Homeಮುಖಪುಟಸಿಟಿ ಬ್ಯಾಂಕ್ ಸೇರಿ 3 ಬ್ಯಾಂಕ್‌ಗಳ ಮೇಲೆ 10.34 ಕೋಟಿ ದಂಡ ವಿಧಿಸಿದ ಆರ್‌ಬಿಐ

ಸಿಟಿ ಬ್ಯಾಂಕ್ ಸೇರಿ 3 ಬ್ಯಾಂಕ್‌ಗಳ ಮೇಲೆ 10.34 ಕೋಟಿ ದಂಡ ವಿಧಿಸಿದ ಆರ್‌ಬಿಐ

- Advertisement -
- Advertisement -

ಬ್ಯಾಂಕಿಂಗ್ ನಿಯಮಗಳ ಉಲ್ಲಂಘನೆ ಮಾಡಿದ ಆರೋಪದಲ್ಲಿ ಸಿಟಿ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಮತ್ತು ಸರಕಾರಿ ಸ್ವಾಮ್ಯದ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ಗಳ ಮೇಲೆ ಆರ್‌ಬಿಐ ಒಟ್ಟು 10.34 ಕೋಟಿ ರೂ. ದಂಡವನ್ನು ವಿಧಿಸಿದೆ.

ಜಾಗೃತಿ ನಿಧಿ ಯೋಜನೆಗೆ ಸಂಬಂಧಿಸಿದ ನಿಯಮಗಳು ಮತ್ತು ಹಣಕಾಸು ಸೇವೆಗಳ ಹೊರಗುತ್ತಿಗೆ ನೀತಿ ಸಂಹಿತೆ ಮತ್ತು ಕೆವೈಸಿ ಮಾನದಂಡಗಳನ್ನು ಅನುಸರಿಸದ ಕಾರಣಕ್ಕಾಗಿ ಸಿಟಿ ಬ್ಯಾಂಕ್‌ಗೆ 5 ಕೋಟಿ ರೂಪಾಯಿ ದಂಡವನ್ನು ವಿಧಿಸಲಾಗಿದೆ ಎಂದು ಆರ್‌ಬಿಐ ತಿಳಿಸಿದೆ.

ಸಾರ್ವಜನಿಕ ವಲಯದ ಬ್ಯಾಂಕ್ ಆಫ್ ಬರೋಡಾದ ಮೇಲೆ 4.34 ಕೋಟಿ ರೂ.ಗಳ ದಂಡವನ್ನು ವಿಧಿಸಲಾಗಿದೆ. ಬ್ಯಾಂಕ್ ಆಫ್ ಬರೋಡಾದ ಮೇಲೆ ಕೂಡ ಆರ್‌ ಬಿಐನ ನಿರ್ದೇಶನಗಳನ್ನು ಉಲ್ಲಂಘಿಸಿದ ಅರೋಪವಿದೆ.

ಸಾಲಗಳು ಮತ್ತು ಮುಂಗಡಗಳಿಗೆ ಸಂಬಂಧಿಸಿದ ನಿರ್ದೇಶನಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸರ್ಕಾರಿ ಸ್ವಾಮ್ಯದ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ಗೆ 1 ಕೋಟಿ ರೂ. ದಂಡವನ್ನು ವಿಧಿಸಲಾಗಿದೆ.

ಮೂರು ಬ್ಯಾಂಕ್‌ಗಳ ಮೇಲಿನ ದಂಡಗಳು ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ವಿಧಿಸಲಾಗಿದೆ. ಇದು ಗ್ರಾಹಕರೊಂದಿಗೆ ಮಾಡಿಕೊಂಡ ಯಾವುದೇ ವಹಿವಾಟು ಅಥವಾ ಒಪ್ಪಂದದ ಸಿಂಧುತ್ವದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟಪಡಿಸಿದೆ.

ಇದನ್ನು ಓದಿ: ಹಲಾಲ್ ಉತ್ಪನ್ನಗಳ ಮಾರಾಟ ನಿಷೇಧದ ಕುರಿತು ನಿರ್ಧಾರ ತೆಗೆದುಕೊಂಡಿಲ್ಲ: ಅಮಿತ್‌ ಶಾ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ಕಸ್ಟಡಿಗೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಕೋರ್ಟ್...