕರಿಗೆ ಪದೇ ಪದೇ ಸಿಗುತ್ತಿರುವ ಪೆರೋಲ್ ಸವಲತ್ತು ಮತ್ತು ಹೋರಾಟಗಾರರ ಜಾಮೀನು ಅರ್ಜಿಗಳಿಗೆ ಎದುರಾಗುವ ಸವಾಲುಗಳ ನಡುವಿನ ಈ ಕಟು ವ್ಯತ್ಯಾಸವು, “ಕಾನೂನಿನ ಕಣ್ಣಿನಲ್ಲಿ ಎಲ್ಲರೂ ಸಮಾನರೇ?” ಹಾಗೂ “ವ್ಯವಸ್ಥೆಯು ವ್ಯಕ್ತಿಯ ಪ್ರಭಾವವನ್ನು ನೋಡಿ ನಿರ್ಧಾರ ತೆಗೆದುಕೊಳ್ಳುತ್ತಿದೆಯೇ?” ಎಂಬ ಪ್ರಮುಖ ಪ್ರಶ್ನೆಗಳನ್ನು ಸಾರ್ವಜನಿಕ ವಲಯದಲ್ಲಿ ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...