Homeಮುಖಪುಟರಶ್ಮಿಕಾ ಮಂದಣ್ಣರ ಡೀಪ್‌ಫೇಕ್ ವಿಡಿಯೋ: ಅಸಲಿ ಯುವತಿಯ ಪ್ರತಿಕ್ರಿಯೆ ಇಲ್ಲಿದೆ..

ರಶ್ಮಿಕಾ ಮಂದಣ್ಣರ ಡೀಪ್‌ಫೇಕ್ ವಿಡಿಯೋ: ಅಸಲಿ ಯುವತಿಯ ಪ್ರತಿಕ್ರಿಯೆ ಇಲ್ಲಿದೆ..

- Advertisement -
- Advertisement -

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ಸೋಮವಾರದಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ವಿಡಿಯೋಗೆ ಸಂಬಂಧಪಟ್ಟಂತೆ ವಿಡಿಯೊದಲ್ಲಿರುವ ನಿಜವಾದ ಯುವತಿ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ.

ಝಾರಾ ಪಟೇಲ್ ಎಂಬ ಯುವತಿ ಲಿಫ್ಟ್‌ನಲ್ಲಿ ಪ್ರವೇಶ ಮಾಡುತ್ತಿರುವ ವಿಡಿಯೊ ಇಟ್ಟುಕೊಂಡು ಯಾರೊ ಕಿಡಿಗೇಡಿಗಳು, ರಶ್ಮಿಕಾ ಮಂದಣ್ಣ ಮುಖ ಜೋಡಿಸಿ ವಿಡಿಯೊ ಮಾಡಿ ಹರಿಬಿಟ್ಟಿದ್ದರು. ಈ ವಿಡಿಯೋ ನೋಡಿದ ಎಷ್ಟೋ ಜನರು ಇದು ನಿಜವಾಗಿಯೂ ರಶ್ಮಿಕಾ ಮಂದಣ್ಣ ಅವರದ್ದೇ ವಿಡಿಯೋ ಎಂದು ನಂಬಿಕೊಂಡಿದ್ದರು. ಆದರೆ ಈ ಫೇಕ್​ ವಿಡಿಯೋ ವಿರುದ್ಧ ಅನೇಕರು ಕಿಡಿಕಾರಿದ್ದಾರೆ.

ತಂತ್ರಜ್ಞಾನದ ದುರ್ಬಳಕೆ ಮಾಡಿಕೊಂಡವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈ ಮಧ್ಯೆ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಮತ್ತು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಇಬ್ಬರೂ ಅಪರಾಧಿಗಳ ವಿರುದ್ಧ ಕಾನೂನು ಕ್ರಮಕ್ಕೆ ಕರೆ ನೀಡಿದ್ದರು.

ಇದೊಂದು ಡೀಪ್‌ಫೇಕ್ ವಿಡಿಯೊ ಆಗಿದ್ದು ಹೊರದೇಶದಲ್ಲಿರುವ ಭಾರತೀಯ ಮೂಲದ ಸೋಶಿಯಲ್ ಮೀಡಿಯಾ ಇನ್‌ಫ್ಲುಯೇನ್ಸರ್‌ ಝಾರಾ ಪಟೇಲ್ ಎನ್ನುವ ಯುವತಿಗೆ ಸಂಬಂಧಿಸಿದ್ದು ಎಂದು ಬಹಿರಂಗವಾಗಿದೆ.

ಝಾರಾ ಪಟೇಲ್ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ವಿಡಿಯೊ ಬಗ್ಗೆ ಆಘಾತ ವ್ಯಕ್ತಪಡಿಸಿ ಪೋಸ್ಟ್ ಹಂಚಿಕೊಂಡಿದ್ದು, ”ವಿಡಿಯೊ ನೋಡಿ ನನ್ನ ಮನಸ್ಸು ತೀವ್ರ ಆಘಾತಗೊಂಡಿದೆ” ಎಂದು ಹೇಳಿದ್ದಾರೆ.

”ಸಾಮಾಜಿಕ ಮಾಧ್ಯಮಗಳಲ್ಲಿ ಮಹಿಳೆಯರು ಮತ್ತು ಯುವತಿಯರ ಭವಿಷ್ಯದ ಬಗೆಗಿನ ಚಿಂತೆಯನ್ನು ಈ ವಿಡಿಯೊ ಹುಟ್ಟುಹಾಕಿದೆ. ಭವಿಷ್ಯ ನೋಡಿದರೆ ತುಂಬಾ ಭಯವಾಗುತ್ತಿದೆ” ಎಂದಿದ್ದಾರೆ.

”ನನ್ನ ವಿಡಿಯೋಗೆ ಭಾರತದ ಜನಪ್ರಿಯ ನಟಿಯೊಬ್ಬರ ಮುಖವನ್ನು ಡೀಪ್‌ಫೇಕ್ ಮಾಡಿ ವಿಡಿಯೊ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ. ಡೀಪ್‌ಫೇಕ್‌ ಮಾಡಿರುವುದರಲ್ಲಿ ನನ್ನ ಪಾತ್ರವಿಲ್ಲ. ಇಂಟರ್‌ನೆಟ್‌ನಲ್ಲಿರುವುದೆಲ್ಲ ನಿಜವಲ್ಲ. ಅನುಮಾನ ಬರುವ ವಿಷಯಗಳನ್ನು ದಯವಿಟ್ಟು ಫ್ಯಾಕ್ಟ್ ಚೆಕ್‌ಗೆ ಒಳಪಡಿಸಿ” ಎಂದು ಮನವಿ ಮಾಡಿದ್ದಾರೆ.

ಝಾರಾ ಪಟೇಲ್ ಅವರು ಲಂಡನ್‌ನಲ್ಲಿ ಇರುವ ಒಬ್ಬ ಬ್ರಿಟಿಷ್ ಇಂಡಿಯನ್ ಇನ್‌ಫ್ಲುಯೆನ್ಸರ್ ಆಗಿದ್ದು ಇವರಿಗೆ ಇನ್‌ಸ್ಟಾಗ್ರಾಂನಲ್ಲಿ 4.5 ಲಕ್ಷಕ್ಕೂ ಅಧಿಕ ಫಾಲೋವರ್‌ಗಳು ಇದ್ದಾರೆ.

ಇದನ್ನೂ ಓದಿ: ‘ರಶ್ಮಿಕಾ ಮಂದಣ್ಣ’ರ ಡೀಪ್‌ಫೇಕ್‌ ವಿಡಿಯೋ ಡಿಲೀಟ್ ಮಾಡಲು ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರದ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...