Homeಕರ್ನಾಟಕRavi Belagere | ಹಾಯ್ ಬೆಂಗಳೂರು ಪತ್ರಕರ್ತ ರವಿ ಬೆಳಗರೆ ನಿಧನ

Ravi Belagere | ಹಾಯ್ ಬೆಂಗಳೂರು ಪತ್ರಕರ್ತ ರವಿ ಬೆಳಗರೆ ನಿಧನ

- Advertisement -
- Advertisement -

ಖ್ಯಾತ ಲೇಖಕ, ಪತ್ರಕರ್ತ ರವಿ ಬೆಳಗರೆ ಬೆಂಗಳೂರಿನ ಪದ್ಮನಾಭನಗರದ ತಮ್ಮ ’ಹಾಯ್ ಬೆಂಗಳೂರು’ ಪತ್ರಿಕೆ ಕಚೇರಿಯಲ್ಲಿ ನಿಧನರಾಗಿದ್ದಾರೆ. ರಾತ್ರಿಯ ಊಟ ಮುಗಿಸಿ ಕಚೇರಿಯಲ್ಲೇ ನಿದ್ರೆಗೆ ಜಾರಿದ್ದಾಗ ಹೃದಯಾಘಾತದಿಂದಾಗಿ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಸಧ್ಯ ಮೃತದೇಹ ಕನಕಪುರ ಮುಖ್ಯ ರಸ್ತೆಯ ಗುಬ್ಬಲಾಳದ ಕರಿಶ್ಮಾ ಹಿಲ್ಸ್‌ನ ನಿವಾಸದಲ್ಲಿದ್ದು, ಸಾರ್ವಜನಿಕರ ದರ್ಶನಕ್ಕೆ ಪದ್ಮನಾಭನಗರದ ಪ್ರಾರ್ಥನಾ ಶಾಲೆ ಆವರಣಕ್ಕೆ ತರಲಾಗುತ್ತದೆ. ಬನಶಂಕರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಲಾಗಿದೆ ಎನ್ನಲಾಗಿದ್ದು, ಮೃತರು ಇಬ್ಬರು ಪತ್ನಿಯರು ಹಾಗೂ ನಾಲ್ಕು ಮಕ್ಕಳನ್ನು ಅಗಲಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ಹಿರಿಯ ಪತ್ರಕರ್ತನ ಅಗಲಿಕೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ಸೂಚಿಸಿದ್ದು, “ಪತ್ರಕರ್ತ, ಬರಹಗಾರ ರವಿ ಬೆಳಗೆರೆ ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ. ಪತ್ರಕರ್ತರಾಗಿ, ಲೇಖಕರಾಗಿ, ನಿರೂಪಕರಾಗಿ ಜನಪ್ರಿಯತೆ ಗಳಿಸಿದ್ದ ಅವರು, ಶಿಕ್ಷಣ ಸಂಸ್ಥೆಯನ್ನೂ ನಡೆಸುತ್ತಿದ್ದರು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬದವರಿಗೆ, ಅಭಿಮಾನಿಗಳಿಗೆ, ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...