Homeಕರ್ನಾಟಕಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್‌‌

ಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್‌‌

ಆರೋಪ ಮಾಡಿದವರ ವಿರುದ್ಧ ಮೂರು ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ರವಿ ಡಿ.ಚನ್ನಣ್ಣನವರ್‌ ತಿಳಿಸಿದ್ದಾರೆ.

- Advertisement -
- Advertisement -

“ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರ ರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿರುತ್ತವೆ. ಆಧಾರ ರಹಿತ ಆರೋಪ ಮಾಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದೇನೆ” ಎಂದು ಐಪಿಎಸ್‌ ಅಧಿಕಾರಿ ರವಿ ಡಿ.ಚೆನ್ನಣ್ಣನವರ್‌‌ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ ಆರೋಪಿಸಿದ್ದು, ಅವುಗಳೆಲ್ಲ ಕಾನೂನು ಬದ್ಧವಾಗಿಯೇ ಖರೀದಿಸಿದ್ದಾಗಿವೆ. ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿಗಳಾಗಿವೆ. ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಇವುಗಳನ್ನು ನಾನು ಭ್ರಷ್ಟ ರೀತಿಯಿಂದ ಸಂಪಾದಿಸಿದ್ದೇನೆ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನನ್ನನ್ನು ತೇಜೋವಧೆ ಮಾಡಬೇಕೆಂದೇ ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸಲಾಗುತ್ತಿದೆ. ನಾನೊಬ್ಬ ಅಖಿಲ ಭಾರತೀಯ ಸೇವಕನಾಗಿದ್ದು, ಸೇವಾ ನಿಯಮಗಳ ಅಡಿ ವರ್ತಿಸಬೇಕಾದ್ದು ನನ್ನ ಕರ್ತವ್ಯ. ಆದ್ದರಿಂದ ಈ ಕುರಿತಂತೆ ನಾನು ಇದಾವುದಕ್ಕೂ ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನುಬದ್ಧವಾಗಿ ಕ್ರಮ ಜರುಗಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ನಾನು ಈಗಾಗಲೇ ಕಾನೂನಾತ್ಮಕವಾಗಿ ನಮ್ಮ ನ್ಯಾಯವಾದಿಗಳ ಮೂಲಕ ಲೀಗಲ್ ನೋಟಿಸ್ ನೀಡಿರುತ್ತೇನೆ. ಇದಕ್ಕೆ ಉತ್ತರ ಬಂದಿರುವುದಿಲ್ಲ. ನಾನು ಈ ಕುರಿತು ಸಂಬಂಧಪಟ್ಟ ನ್ಯಾಯಾಲಯದಲ್ಲಿ, ರೂಪಾಯಿ 3 ಕೋಟಿಗೆ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಿದ್ದೇನೆ ಎಂದು ಅವರು ಎಚ್ಚರಿಸಿದ್ದಾರೆ.

ಹಾಗೆಯೇ ಸುಳ್ಳು ಆಪಾದನೆ ಮಾಡಿದ್ದಕ್ಕೆ, ಎರಡು ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಲಿದ್ದೇನೆ. ನನಗೆ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ, ಎಲ್ಲಾ ಸುಳ್ಳು ಸುದ್ದಿಗಳನ್ನು ನಂಬದಂತೆ, ಎಲ್ಲ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ಮಾಧ್ಯಮಗಳು ಪ್ರಚಾರ ಮಾಡದಂತೆ ತಡೆಯಾಜ್ಞೆ ತಂದದ್ದು ಅವುಗಳ ಅಭಿವ್ಯಕ್ತಿ ಸತ್ವವನ್ನು ಕುಗ್ಗಿಸಲು ಅಲ್ಲ. ಅನೇಕ ಸಂಕಷ್ಟಗಳ ನಡುವೆ ಬೆಳೆದ ನಾನು ನನ್ನ ಸ್ವಾಭಿಮಾನ ಮತ್ತು ವ್ಯಕ್ತಿತ್ವದ ಬಗ್ಗೆ ಸದಾ ಎಚ್ಚರದಲ್ಲಿ ಇದ್ದೇನೆ. ಕೆಲವು ಸುಳ್ಳು ಸುದ್ದಿಗಳು ನನ್ನ ಬಗ್ಗೆ ಹರಿದಾಡಿದ ಕಾರಣ ನಾನು ತಡೆಯಾಜ್ಞೆ ತಂದದ್ದನ್ನು ಅನ್ಯತಾ ಭಾವಿಸಬಾರದೆಂದು ಈ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಚಿಸಿದ್ದೇನೆ ಎಂದು ಹೇಳಿದ್ದಾರೆ.

ಹಾಗೆಯೇ ನನಗೆ ನ್ಯಾಯವಾದಿಗಳ ಬಗ್ಗೆ ಸ್ವಚ್ಛ ವ್ಯವಸ್ಥೆ ಬಯಸುವವರ ಬಗ್ಗೆ, ಅಪಾರ ಗೌರವವಿದೆ, ಈ ಮೂಲಕ ನನ್ನ ಆತ್ಮೀಯರೆಲ್ಲರಿಗೂ ಮನವಿ ಮಾಡುವುದೇನೆಂದರೆ, ತಾವು ದಯಮಾಡಿ ಯಾವುದೇ ಪ್ರತಿಕ್ರಿಯೆ ನೀಡಬಾರದು, ಅಶ್ಲೀಲ ಪದ ಬಳಕೆ, ಹೀಯಾಳಿಸುವುದನ್ನು ಮಾಡಬಾರದು ಎಂದು ಕೋರಿದ್ದಾರೆ.


ಇದನ್ನೂ ಓದಿರಿ: ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ರವಿ ಚೆನ್ನಣ್ಣನವರ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...