Homeಮುಖಪುಟರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ವೈರಲ್: ನೋವು ಹಂಚಿಕೊಂಡ ನಟಿ

ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ವೈರಲ್: ನೋವು ಹಂಚಿಕೊಂಡ ನಟಿ

- Advertisement -
- Advertisement -

ನಟಿ ರಶ್ಮಿಕಾ ಮಂದಣ್ಣ ಅವರ ಒಂದು ಡೀಪ್‌ಫೇಕ್ ವಿಡಿಯೋ ವೈರಲ್​ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಬೇರೆ ಯುವತಿಯ ದೇಹಕ್ಕೆ ರಶ್ಮಿಕಾ ಅವರ ಮುಖವನ್ನು ಎಡಿಟ್​ ಮಾಡಿ ಹಾಕಲಾಗಿದೆ. ಈ ಸಂಗತಿ ಬಗ್ಗೆ ಸ್ವತಃ ರಶ್ಮಿಕಾ ಮಂದಣ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಈ ವಿಡಿಯೋ ನೋಡಿದ ಎಷ್ಟೋ ಜನರು ಇದು ನಿಜವಾಗಿಯೂ ರಶ್ಮಿಕಾ ಮಂದಣ್ಣ ಅವರದ್ದೇ ವಿಡಿಯೋ ಎಂದು ನಂಬಿಕೊಂಡಿದ್ದಾರೆ. ಆದರೆ ಈ ಫೇಕ್​ ವಿಡಿಯೋ ವಿರುದ್ಧ ಅನೇಕರು ಕಿಡಿಕಾರಿದ್ದಾರೆ. ತಂತ್ರಜ್ಞಾನದ ದುರ್ಬಳಕೆ ಮಾಡಿಕೊಂಡವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈ ಮಧ್ಯೆ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಮತ್ತು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಇಬ್ಬರೂ ಅಪರಾಧಿಗಳ ವಿರುದ್ಧ ಕಾನೂನು ಕ್ರಮಕ್ಕೆ ಕರೆ ನೀಡಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ರಶ್ಮಿಕಾ, ”ಆನ್​ಲೈನ್​ನಲ್ಲಿ ನನ್ನ ಬಗ್ಗೆ ಡೀಪ್‌ಫೇಕ್​ ವಿಡಿಯೋ ಹರಿದಾಡಿದ ಬಗ್ಗೆ ಮಾತನಾಡಲು ನನಗೆ ನಿಜಕ್ಕೂ ನೋವಾಗುತ್ತಿದೆ. ತಂತ್ರಜ್ಞಾನದ ದುರ್ಬಳಕೆಯಿಂದಾಗಿ ನನಗೆ ಮಾತ್ರವಲ್ಲದೇ ಎಲ್ಲರಿಗೂ ಭಯವಾಗುತ್ತಿದೆ” ಎಂದು ರಶ್ಮಿಕಾ ಮಂದಣ್ಣ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

”ಇಂದು ನನಗೆ ಬೆಂಬಲ ಮತ್ತು ರಕ್ಷಣೆ ನೀಡಿರುವ ನನ್ನ ಕುಟುಂಬ ಮತ್ತು ಸ್ನೇಹಿತರಿಗೆ ಓರ್ವ ಮಹಿಳೆಯಾಗಿ, ನಟಿಯಾಗಿ ನಾನು ಋಣಿ ಆಗಿದ್ದೇನೆ. ಆದರೆ ಇದು ಶಾಲೆ ಅಥವಾ ಕಾಲೇಜಿನಲ್ಲಿ ಇದ್ದಾಗ ಆಗಿದ್ದರೆ ಇದನ್ನು ನಾನು ಹೇಗೆ ಸರಿಪಡಿಸುತ್ತಿದ್ದೆನೋ ಗೊತ್ತಿಲ್ಲ. ಇಂಥ ಘಟನೆಗಳಿಂದ ನಮ್ಮಂತಹ ಹೆಚ್ಚಿನ ಜನರು ತೊಂದರೆಗೆ ಒಳಗಾಗುವುದಕ್ಕೂ ಮುನ್ನವೇ ಈ ಸಮಸ್ಯೆಯ ಬಗ್ಗೆ ನಾವು ಗಮನ ಹರಿಸಬೇಕಿದೆ” ಎಂದು ರಶ್ಮಿಕಾ ಮಂದಣ್ಣ ಅವರು ಬರೆದುಕೊಂಡಿದ್ದಾರೆ.

ಈ ಡೀಪ್‌ಫೇಕ್ ವೀಡಿಯೊವನ್ನು ನಟರು ಮತ್ತು ರಾಜಕಾರಣಿಗಳು ಟೀಕಿಸಿದ್ದಾರೆ, ಅವರು ಕಾನೂನು ಕ್ರಮಕ್ಕೆ ಕರೆ ನೀಡಿದರು.

ರಶ್ಮಿಕಾ ಅವರ ಈ ಡೀಪ್‌ಫೇಕ್ ವೀಡಿಯೊದ ಸತ್ಯಾಸತ್ಯತೆಯ ಕುರಿತು ಅಭಿಷೇಕ್ ಎಂಬುವವರು Xನಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ಅವರು, ಈ ಡೀಪ್‌ಫೇಕ್ ವಿಡಿಯೋ ರಚಿಸಲು ಬಳಸಿದ ಮೂಲ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ”ಭಾರತದಲ್ಲಿ ಡೀಪ್‌ಫೇಕ್ ವಿಡಿಯೋಗಳ ತೊಂದರೆ ಎದುರಿಸಲು ಕಾನೂನು ಮತ್ತು ನಿಯಂತ್ರಕ ಚೌಕಟ್ಟಿನ ತುರ್ತು ಅವಶ್ಯಕತೆಯಿದೆ. ನಟಿ ರಶ್ಮಿಕಾ ಮಂದಣ್ಣ ಅವರ ಈ ವೈರಲ್ ವೀಡಿಯೊವನ್ನು ನೀವು Instagram ನಲ್ಲಿ ನೋಡಿರಬಹುದು. ಆದರೆ ನಿರೀಕ್ಷಿಸಿ, ಇದು ಜರಾ ಪಟೇಲ್ (sic) ಅವರ ಡೀಪ್‌ಫೇಕ್ ವೀಡಿಯೊ” ಎಂದು ಅಭಿಷೇಕ್ ತಿಳಿಸಿದ್ದಾರೆ.

ರಶ್ಮಿಕಾ ಅವರ ಮುಖ ಕಾಣಿಸಿಕೊಳ್ಳುವ ಮೊದಲು ಡೀಪ್‌ಫೇಕ್ ವೀಡಿಯೊದಲ್ಲಿ ಜರಾ ಅವರ ಮುಖವು ಒಂದು ಸೆಕೆಂಡ್ ಗೋಚರಿಸುತ್ತದೆ ಎಂದು ಅಭಿಷೇಕ್ ಗಮನಸೆಳೆದಿದ್ದಾರೆ. ”ಇದು ಡೀಪ್‌ಫೇಕ್ ವಿಡಿಯೋ ಎನ್ನುವುದು ಸಾಮಾಜಿಕ ಮಾಧ್ಯಮ ಬಳಕೆದಾರರಿಗೆ ತಿಳಿಯುವಷ್ಟು ಸ್ಪಷ್ಟವಾಗಿದೆ. ನೀವು ವೀಡಿಯೊವನ್ನು ಎಚ್ಚರಿಕೆಯಿಂದ ನೋಡಿದರೆ, ಮೊದಲ 0:01ಸೆಕೆಂಡ್ ನಲ್ಲಿ ಜರಾ ಅವರ ಮುಖ ಕಾಣಿಸಿ ನಂತರ ರಶ್ಮಿಕಾ ಮುಖ ಕಾಣಿಸಿಕೊಳ್ಳುತ್ತದೆ” ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮೋದಿ ಭಾಷಣಕ್ಕೂ ಮುನ್ನ BJP ಪರ ED, CBI ಪ್ರಚಾರ ಮಾಡುತ್ತವೆ: ಖರ್ಗೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...