ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಲಡಾಖ್ ನ ಪ್ಯಾಂಗಾಂಗ್ ಸರೋವರಕ್ಕೆ ಬೈಕ್ ನಲ್ಲಿ ತೆರಳಿದ್ದು, ಅವರು ಆ. 20 ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವನ್ನು ಅಲ್ಲೇ ಆಚರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ರಾಹುಲ್ ಗಾಂಧಿಯವರು KTM 390 ಅಡ್ವೆಂಚರ್ ನಲ್ಲಿ ಬೈಕ್ ಸವಾರಿ ಮಾಡುತ್ತಿದ್ದು, ಅವರಿಗೆ ಹಲವರು ಸಾಥ್ ನೀಡಿದ್ದಾರೆ. ಹೆಲ್ಮೆಟ್, ಕೈಗವಸುಗಳು, ಸವಾರಿ ಬೂಟುಗಳು ಮತ್ತು ಜಾಕೆಟ್ ನೊಂದಿಗೆ ಲಡಾಖ್ ನ ಪರ್ವತಗಳ ಮೂಲಕ ತಮ್ಮ ಸವಾರಿಯನ್ನು ರಾಹುಲ್ ಗಾಂಧಿ ಮುಂದುವರಿಸಿದ್ದಾರೆ.
ರಾಹುಲ್ ಗಾಂಧಿಯವರು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ನಲ್ಲಿ ಈ ಕುರಿತು ಫೋಟೋಗಳನ್ನು ಹಂಚಿಕೊಂಡಿದ್ದು, ಜಗತ್ತಿನ ಅತ್ಯಂತ ಸುಂದರ ಸ್ಥಳಗಳಲ್ಲೊಂದು ಎಂದು ನನ್ನ ತಂದೆ ಹೇಳುತ್ತಿದ್ದ ಪಂಗೊಂಗ್ ಸರೋವರದತ್ತ ನಾವು ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಆಗಸ್ಟ್ 25 ರವರೆಗೆ ಲಡಾಖ್ ನಲ್ಲಿ ಸಮಯ ಕಳೆಯಲಿದ್ದಾರೆ ಎನ್ನಲಾಗಿದೆ.ಆರ್ಟಿಕಲ್ 370 ರದ್ದತಿಯ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ಇದು ರಾಹುಲ್ ಗಾಂಧಿಯವರ ಮೊದಲ ಭೇಟಿಯಾಗಿದೆ.
ಇದನ್ನು ಓದಿ: ಮಣಿಪುರ ರಾಜ್ಯಪಾಲರನ್ನು ಭೇಟಿ ಮಾಡಿದ ಸಿಪಿಐ(ಎಂ) ನಿಯೋಗ: ಪರಿಹಾರ ಶಿಬಿರಗಳಲ್ಲಿನ ಭೀಕರ ಪರಿಸ್ಥಿತಿ ಕುರಿತು ಚರ್ಚೆ



Rahul Gandhi zindabad