Homeಮುಖಪುಟಅತ್ಯಾಚಾರಿ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು; ದೆಹಲಿ ಹೈಕೋರ್ಟ್ ಮುಂದೆ ಸಂತ್ರಸ್ತೆ ತಾಯಿ ಪ್ರತಿಭಟನೆ

ಅತ್ಯಾಚಾರಿ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು; ದೆಹಲಿ ಹೈಕೋರ್ಟ್ ಮುಂದೆ ಸಂತ್ರಸ್ತೆ ತಾಯಿ ಪ್ರತಿಭಟನೆ

- Advertisement -
- Advertisement -

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ದೆಹಲಿ ಹೈಕೋರ್ಟ್ ಹೊರಗೆ ಶುಕ್ರವಾರ (ಡಿ.26) ಪ್ರತಿಭಟನೆ ನಡೆಸಲಾಯಿತು. ಸೆಂಗಾರ್‌ಗೆ ನಿಡುರವ ಜಾಮೀನು ತಿರಸ್ಕರಿಸಬೇಕೆಂದು ಸಂತ್ರಸ್ತೆಯ ತಾಯಿ ಒತ್ತಾಯಿಸಿದ್ದು, ಹೈಕೋರ್ಟ್ ತೀರ್ಪಿನಲ್ಲಿ ನಂಬಿಕೆ ಕಳೆದುಕೊಂಡಿರುವುದಾಗಿ ಆಕ್ರೋಶ ವ್ಯಕ್ತಪಡಿಸಿ ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸುವುದಾಗಿ ಹೇಳಿದ್ದಾರೆ.

“ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ನ್ಯಾಯ ಸಿಗದಿದ್ದರೆ, ನಾವು ಬೇರೆ ದೇಶಕ್ಕೆ ಹೋಗುತ್ತೇವೆ… ನನ್ನ ಗಂಡನ ಕೊಲೆಗೆ ಕಾರಣರಾದ ವ್ಯಕ್ತಿಯನ್ನು ತಕ್ಷಣವೇ ಗಲ್ಲಿಗೇರಿಸಬೇಕು” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ನ್ಯಾಯಾಲಯದ ಹೊರಗೆ ಪ್ರತಿಭಟನೆ ಮಾಡುವುದು ನಿಷೇಧಿಸಲಾಗಿದೆ, ಕಾನೂನುಬಾಹಿರ ಎಂದು ಪೊಲೀಸರು ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿದರು. ನೀವು ಪ್ರತಿಭಟಿಸಲು ಬಯಸಿದರೆ ಜಂತರ್ ಮಂತರ್‌ಗೆ ತೆರಳಬೇಕು ಎಂದು ಸಲಹೆ ನೀಡಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ ಮಹಿಳಾ ಕಾರ್ಯಕರ್ತೆ ಯೋಗಿತಾ ಭಯನಾ, “ಉನ್ನಾವ್ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ನೀಡುವಂತೆ ದೆಹಲಿ ಹೈಕೋರ್ಟ್ ಅನ್ನು ಶಾಂತಿಯುತವಾಗಿ ಸಂಪರ್ಕಿಸಿದ್ದೇವೆ, ನ್ಯಾಯ ಸಿಗದಿದ್ದರೆ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು ಹೇಳಿದರು. ಡಿಸೆಂಬರ್ 23 ರಂದು ಇಂಡಿಯಾ ಗೇಟ್ ಬಳಿ ಸಂತ್ರಸ್ತೆ ಮತ್ತು ಆಕೆಯ ಕುಟುಂಬವು ಸೆಂಗಾರ್ ಶಿಕ್ಷೆಯನ್ನು ಅಮಾನತುಗೊಳಿಸಿದ್ದಕ್ಕಾಗಿ ಕಳವಳ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿತ್ತು.

2017 ರಲ್ಲಿ ಉನ್ನಾವೊದಲ್ಲಿ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಕುಲದೀಪ್ ಸಿಂಗ್ ಸೆಂಗಾರ್ ಅವರನ್ನು ಡಿಸೆಂಬರ್ 2019 ರಲ್ಲಿ ದೋಷಿ ಎಂದು ಘೋಷಿಸಲಾಯಿತು. ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಮಂಗಳವಾರ, ದೆಹಲಿ ಹೈಕೋರ್ಟ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿತು, ಅವರು ಈಗಾಗಲೇ ಪೋಕ್ಸೊ ಕಾಯ್ದೆಯಡಿ ಗರಿಷ್ಠ ಶಿಕ್ಷೆಯನ್ನು ಅನುಭವಿಸಿದ್ದಾರೆ ಎಂದು ಗಮನಿಸಿದರು. ಜಾಮೀನು ನೀಡಿದರೆ ಅವರು ₹15 ಲಕ್ಷ ಬಾಂಡ್ ಸಲ್ಲಿಸಬೇಕಾಗುತ್ತದೆ, ಬಲಿಪಶುವಿನ ಕುಟುಂಬವನ್ನು ಸಂಪರ್ಕಿಸುವುದನ್ನು ನಿಷೇಧಿಸುತ್ತದೆ. ಆದರೆ, ಸೆಂಗಾರ್ ಇನ್ನೂ ಬಂಧನದಲ್ಲಿದ್ದಾರೆ. ಏಕೆಂದರೆ ಬಲಿಪಶುವಿನ ತಂದೆಯ ಕಸ್ಟಡಿ ಸಾವಿಗೆ ಸಂಬಂಧಿಸಿದಂತೆ ಆತನಿಗೆ ಇನ್ನೂ ಜಾಮೀನು ಸಿಕ್ಕಿಲ್ಲ. ಕೊಲೆ ಪ್ರಕರಣದಲ್ಲಿ ಆತನಿಗೆ 10 ವರ್ಷಗಳ ಶಿಕ್ಷೆ ವಿಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...