Homeಕರ್ನಾಟಕಸಿಎಂ ಕಚೇರಿಯ ಮಹತ್ವದ ಕಡತಗಳನ್ನು ಇಲಿ, ಹೆಗ್ಗಣ ಕಚ್ಚಿಕೊಂಡು ಹೋದವೆ?: ಕಾಂಗ್ರೆಸ್ ಪ್ರಶ್ನೆ

ಸಿಎಂ ಕಚೇರಿಯ ಮಹತ್ವದ ಕಡತಗಳನ್ನು ಇಲಿ, ಹೆಗ್ಗಣ ಕಚ್ಚಿಕೊಂಡು ಹೋದವೆ?: ಕಾಂಗ್ರೆಸ್ ಪ್ರಶ್ನೆ

“ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು ‘ಯುಪಿ ಮಾಡೆಲ್’ ಅಲ್ಲವೇ?”

- Advertisement -
- Advertisement -

ಮುಖ್ಯಮಂತ್ರಿ ಕಚೇರಿಯಿಂದ ಮಹತ್ವದ ಕಡತ ಒಂದು ಕಾಣೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಸಿಎಂ ಆಪ್ತ ಕಾರ್ಯದರ್ಶಿಯ ಹನಿಟ್ರಾಪ್ ವಿಚಾರಕ್ಕೂ, ಕಡತ ಕಾಣೆಯಾಗಿರುವುದಕ್ಕೂ ಸಂಬಂಧವಿದೆಯೇ? ಸಿಎಂ ಕಚೇರಿ ಬಸವರಾಜ ಬೊಮ್ಮಾಯಿಯವರ ಹಿಡಿತದಲ್ಲಿ ಇಲ್ಲವೇ? ಬಿಬಿಎಂಪಿಗೆ ಸಂಬಂಧಿಸಿದ ಮಹತ್ವದ ಕಡತವನ್ನೇ ರಕ್ಷಿಸಲಾಗದವರು ರಾಜ್ಯ ರಕ್ಷಿಸಲು ಸಾಧ್ಯವೇ?” ಎಂದು ಕರ್ನಾಟಕ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಟ್ವೀಟ್‌ಗಳನ್ನು ಮಾಡುತ್ತಿರುವ ಕಾಂಗ್ರೆಸ್, “ಸಿಎಂ ಕಚೇರಿಯಲ್ಲಿ ಮಹತ್ವದ ಕಡತಗಳು ನಾಪತ್ತೆಯಾಗಿರುವುದಕ್ಕೆ ಯಾವ ಕಾರಣ ಹುಡುಕುತ್ತಿದ್ದೀರಿ ಬೊಮ್ಮಾಯಿಯವರೇ? ಇಲಿ ಕಚ್ಚಿಕೊಂಡು ಹೋಯಿತೇ? ಹೆಗ್ಗಣ ಹೊತ್ತುಕೊಂಡು ಹೋಯಿತೇ? ಗಾಳಿಯಲ್ಲಿ ಹಾರಿ ಹೋಯಿತೇ? ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು ‘ಯುಪಿ ಮಾಡೆಲ್’ ಅಲ್ಲವೇ, ನೀವೂ ಅದೇ ಕಾರಣ ಕೊಡುವಿರಾ” ಎಂದು ಪ್ರಶ್ನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಐಎಎಸ್‌ನಂತಹ ಉನ್ನತ ಮಟ್ಟದ ಅಧಿಕಾರಿಗಳು ಬಾಗಿಯಾಗಿರುವಂತಹ ಚಿಲುಮೆ ಪ್ರಕರಣಕ್ಕೆ ಪೊಲೀಸ್ ತನಿಖೆ ಮಾತ್ರ ಸಾಕೇ ಬೊಮ್ಮಾಯಿಯವರೇ? ನ್ಯಾಯಾಂಗ ತನಿಖೆಗೆ ವಹಿಸಲು ಹಿಂದೇಟು ಹಾಕುತ್ತಿರುವುದೇಕೆ? ಚಿಲುಮೆ ಸಂಸ್ಥೆಯ ಹಣದ ಮೂಲ ಹುಡುಕಲು ಐಟಿ, ಇಡಿಗಳಿಗೆ ಇಷ್ಟವಿಲ್ಲವೇಕೆ? ಸಚಿವರ ಲೆಟರ್ ಹೆಡ್, ಚೆಕ್‌ಗಳ ಬಗ್ಗೆ ಮಾತಾಡುತ್ತಿಲ್ಲವೇಕೆ?” ಎಂದು ಕೇಳಿದೆ.

“ಹಗರಣಗಳ ಬಗ್ಗೆ ಬಿಜೆಪಿ ವರಸೆಗಳು ಹೀಗಿರುತ್ತದೆ. ಮೊದಲು – ಅಕ್ರಮವೇ ನಡೆದಿಲ್ಲ ಎಂದು ನಿರಾಕರಿಸುವುದು, ಹಗರಣ ಹೊರಬಂದ ನಂತರ – ಸಣ್ಣ ಲೋಪ ಎಂಬಂತೆ ಮಾತಾಡುವುದು, ಹಗರಣದ ತೀವ್ರತೆ ಹೊರಬಂದಾಗ – ಪ್ರಭಾವಿಗಳ ರಕ್ಷಣೆಗೆ ತಂತ್ರ ಹೂಡುವುದು. ಪಿಎಸ್‌ಐ ಅಕ್ರಮದಿಂದ ಹಿಡಿದು ಚಿಲುಮೆ ಹಗರಣದವರೆಗೂ ಬಿಜೆಪಿ ನಡೆದುಕೊಂಡ ರೀತಿ ಇದು” ಎಂದು ಮತ್ತೊಂದು ಟ್ವೀಟ್ ಮಾಡಿದೆ.

ಶಾಸಕರ ಕಳ್ಳತನ, ಕಮಿಷನ್ ಕಳ್ಳತನ, ಸರ್ಕಾರಿ ಹುದ್ದೆಗಳ ಕಳ್ಳತನ, ಮತದಾರರ ಮಾಹಿತಿ ಕಳ್ಳತನ- ಬಿಜೆಪಿಯ ಪ್ರಮುಖ ಕಳ್ಳತನಗಳು. ಬಿಜೆಪಿ ಒಮ್ಮೆಯೂ ಜನಾದೇಶದ ಮೂಲಕ ಅಧಿಕಾರಕ್ಕೆ ಬಂದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಳ್ಳ ಮಾರ್ಗದಲ್ಲಿ ಹೈಜಾಕ್ ಮಾಡಿ ಅಧಿಕಾರ ಹಿಡಿಯುವ ಬಿಜೆಪಿ ಬಗ್ಗೆ ಜನತೆ ಜಾಗ್ರತೆ ವಹಿಸಬೇಕು” ಎಂದು ಮನವಿ ಮಾಡಿದೆ.

“ಅಕ್ರಮ ನಡೆದೇ ಇಲ್ಲ ಎಂಬಂತೆ ಮಾತನಾಡುತ್ತಿದ್ದ ಬೊಮ್ಮಾಯಿಯವರೇ, ಮತದಾರರ ಮಾಹಿತಿ ಕಳ್ಳತನದ ಅಕ್ರಮದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತಾಗಿದ್ದು ಏಕೆ? ಸರ್ಕಾರದ ಹಸ್ತಕ್ಷೇಪ, ಬಿಜೆಪಿಯ ಹಿತಾಸಕ್ತಿ, ಮುಖ್ಯಮಂತ್ರಿಗಳ ಸಹಕಾರ ಇಲ್ಲದೆ ಐಎಎಸ್ ಮಟ್ಟದ ಅಧಿಕಾರಿಗಳು ಚಿಲುಮೆಗೆ ಸಹಕರಿಸಲು ಸಾಧ್ಯವೇ? ದಮ್ಮು ತಾಕತ್ತು ಇದ್ದರೆ ಉತ್ತರಿಸಿ” ಎಂದು ಸವಾಲು ಹಾಕಿದೆ.

ಈ ಕುರಿತು ಮಾತನಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, “ಮತದಾರರ ಮಾಹಿತಿ ಕಳ್ಳತನ ದೇಶದಲ್ಲಿ ಯಾರ ಕಾಲದಲ್ಲೂ ಆಗಿಲ್ಲ, ಆದರೆ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿದೆ! ಇದು ರಾಜ್ಯದ ಜನತೆಗೆ ಮಾಡಿದ ದೊಡ್ಡ ದ್ರೋಹವಾಗಿದ್ದು, ಅತ್ಯಂತ ಗಂಭೀರ ಅಪರಾಧವಾಗಿದೆ. ಹಾಗಾಗಿ ಮುಖ್ಯಮಂತ್ರಿಗಳು ಹಾಗೂ ಬಿಬಿಎಂಪಿ ಆಯುಕ್ತರ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು. ಮುಕ್ತ-ನ್ಯಾಯ ಸಮ್ಮತ ಚುನಾವಣೆ ನಡೆಯಬೇಕೆಂದರೆ 3 ಕ್ಷೇತ್ರಗಳಂತೆಯೇ 224 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು. ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಈ ಅಕ್ರಮದ ನ್ಯಾಯಾಂಗ ತನಿಖೆ ನಡೆಸಬೇಕು” ಎಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾತನಾಡಿ, “ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮದ ಮೂಲಕ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾನಿ ಮಾಡುತ್ತಿದೆ. ಖಾಸಗಿ ಸಂಸ್ಥೆಗಳನ್ನು ಬಳಸಿಕೊಂಡು ಈ ಅಕ್ರಮ ಎಸಗಲಾಗಿದೆ. ಚುನಾವಣಾ ಆಯೋಗ ರಾಜ್ಯದ ಎಲ್ಲಾ ಮತದಾರರ ಪಟ್ಟಿಯನ್ನು ಮರುಪರಿಶೀಲನೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

“ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ, ಅಂಕಪಟ್ಟಿ ಅಕ್ರಮದಂತೆ ಈಗ ಮತಪಟ್ಟಿಯಲ್ಲೂ ಅಕ್ರಮ ಎಸಗಲು ಪ್ರಯತ್ನಿಸಿದ್ದಾರೆ. ಬಿಜೆಪಿ ಆಡಳಿತದಲ್ಲಿ ಕರ್ನಾಟಕ ಅತ್ಯಂತ ಭ್ರಷ್ಟ ರಾಜ್ಯವಾಗಿ ಪರಿವರ್ತನೆಯಾಗಿದೆ. ಈಗಲೇ ಜಾಗೃತರಾಗಿ ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...