“ಮುಖ್ಯಮಂತ್ರಿ ಕಚೇರಿಯಿಂದ ಮಹತ್ವದ ಕಡತ ಒಂದು ಕಾಣೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಸಿಎಂ ಆಪ್ತ ಕಾರ್ಯದರ್ಶಿಯ ಹನಿಟ್ರಾಪ್ ವಿಚಾರಕ್ಕೂ, ಕಡತ ಕಾಣೆಯಾಗಿರುವುದಕ್ಕೂ ಸಂಬಂಧವಿದೆಯೇ? ಸಿಎಂ ಕಚೇರಿ ಬಸವರಾಜ ಬೊಮ್ಮಾಯಿಯವರ ಹಿಡಿತದಲ್ಲಿ ಇಲ್ಲವೇ? ಬಿಬಿಎಂಪಿಗೆ ಸಂಬಂಧಿಸಿದ ಮಹತ್ವದ ಕಡತವನ್ನೇ ರಕ್ಷಿಸಲಾಗದವರು ರಾಜ್ಯ ರಕ್ಷಿಸಲು ಸಾಧ್ಯವೇ?” ಎಂದು ಕರ್ನಾಟಕ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಟ್ವೀಟ್‌ಗಳನ್ನು ಮಾಡುತ್ತಿರುವ ಕಾಂಗ್ರೆಸ್, “ಸಿಎಂ ಕಚೇರಿಯಲ್ಲಿ ಮಹತ್ವದ ಕಡತಗಳು ನಾಪತ್ತೆಯಾಗಿರುವುದಕ್ಕೆ ಯಾವ ಕಾರಣ ಹುಡುಕುತ್ತಿದ್ದೀರಿ ಬೊಮ್ಮಾಯಿಯವರೇ? ಇಲಿ ಕಚ್ಚಿಕೊಂಡು ಹೋಯಿತೇ? ಹೆಗ್ಗಣ ಹೊತ್ತುಕೊಂಡು ಹೋಯಿತೇ? ಗಾಳಿಯಲ್ಲಿ ಹಾರಿ ಹೋಯಿತೇ? ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು ‘ಯುಪಿ ಮಾಡೆಲ್’ ಅಲ್ಲವೇ, ನೀವೂ ಅದೇ ಕಾರಣ ಕೊಡುವಿರಾ” ಎಂದು ಪ್ರಶ್ನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ಐಎಎಸ್‌ನಂತಹ ಉನ್ನತ ಮಟ್ಟದ ಅಧಿಕಾರಿಗಳು ಬಾಗಿಯಾಗಿರುವಂತಹ ಚಿಲುಮೆ ಪ್ರಕರಣಕ್ಕೆ ಪೊಲೀಸ್ ತನಿಖೆ ಮಾತ್ರ ಸಾಕೇ ಬೊಮ್ಮಾಯಿಯವರೇ? ನ್ಯಾಯಾಂಗ ತನಿಖೆಗೆ ವಹಿಸಲು ಹಿಂದೇಟು ಹಾಕುತ್ತಿರುವುದೇಕೆ? ಚಿಲುಮೆ ಸಂಸ್ಥೆಯ ಹಣದ ಮೂಲ ಹುಡುಕಲು ಐಟಿ, ಇಡಿಗಳಿಗೆ ಇಷ್ಟವಿಲ್ಲವೇಕೆ? ಸಚಿವರ ಲೆಟರ್ ಹೆಡ್, ಚೆಕ್‌ಗಳ ಬಗ್ಗೆ ಮಾತಾಡುತ್ತಿಲ್ಲವೇಕೆ?” ಎಂದು ಕೇಳಿದೆ.
“ಹಗರಣಗಳ ಬಗ್ಗೆ ಬಿಜೆಪಿ ವರಸೆಗಳು ಹೀಗಿರುತ್ತದೆ. ಮೊದಲು – ಅಕ್ರಮವೇ ನಡೆದಿಲ್ಲ ಎಂದು ನಿರಾಕರಿಸುವುದು, ಹಗರಣ ಹೊರಬಂದ ನಂತರ – ಸಣ್ಣ ಲೋಪ ಎಂಬಂತೆ ಮಾತಾಡುವುದು, ಹಗರಣದ ತೀವ್ರತೆ ಹೊರಬಂದಾಗ – ಪ್ರಭಾವಿಗಳ ರಕ್ಷಣೆಗೆ ತಂತ್ರ ಹೂಡುವುದು. ಪಿಎಸ್‌ಐ ಅಕ್ರಮದಿಂದ ಹಿಡಿದು ಚಿಲುಮೆ ಹಗರಣದವರೆಗೂ ಬಿಜೆಪಿ ನಡೆದುಕೊಂಡ ರೀತಿ ಇದು” ಎಂದು ಮತ್ತೊಂದು ಟ್ವೀಟ್ ಮಾಡಿದೆ.
“ಶಾಸಕರ ಕಳ್ಳತನ, ಕಮಿಷನ್ ಕಳ್ಳತನ, ಸರ್ಕಾರಿ ಹುದ್ದೆಗಳ ಕಳ್ಳತನ, ಮತದಾರರ ಮಾಹಿತಿ ಕಳ್ಳತನ- ಬಿಜೆಪಿಯ ಪ್ರಮುಖ ಕಳ್ಳತನಗಳು. ಬಿಜೆಪಿ ಒಮ್ಮೆಯೂ ಜನಾದೇಶದ ಮೂಲಕ ಅಧಿಕಾರಕ್ಕೆ ಬಂದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಳ್ಳ ಮಾರ್ಗದಲ್ಲಿ ಹೈಜಾಕ್ ಮಾಡಿ ಅಧಿಕಾರ ಹಿಡಿಯುವ ಬಿಜೆಪಿ ಬಗ್ಗೆ ಜನತೆ ಜಾಗ್ರತೆ ವಹಿಸಬೇಕು” ಎಂದು ಮನವಿ ಮಾಡಿದೆ.
“ಅಕ್ರಮ ನಡೆದೇ ಇಲ್ಲ ಎಂಬಂತೆ ಮಾತನಾಡುತ್ತಿದ್ದ ಬೊಮ್ಮಾಯಿಯವರೇ, ಮತದಾರರ ಮಾಹಿತಿ ಕಳ್ಳತನದ ಅಕ್ರಮದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತಾಗಿದ್ದು ಏಕೆ? ಸರ್ಕಾರದ ಹಸ್ತಕ್ಷೇಪ, ಬಿಜೆಪಿಯ ಹಿತಾಸಕ್ತಿ, ಮುಖ್ಯಮಂತ್ರಿಗಳ ಸಹಕಾರ ಇಲ್ಲದೆ ಐಎಎಸ್ ಮಟ್ಟದ ಅಧಿಕಾರಿಗಳು ಚಿಲುಮೆಗೆ ಸಹಕರಿಸಲು ಸಾಧ್ಯವೇ? ದಮ್ಮು ತಾಕತ್ತು ಇದ್ದರೆ ಉತ್ತರಿಸಿ” ಎಂದು ಸವಾಲು ಹಾಕಿದೆ.
ಈ ಕುರಿತು ಮಾತನಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, “ಮತದಾರರ ಮಾಹಿತಿ ಕಳ್ಳತನ ದೇಶದಲ್ಲಿ ಯಾರ ಕಾಲದಲ್ಲೂ ಆಗಿಲ್ಲ, ಆದರೆ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿದೆ! ಇದು ರಾಜ್ಯದ ಜನತೆಗೆ ಮಾಡಿದ ದೊಡ್ಡ ದ್ರೋಹವಾಗಿದ್ದು, ಅತ್ಯಂತ ಗಂಭೀರ ಅಪರಾಧವಾಗಿದೆ. ಹಾಗಾಗಿ ಮುಖ್ಯಮಂತ್ರಿಗಳು ಹಾಗೂ ಬಿಬಿಎಂಪಿ ಆಯುಕ್ತರ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.
ಮತದಾರರ ಮಾಹಿತಿ ಕಳ್ಳತನ ದೇಶದಲ್ಲಿ ಯಾರ ಕಾಲದಲ್ಲೂ ಆಗಿಲ್ಲ, ಆದರೆ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿದೆ!
ಇದು ರಾಜ್ಯದ ಜನತೆಗೆ ಮಾಡಿದ ದೊಡ್ಡ ದ್ರೋಹವಾಗಿದ್ದು, ಅತ್ಯಂತ ಗಂಭೀರ ಅಪರಾಧವಾಗಿದೆ.
ಹಾಗಾಗಿ ಮುಖ್ಯಮಂತ್ರಿಗಳು ಹಾಗೂ ಬಿಬಿಎಂಪಿ ಆಯುಕ್ತರ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು.
– @siddaramaiah pic.twitter.com/apkO5X5jXP— Karnataka Congress (@INCKarnataka) November 26, 2022
“ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು. ಮುಕ್ತ-ನ್ಯಾಯ ಸಮ್ಮತ ಚುನಾವಣೆ ನಡೆಯಬೇಕೆಂದರೆ 3 ಕ್ಷೇತ್ರಗಳಂತೆಯೇ 224 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು. ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಈ ಅಕ್ರಮದ ನ್ಯಾಯಾಂಗ ತನಿಖೆ ನಡೆಸಬೇಕು” ಎಂದಿದ್ದಾರೆ.
ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು.
ಮುಕ್ತ-ನ್ಯಾಯ ಸಮ್ಮತ ಚುನಾವಣೆ ನಡೆಯಬೇಕೆಂದರೆ 3 ಕ್ಷೇತ್ರಗಳಂತೆಯೇ 224 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು.
ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಈ ಅಕ್ರಮದ ನ್ಯಾಯಾಂಗ ತನಿಖೆ ನಡೆಸಬೇಕು.
– @siddaramaiah pic.twitter.com/GO3XqAmrUl— Karnataka Congress (@INCKarnataka) November 26, 2022
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, “ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮದ ಮೂಲಕ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾನಿ ಮಾಡುತ್ತಿದೆ. ಖಾಸಗಿ ಸಂಸ್ಥೆಗಳನ್ನು ಬಳಸಿಕೊಂಡು ಈ ಅಕ್ರಮ ಎಸಗಲಾಗಿದೆ. ಚುನಾವಣಾ ಆಯೋಗ ರಾಜ್ಯದ ಎಲ್ಲಾ ಮತದಾರರ ಪಟ್ಟಿಯನ್ನು ಮರುಪರಿಶೀಲನೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿರಿ: ಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು
“ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ, ಅಂಕಪಟ್ಟಿ ಅಕ್ರಮದಂತೆ ಈಗ ಮತಪಟ್ಟಿಯಲ್ಲೂ ಅಕ್ರಮ ಎಸಗಲು ಪ್ರಯತ್ನಿಸಿದ್ದಾರೆ. ಬಿಜೆಪಿ ಆಡಳಿತದಲ್ಲಿ ಕರ್ನಾಟಕ ಅತ್ಯಂತ ಭ್ರಷ್ಟ ರಾಜ್ಯವಾಗಿ ಪರಿವರ್ತನೆಯಾಗಿದೆ. ಈಗಲೇ ಜಾಗೃತರಾಗಿ ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.
ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ, ಅಂಕಪಟ್ಟಿ ಅಕ್ರಮದಂತೆ ಈಗ ಮತಪಟ್ಟಿಯಲ್ಲೂ ಅಕ್ರಮ ಎಸಗಲು ಪ್ರಯತ್ನಿಸಿದ್ದಾರೆ.
ಬಿಜೆಪಿ ಆಡಳಿತದಲ್ಲಿ ಕರ್ನಾಟಕ ಅತ್ಯಂತ ಭ್ರಷ್ಟ ರಾಜ್ಯವಾಗಿ ಪರಿವರ್ತನೆಯಾಗಿದೆ.
ಈಗಲೇ ಜಾಗೃತರಾಗಿ ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ.
– @DKShivakumar pic.twitter.com/cu7Kkk1xZa— Karnataka Congress (@INCKarnataka) November 26, 2022


