Homeಮುಖಪುಟಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) 6%ದಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ

ಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) 6%ದಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಕೇಂದ್ರ ಸಚಿವ ಸಂಪುಟವು ಬುಧವಾರದಂದು 2025-26ರ ಮಾರುಕಟ್ಟೆ ಋತುವಿನಲ್ಲಿ ಕಚ್ಚಾ ಸೆಣಬಿಗೆ ಕ್ವಿಂಟಲ್‌ಗೆ 5,650 ರೂ.ಗಳ ಕನಿಷ್ಠ ಬೆಂಬಲ ಬೆಲೆಯನ್ನು ಅನುಮೋದಿಸಿದೆ. ಇದು ಈ ಹಿಂದಿನ ಕನಿಷ್ಠ ಬೆಂಬಲ ಬೆಲೆಗಿಂತ 6% ದಷ್ಟು ಅಥವಾ 315 ರೂ.ಗಳ ಹೆಚ್ಚಳವಾಗಿದೆ ಎಂದು ವರದಿ ಹೇಳಿವೆ. ಕಚ್ಚಾ ಸೆಣಬು

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ (CCEA)ಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮಾಹಿತಿ ನೀಡಿದ್ದಾರೆ. ಹೊಸ ಕನಿಷ್ಠ ಬೆಂಬಲ ಬೆಲೆಗಳು (MSP) ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚಕ್ಕಿಂತ 66.8%ದಷ್ಟು ಆದಾಯವನ್ನು ಖಚಿತಪಡಿಸುತ್ತವೆ ಮತ್ತು ಬೆಳೆಗಾರರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಸಚಿವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರವು 2014-15ರಲ್ಲಿ ಕ್ವಿಂಟಲ್‌ಗೆ ರೂ. 2,400 ರಿಂದ 2025-26ರ ಮಾರುಕಟ್ಟೆ ಋತುವಿನಲ್ಲಿ ಕ್ವಿಂಟಲ್‌ಗೆ ರೂ. 5,650 ಕ್ಕೆ ಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ, ಇದು 2.35 ಪಟ್ಟು ಹೆಚ್ಚಾಗಿದೆ. ಸೆಣಬಿನ ರೈತರಲ್ಲಿ 82% ರಷ್ಟು ಜನರು ಪಶ್ಚಿಮ ಬಂಗಾಳಕ್ಕೆ ಸೇರಿದವರಾಗಿದ್ದರೆ, ಅಸ್ಸಾಂ ಮತ್ತು ಬಿಹಾರಗಳು ಸೆಣಬು ಉತ್ಪಾದನೆಯಲ್ಲಿ ತಲಾ 9% ರಷ್ಟು ಪಾಲನ್ನು ಹೊಂದಿವೆ. ಕಚ್ಚಾ ಸೆಣಬು

2025-26 ರ ಮಾರುಕಟ್ಟೆ ಋತುವಿಗಾಗಿ ಕಚ್ಚಾ ಸೆಣಬಿನ ಅನುಮೋದಿತ ಕನಿಷ್ಠ ಬೆಂಬಲ ಬೆಲೆ (MSP) ಸರ್ಕಾರವು 2018-19 ರ ಬಜೆಟ್‌ನಲ್ಲಿ ಘೋಷಿಸಿದಂತೆ ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು MSP ಅನ್ನು ನಿಗದಿಪಡಿಸುವ ತತ್ವಕ್ಕೆ ಅನುಗುಣವಾಗಿದೆ ಎಂದು ಸರ್ಕಾರಿ ಪ್ರಕಟಣೆ ತಿಳಿಸಿದೆ.

40 ಲಕ್ಷ ಕೃಷಿ ಕುಟುಂಬಗಳ ಜೀವನೋಪಾಯವು ನೇರವಾಗಿ ಅಥವಾ ಪರೋಕ್ಷವಾಗಿ ಸೆಣಬು ಉದ್ಯಮವನ್ನು ಅವಲಂಬಿಸಿದೆದ್ದು, ಸುಮಾರು 4 ಲಕ್ಷ ಕಾರ್ಮಿಕರು ಸೆಣಬು ಗಿರಣಿಗಳಲ್ಲಿ ನೇರ ಉದ್ಯೋಗವನ್ನು ಪಡೆಯುತ್ತಾರೆ ಮತ್ತು ಸೆಣಬಿನ ವ್ಯಾಪಾರ ಮಾಡುತ್ತಾರೆ. ಕಳೆದ ವರ್ಷ 1.7 ಲಕ್ಷ ರೈತರಿಂದ ಸೆಣಬನ್ನು ಖರೀದಿಸಲಾಗಿದೆ.

ಬೆಲೆ ಬೆಂಬಲ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಭಾರತೀಯ ಸೆಣಬು ನಿಗಮ (ಜೆಸಿಐ) ಕೇಂದ್ರ ಸರ್ಕಾರದ ನೋಡಲ್ ಏಜೆನ್ಸಿಯಾಗಿ ಮುಂದುವರಿಯುತ್ತದೆ ಮತ್ತು ಅಂತಹ ಕಾರ್ಯಾಚರಣೆಗಳಲ್ಲಿ ಉಂಟಾದ ನಷ್ಟಗಳು, ಯಾವುದಾದರೂ ಇದ್ದರೆ, ಕೇಂದ್ರ ಸರ್ಕಾರದಿಂದ ಸಂಪೂರ್ಣವಾಗಿ ಮರುಪಾವತಿಸಲ್ಪಡುತ್ತವೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂಓದಿ:  ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...