Homeಕರ್ನಾಟಕಶೈಕ್ಷಣಿಕ ವರ್ಷದ ಕೊನೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರ ಮರು ಹೊಂದಾಣಿಕೆ | ಶಿಕ್ಷಣ ಇಲಾಖೆಯ ಕ್ರಮಕ್ಕೆ...

ಶೈಕ್ಷಣಿಕ ವರ್ಷದ ಕೊನೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರ ಮರು ಹೊಂದಾಣಿಕೆ | ಶಿಕ್ಷಣ ಇಲಾಖೆಯ ಕ್ರಮಕ್ಕೆ ತಜ್ಞರ ವಿರೋಧ

ಸರಕಾರಿ ಶಾಲೆಗಳನ್ನು ಮುಚ್ಚಲು ಸರಕಾರ ಮುಂದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಶೈಕ್ಷಣಿಕ ವರ್ಷದ ಕೊನೆಯಲ್ಲಿ ಸರಕಾರಿ ಶಾಲಾ ಶಿಕ್ಷಕರ ಮರು ಹೊಂದಾಣಿಕೆ ಮತ್ತು ಹೆಚ್ಚುವರಿ ಪ್ರಕ್ರಿಯೆಯನ್ನು ಪ್ರಾರಂಭಿಸಿರುವ ಶಿಕ್ಷಣ ಇಲಾಖೆ ಕ್ರಮವನ್ನು ಶಿಕ್ಷಣ ತಜ್ಞರು ವಿರೋಧಿಸಿದ್ದು, “ಹೆಚ್ಚುವರಿ ಪ್ರಕ್ರಿಯೆ ಮಾಡುವ ಮೂಲಕ ಸರಕಾರಿ ಶಾಲೆಗಳನ್ನು ಮುಚ್ಚಲು ಸರಕಾರ ಮುಂದಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಕ್ರಮಗಳ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ತಜ್ಞರ ಗುಂಪಾದ, ‘ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ-ಕರ್ನಾಟಕ’ದ ಪ್ರಧಾನ ಸಂಚಾಲಕರಾದ ಡಾ. ನಿರಂಜನಾರಾಧ್ಯ ವಿ.ಪಿ. ಅವರು, “ಶಾಲೆಗಳು 2022-23 ನೇ ಶೈಕ್ಷಣಿಕ ವರ್ಷದ ಕೊನೆಯಲ್ಲಿದ್ದು, ಶಿಕ್ಷಕರು ನಿಗದಿತ ಪಠ್ಯವಸ್ತು ಮುಗಿಸಿ, ನಿರಂತರ ಹಾಗು ವ್ಯಾಪಕ ಮೌಲ್ಯ ಮಾಪನದ ಮೂಲಕ ಮೌಲ್ಯಾಂಕನ ಮುಗಿಸಿ, ಮಕ್ಕಳ ಕಲಿಕೆಯನ್ನು ಪರಾಮರ್ಶಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಶಿಕ್ಷಕರನ್ನು ಮಾನಸಿಕವಾಗಿ ತೊಂದರೆಗೆ ಗುರಿಪಡಿಸುವುದು ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಅವೈಜ್ಞಾನಿಕ ಕ್ರಮವಾಗಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಮರು ಹೊಂದಾಣಿಕೆಯ ವಿಧಾನವು ಶಿಕ್ಷಣ ಹಕ್ಕು ಕಾಯಿದೆಯ ಗೊತ್ತುಪಡಿಸಿರುವ ಪ್ರಾಥಮಿಕ ಹಾಗು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಇರಲೇಬೇಕಾದ ಕನಿಷ್ಠ ಶಿಕ್ಷಕರ ಸಂಖ್ಯೆಗೆ ವಿರುದ್ಧವಾಗಿದೆ. ಈ ಪ್ರಕ್ರಿಯೆ ಸರ್ಕಾರಿ ಕನ್ನಡ ಶಾಲೆಗಳಿಗೆ ಮಾರಕವಾಗಿ ಪರಿಣಮಿಸಲಿದೆ” ಎಂದು ನಿರಂಜನಾರಾಧ್ಯ ಎಚ್ಚರಿಸಿದ್ದಾರೆ.

“ಶೈಕ್ಷಣಿಕ ವರ್ಷದಲ್ಲಿ ಬಹು ಮುಖ್ಯ ಘಟ್ಟವಾದ, ಜನವರಿ-ಫೆಬ್ರವರಿ -ಮಾರ್ಚ್ ತಿಂಗಳುಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗು ಕಲಿಕಾ ಹಿತದೃಷ್ಟಿಯಿಂದ ತುಂಬಾ ಮಹತ್ವದ ಕಲಿಕಾ ದಿನಗಳಾಗಿರುತ್ತವೆ. ಈ ಸಂದರ್ಭದಲ್ಲಿ ಶಿಕ್ಷಕರ ಹೆಚ್ಚುವರಿ ಅಥವಾ ಮರು ಹೊಂದಾಣಿಕೆ ಪ್ರಕ್ರಿಯೆ ಆರಂಭಿಸುವುದು ನೇರವಾಗಿ ಕಲಿಕೆಯ ಮೇಲೆ ಪರಿಣಾಮ ಬೀರುವುದಲ್ಲದೆ ಶಿಕ್ಷಕರು ಮಾನಸಿಕವಾಗಿ ತೊಂದರೆಗೊಳಗಾಗುತ್ತಾರೆ” ಎಂದು ಅವರು  ಆತಂಕ ವ್ಯಕ್ತಪಡಿಸಿದ್ದಾರೆ.

“ಕಲಿಕಾ ಯೋಜನೆಗೆ ಸಂಬಂಧಿಸಿದಂತೆ ಪ್ರತಿಯೊಬ್ಬ ಶಿಕ್ಷಕರು ತನ್ನದೇ ಆದ ಯೋಜನೆ ಹೊಂದಿರುತ್ತಾರೆ. ಶೈಕ್ಷಣಿಕ ವರ್ಷ ಮುಕ್ತಾಯವಾಗುವ ಸಂದರ್ಭದಲ್ಲಿ ಪರಿಣಾಮಕಾರಿ ಕಲಿಕೆಗೆ ಏನು ಮಾಡಬೇಕು ಎಂಬುದರ ಬಗ್ಗೆ ತನ್ನದೇ ಆದ ಕ್ರಿಯಾ ಯೋಜನೆ ಅವರು ಹೊಂದಿರುತ್ತಾರೆ. ಈ ಘಟ್ಟದಲ್ಲಿ ಹೆಚ್ಚುವರಿ – ಮರು ಹೊಂದಾಣಿಕೆ ಪ್ರಕ್ರಿಯೆ ಶಿಕ್ಷಕರ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತದೆ. ಇದು ಸರಕಾರವೇ ಸರಕಾರೀ ಶಾಲೆಗಳನ್ನು ಮುಚ್ಚುವ ಕಾರ್ಯ ಯೋಜನೆಯಂತಿದೆ” ಎಂದು ಅವರು ಹೇಳಿದ್ದಾರೆ.

“ಹೆಚ್ಚುವರಿ ಮತ್ತು ಮರು ಹೊಂದಾಣಿಕೆಗೆ ಒಳಪಟ್ಟ ಶಿಕ್ಷಕ/ ಶಿಕ್ಷಕಿ ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಈ ಶಾಲೆ ಬಿಟ್ಟು ಮತ್ತೊಂದು ಶಾಲೆಗೆ ಹೋಗುವುದರಿಂದ, ಅಲ್ಲಿನ ಪರಿಸ್ಥಿತಿಗೆ ಶಿಕ್ಷಕರು ತಕ್ಷಣ ಹೊಂದಿಕೊಳ್ಳಲು ಕಷ್ಟವಾಗುತ್ತದೆ. ವಿದ್ಯಾರ್ಥಿಗಳು ಸಹ ಬದಲಾದ ಕಲಿಕಾ ವ್ಯವಸ್ಥೆಗೆ ಹೊಂದಿಕೊಳ್ಳಲು ಕಷ್ಟವಾಗುತ್ತದೆ. ಹೀಗಾಗಿ, ಇದು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತ ದೃಷ್ಟಿಯಿಂದ ಒಳ್ಳೆಯದಲ್ಲ” ಎಂದು ಅವರು ತಿಳಿಸಿದ್ದಾರೆ.

ಇಂತಹ ಅವೈಜ್ಞಾನಿಕ ನಿಯಮ ಅಳವಡಿಸಿಕೊಂಡು ಮರು ಹೊಂದಾಣಿಕೆ ಹಾಗು ಶಿಕ್ಷಕರ ಹೆಚ್ಚುವರಿ ಮಾಡುವುದರಿಂದ ಸರ್ಕಾರಿ ಶಾಲೆಗಳನ್ನು ಶಾಶ್ವತವಾಗಿ ಮುಚ್ಚಬೇಕೆಂಬ ತೀರ್ಮಾನಕ್ಕೆ ಸರ್ಕಾರ ಬಂದಂತಿದೆ ಎಂದು ಅನುಮಾನ ವ್ಯಕ್ತಪಡಿಸಿರುವ ನಿರಂಜನಾರಾಧ್ಯ ಅವರು, “ಸಂಪನ್ಮೂಲಗಳನ್ನು ಕಡಿತಗೊಳಿಸಿ ಆ ಮೂಲಕ ಸರಕಾರೀ ಶಾಲೆಗಳನ್ನು ಮುಚ್ಚಿ ವಿಲೀನಗೊಳಿಸಿ ಖಾಸಗೀಕರಣಕ್ಕೆ ಅನುವು ಮಾಡಿಕೊಡಬೇಕೆಂಬ ರಾಷ್ಟ್ರೀಯ ಶಿಕ್ಷಣ ನೀತಿಯ ಹುನ್ನಾರ ಈಗ ಬಯಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಮಂಜೂರಾಗಿರುವ ಶಿಕ್ಷಕರ ಹುದ್ದೆಗಳ ಪೈಕಿ 2019-20 ರಲ್ಲಿ 22,200 , 2020-21 ರಲ್ಲಿ 34,079 ಮತ್ತು 2021-22 ರಲ್ಲಿ 1,41,358 ಹುದ್ದೆಗಳು ಖಾಲಿ ಇವೆ. ದೇಶದಲ್ಲಿ ಅತಿ ಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಇರುವ ರಾಜ್ಯ ಕರ್ನಾಟಕವಾಗಿ ಹೊರಹೊಮ್ಮಿದೆ. “ಖಾಲಿ ಇರುವ ಹುದ್ದೆಗಳನ್ನು ತುಂಬದೇ ಇಲಾಖೆ ಮರು ಹೊಂದಾಣಿಕೆ ಹಾಗು ಹೆಚ್ಚುವರಿ ನೆಪದಲ್ಲಿ ಸರ್ಕಾರಿ ಶಾಲೆಗಳ ಸುಧಾರಣೆಗೆ ಕ್ರಮ ಕೈಗೊಳ್ಳುತ್ತೇವೆ ಎಂಬುದು ಹಾಸ್ಯಾಸ್ಪದ” ಎಂದು ನಿರಂಜನಾರಾಧ್ಯ ಹೇಳಿದ್ದಾರೆ..

“ಒಂದೆಡೆ ,ಮುಖ್ಯಮಂತ್ರಿಯವರು ಸರಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಸರ್ಕಾರ ಬದ್ಧ ಎಂದರೆ, ಮತ್ತೊಂದೆಡೆ ಶಿಕ್ಷಣ ಸಚಿವರು ಸರಕಾರಿ ಶಾಲೆಗಳನ್ನು ಮುಚ್ಚಲು ಶಿಕ್ಷಕರ ಮರು ಹೊಂದಾಣಿಕೆ ಹಾಗು ಹೆಚ್ಚುವರಿ ಪ್ರಕ್ರಿಯೆ ಆರಂಭಿಸಿದ್ದಾರೆ. ಸರಕಾರಕ್ಕೆ ಇಚ್ಛಾಶಕ್ತಿ ಇದ್ದರೆ ಸರಕಾರೀ ಶಾಲೆಗಳ ಸಬಲೀಕರಣ ವರದಿ 2017 ರ ಅನ್ವಯ ಎಲ್ಲ ಸರಕಾರೀ ಶಾಲೆಗಳಿಗೆ ವಿಷಯವಾರು, ತರಗತಿವಾರು ಶಿಕ್ಷಕ ಹುದ್ದೆಗಳನ್ನು ಮಂಜೂರು ಮಾಡುವ ಮೂಲಕ ಸರಕಾರೀ ಶಾಲೆಗಳ ಬಲವರ್ಧನೆಗೆ ಮುಂದಾಗಬೇಕು” ಎಂದು ಅಭಿವೃದ್ಧಿ ಶಿಕ್ಷಣ ತಜ್ಞರಾದ ಡಾ.ನಿರಂಜನಾರಾಧ್ಯ ವಿ.ಪಿ. ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೋದಿ ಹುಬ್ಬಳ್ಳಿ ಭೇಟಿ: ಪ್ರಾಂಶುಪಾಲರಿಗೆ 100 ವಿದ್ಯಾರ್ಥಿಗಳನ್ನು ಕರೆತರುವಂತೆ ಟಾರ್ಗೆಟ್‌ ನೀಡಿದ ಶಿಕ್ಷಣ ಇಲಾಖೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...