Homeಕರ್ನಾಟಕ‘ಬಾರ್‌‌’ ಸಿಟಿ ರವಿಯ ಸಂಸ್ಕೃತಿ: ಸಿದ್ದರಾಮಯ್ಯ

‘ಬಾರ್‌‌’ ಸಿಟಿ ರವಿಯ ಸಂಸ್ಕೃತಿ: ಸಿದ್ದರಾಮಯ್ಯ

- Advertisement -
- Advertisement -

ಯಾರಿಗೆ ಏನು ಪ್ರಿಯವೋ ಅದೇ ನೆನಪಾಗುತ್ತೆ, ಆದ್ದರಿಂದಲೇ ಸಿಟಿ ರವಿ ಅವರಿಗೆ ಅವರ ಆಸಕ್ತಿ ಮತ್ತು ಸಂಸ್ಕೃತಿಗೆ ತಕ್ಕ ಹಾಗೆ ಬಾರ್-ಹುಕ್ಕಾಬಾರ್ ನೆನಪಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ಸಿಟಿ ರವಿ, ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್‌‌ ಆದರೂ ತೆರೆಯಲಿ, ನೆಹರೂ ಹುಕ್ಕಾ ಬಾರ್‌ ಬೇಕಾದರೂ ತೆರೆಯಲಿ ಎಂದು ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ಪಕ್ಷ ಸೇರಿದಂತೆ ಹಲವಾರು ಜನರು ಆಕ್ಷೇಪ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಅಧೀಕೃತ ಟ್ವಿಟರ್‌ ಖಾತೆಯಲ್ಲಿ, “ಯಾರಿಗೆ ಏನು ಪ್ರಿಯವೋ ಅದೇ ನೆನಪಾಗುತ್ತೆ. ನಮಗೆ ಬಡವರನ್ನು ಕಂಡಾಗ ತಿನ್ನುವ ಅನ್ನ ನೆನಪಾಗಿ ಇಂದಿರಾ ಕ್ಯಾಂಟೀನ್ ಮಾಡಿದ್ದೇವೆ. ಸಿಟಿ ರವಿ ಅವರಿಗೆ ಅವರ ಆಸಕ್ತಿ ಮತ್ತು ಸಂಸ್ಕೃತಿಗೆ ತಕ್ಕ ಹಾಗೆ ಬಾರ್ ಹಾಗೂ ಹುಕ್ಕಾಬಾರ್ ನೆನಪಾಗಿದೆ. ರಾಜ್ಯದ ಮುಖ್ಯಮಂತ್ರಿ ಅವರನ್ನು ಅಬಕಾರಿ ಸಚಿವರಾಗಿ ಮಾಡಿ ಅವರ ಆಸೆ ಈಡೇರಿಸಬೇಕು” ಎಂದು ವ್ಯಂಗ್ಯವಾಡಿದ್ದಾರೆ.

“ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್‌ಗಳು ರಾಜ್ಯದ ಬಿಜೆಪಿ ನಾಯಕರ‌‌ ಕಣ್ಣು ಕುಕ್ಕುತ್ತಿರುವುದು ಯಾಕೆ?ಅನ್ನಭಾಗ್ಯದ ಅಕ್ಕಿ ಕಡಿಮೆ ಮಾಡಿದಿರಿ, ಇಂದಿರಾ ಕ್ಯಾಂಟೀನ್ ಮುಚ್ಚಲು ನೋಡಿದಿರಿ. ಈಗ ಹೆಸರಿನ ವಿವಾದ. ಇವರ ಕೋಪ ನೆಹರೂ-ಇಂದಿರಾಗಾಂಧಿ ಮೇಲೆಯೋ ಅಥವಾ ಈ ಯೋಜನೆಗಳ ಫಲಾನುಭವಿಗಳಾದ ಬಡವರ ಮೇಲೆಯೋ?” ಎಂದು ಸಿದ್ದರಾಮಯ್ಯ ಸಿಟಿ ರವಿ ಮತ್ತು ಬಿಜೆಪಿಯೊಂದಿಗೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಕರ್ನಾಟಕದಲ್ಲೂ ಜನಸಂಖ್ಯಾ ನಿಯಂತ್ರಣ ಕಾಯ್ದೆ’ – ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯೆ ಏನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಮಾನ್ಯ ಚಿಕ್ಕ ಮಂಗಳೂರಿನ ಶಾಸಕರು ಆದಂತಹ
    ಸಿ .ಟಿ ರವಿಯವರೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ನಿಮಗೆ ಶೋಭೆ ತರುವಂತದ್ದಲ್ಲ ಕ್ಯಾಬರೆ ಹುಕ್ಕಾ ಈ ರೀತಿಯಾದಂತಹ ಮಾತುಗಳು .
    ನಿಮಗೆ ಮತ್ತು ನಿಮ್ಮ ಶಾಸಕ ವೃಂದಕ್ಕೆ ಮತ್ತು ಸಂಸದರಿಗೆ ಸೀಡಿ ಬಾರುಗಳನ್ನು ನೀವು ಕೇಂದ್ರ ಸರ್ಕಾರದಿಂದ ಅನುಮತಿ ಪಡೆದು ನಿರೂಪಿಸುವುದು ಒಳ್ಳೆಯದು ಅಲ್ಲವೇ ……!!
    ಧನ್ಯವಾದಗಳು.
    ಹರಿಪ್ರಸಾದ್ ಎಂ ಜಯನಗರ .

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದೇಶದಲ್ಲಿ ‘ಭ್ರಷ್ಟಾಚಾರದ ಶಾಲೆ’ಯನ್ನು ನಡೆಸುತ್ತಿದ್ದಾರೆ: ರಾಹುಲ್‌ ಗಾಂಧಿ ವಾಗ್ಧಾಳಿ

0
ಚುನಾವಣಾ ಬಾಂಡ್‌ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್‌ ಗಾಂಧಿ ವಾಗ್ಧಾಳಿಯನ್ನು ನಡೆಸಿದ್ದು, ಮೋದಿ ದೇಶದಲ್ಲಿ 'ಭ್ರಷ್ಟಾಚಾರದ ಶಾಲೆ'ಯನ್ನು ನಡೆಸುತ್ತಿದ್ದಾರೆ ಮತ್ತು ಸಂಪೂರ್ಣ ಭ್ರಷ್ಟಾಚಾರ ವಿಜ್ಞಾನ" ವಿಷಯದಲ್ಲಿ ಎಲ್ಲಾ ಅಧ್ಯಾಯಗಳನ್ನು ಕಲಿಸುತ್ತಿದ್ದಾರೆ...