Homeಮುಖಪುಟಕೃಷಿ ಕಾಯ್ದೆಗಳನ್ನು ವಿರೋಧಿಸಿ NDA ತೊರೆದ ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷ

ಕೃಷಿ ಕಾಯ್ದೆಗಳನ್ನು ವಿರೋಧಿಸಿ NDA ತೊರೆದ ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷ

ಸೆಪ್ಟೆಂಬರ್‌ನಲ್ಲಿ ಕೃಷಿ ಮಸೂದೆಗಳನ್ನು ಅಂಗೀಕರಿಸಿದ ಕಾರಣ ಬಿಜೆಪಿ ತನ್ನ ಹಳೆಯ ಮಿತ್ರ ಪಕ್ಷಗಳಲ್ಲಿ ಒಂದಾದ ಶಿರೋಮಣಿ ಅಕಾಲಿ ದಳವನ್ನು ಕಳೆದುಕೊಂಡಿದೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಕಳೆದ 31 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಿ ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷವು ಎನ್‌ಡಿಎ ಒಕ್ಕೂಟ ತೊರೆದಿದೆ. ಪಕ್ಷದ ಸಂಸದ ಹನುಮಾನ್ ಬೆನಿವಾಲ್ ಕೃಷಿ ಮಸೂದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯದ ಕಾರಣ ಎನ್‌ಎಡಿ ತೊರೆಯುತ್ತಿದ್ದೇವೆ ಎಂದು ಘೋಷಿಸಿದ್ದಾರೆ.

ರಾಜಸ್ಥಾನದ ಅಲ್ವರ್ ಜಿಲ್ಲೆಯ ಶಹಜಾನ್‌ಪುರ್-ಖೇಡಾ ಗಡಿಯಲ್ಲಿ ಪ್ರತಿಭಟನೆನಿರತ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರಿಗೆ ವಿರುದ್ಧವಿರುವ ಯಾರ ಜೊತೆಯು ನಾವಿರುವುದಿಲ್ಲ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದಿಂದ ರಾಜಸ್ಥಾನದ ನಾಗೂರ್‌ನ ಸಂಸದರಾದ ಹನುಮಾನ್ ಬೆನಿವಾಲ್ ಕೃಷಿ ಕಾಯ್ದೆಗಳ ಕುರಿತು ಈ ಹಿಂದೆಯೇ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದರು ಮತ್ತು ಮೂರು ಸಂಸದೀಯ ಸಮಿತಿಗಳಿಗೆ ರಾಜೀನಾಮೆ ನೀಡಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಕೃಷಿ ಮಸೂದೆಗಳನ್ನು ಅಂಗೀಕರಿಸಿದ ಕಾರಣ ಬಿಜೆಪಿ ತನ್ನ ಹಳೆಯ ಮಿತ್ರ ಪಕ್ಷಗಳಲ್ಲಿ ಒಂದಾದ ಶಿರೋಮಣಿ ಅಕಾಲಿ ದಳವನ್ನು ಕಳೆದುಕೊಂಡಿದೆ. ಇದರ ಬೆನ್ನಲ್ಲೇ ಈಗ ರಾಷ್ಟ್ರೀಯ ಲೋಕತಾಂತ್ರಿಕ್ ಪಾರ್ಟಿಯು ಹೊರಬಿದ್ದಿದ್ದು ಎನ್‌ಡಿಎಗೆ ಮುಖಭಂಗವಾದಂತಿದೆ.


ಇದನ್ನೂ ಓದಿ: ಬಿಜೆಪಿ ನಾಯಕರನ್ನೇ ‘ಆಪರೇಷನ್’ ಮಾಡಲಿರುವ ಎನ್‌ಸಿಪಿ: ಮಹಾ ಡಿಸಿಎಂ ಅಜಿತ್ ಪವಾರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...