Homeಮುಖಪುಟನೋಟಾಗೆ ಅಧಿಕ ಮತಗಳು ಬಂದ ಕ್ಷೇತ್ರಗಳಲ್ಲಿ ಮರು ಚುನಾವಣೆ ನಡೆಸಿ- ಸುಪ್ರೀಂಗೆ ಅರ್ಜಿ ಸಲ್ಲಿಕೆ

ನೋಟಾಗೆ ಅಧಿಕ ಮತಗಳು ಬಂದ ಕ್ಷೇತ್ರಗಳಲ್ಲಿ ಮರು ಚುನಾವಣೆ ನಡೆಸಿ- ಸುಪ್ರೀಂಗೆ ಅರ್ಜಿ ಸಲ್ಲಿಕೆ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 36 ರಾಜಕೀಯ ಪಕ್ಷಗಳ ಅಭ್ಯರ್ಥಿಗಳಲ್ಲಿ 15 ಅಭ್ಯರ್ಥಿಗಳು ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆದಿದ್ದರು.

- Advertisement -
- Advertisement -

ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ತಿರಸ್ಕರಿಸುವ ನೋಟಾಗೆ (NOTA) ಹೆಚ್ಚಿನ ಮತಗಳು ಬಂದರೆ ಆ ಕ್ಷೇತ್ರದಲ್ಲಿ ಚುನಾವಣೆ ರದ್ದುಗೊಳಿಸಿ, ಮತ್ತೆ ಚುನಾವಣೆ ನಡೆಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತು  ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.

ಕಾನೂನು ಆಯೋಗವು ನೋಟಾ ಆಯ್ಕೆಯನ್ನು 1999 ರಲ್ಲಿ ಪ್ರಸ್ತಾಪಿಸಿತ್ತು ಇದನ್ನು ಸುಪ್ರೀಂ ಕೋರ್ಟ್ 2013 ರಲ್ಲಿ ಎತ್ತಿಹಿಡಿದಿದೆ. ಒಂದು ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲಾ ಅಭ್ಯರ್ಥಿಗಳನ್ನು ತಿರಸ್ಕರಿಸುವ ಮತದಾರರ ಹಕ್ಕಾಗಿದ್ದು, ಇದು ರಾಜಕೀಯ ವ್ಯವಸ್ಥೆಯನ್ನು ಶುದ್ಧೀಕರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿತ್ತು.

ಬಿಜೆಪಿ ನಾಯಕ, ಹಿರಿಯ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ಪಿಐಎಲ್ ವಿಚಾರಣೆ ವೇಳೆ, ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠವೂ ಕೇಂದ್ರ ಕಾನೂನು ಸಚಿವಾಲಯ ಮತ್ತು ಚುನಾವಣಾ ಆಯೋಗಕ್ಕೆ ಅರ್ಜಿ ಕುರಿತು ಪ್ರತಿಕ್ರಿಯೆ ನೀಡುವಂತೆ ತಿಳಿಸಿದೆ.

ಇದನ್ನೂ ಓದಿ: ತಮಿಳುನಾಡು: ಪ್ರಣಾಳಿಕೆಯಲ್ಲಿ ಸಿಎಎ ವಿರೋಧಿಸಿದ BJP ಮಿತ್ರಪಕ್ಷ AIADMK!

ನೋಟಾ ಹಕ್ಕು ಭ್ರಷ್ಟಾಚಾರವನ್ನು ಪರಿಶೀಲಿಸುತ್ತದೆ ಮತ್ತು ರಾಜಕೀಯ ಪಕ್ಷಗಳು ನಿರಂಕುಶಾಧಿಕಾರದಲ್ಲಿ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದನ್ನು ತಡೆಯುತ್ತದೆ ಎಂದು ಪಿಐಎಲ್ ಅರ್ಜಿಯಲ್ಲಿ ಹೇಳಲಾಗಿದೆ.

“ಅಭ್ಯರ್ಥಿಯನ್ನು ತಿರಸ್ಕರಿಸುವ ಮತ್ತು ಆಯ್ಕೆ ಮಾಡುವ ಹಕ್ಕು ಜನರಿಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುವ ಅಧಿಕಾರವನ್ನು ನೀಡುತ್ತದೆ. ಸ್ಪರ್ಧಿಸುವ ಅಭ್ಯರ್ಥಿಯ ಹಿನ್ನೆಲೆ ಅಥವಾ ಕಾರ್ಯಕ್ಷಮತೆಯ ಬಗ್ಗೆ ಮತದಾರರು ಅತೃಪ್ತರಾಗಿದ್ದರೆ, ಅವರು ಅಂತಹ ಅಭ್ಯರ್ಥಿಯನ್ನು ತಿರಸ್ಕರಿಸಲು ಮತ್ತು ಹೊಸ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನೋಟಾಗೆ ಮತ ನೀಡುತ್ತಾರೆ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಒಮ್ಮೆ ನೋಟಾ ಪಡೆದ ಆ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳನ್ನು ಮತ್ತೊಮ್ಮೆ ನಡೆಸುವ ಚುನಾವಣೆಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಲು ಚುನಾವಣಾ ಆಯೋಗದ ನಿರ್ದೇಶನವನ್ನು ಅರ್ಜಿಯಲ್ಲಿ ಕೋರಲಾಗಿದೆ.

2019 ರ ಸಾರ್ವತ್ರಿಕ ಚುನಾವಣೆಯಲ್ಲಿ ನೋಟಾ 6.5 ಲಕ್ಷ ಮತಗಳನ್ನು ಗಳಿಸಿದೆ. ಇದು ಒಟ್ಟಾರೆ ಮತಗಳ ಶೇಕಡಾ 1.06 ರಷ್ಟಿತ್ತು. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 36 ರಾಜಕೀಯ ಪಕ್ಷಗಳ ಅಭ್ಯರ್ಥಿಗಳಲ್ಲಿ  15 ಜನರು ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆದಿದ್ದರು.


‌ಇದನ್ನೂ ಓದಿ: ಪನ್ಸಾರೆ, ದಾಭೋಲ್ಕರ್‌ ಹತ್ಯೆ ಪ್ರಕರಣದ ತನಿಖೆಗೆ ಇನ್ನೆಷ್ಟು ದಿನ ಬೇಕು?- ಬಾಂಬೆ ಹೈಕೋರ್ಟ್ ಪ್ರಶ್ನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...