Homeಕರ್ನಾಟಕಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ: ಸ್ಪೀಕರ್ ನಡೆಗೆ ಕಾಂಗ್ರೆಸ್ ಮಾಜಿ ಶಾಸಕರ ವಿರೋಧ

ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ: ಸ್ಪೀಕರ್ ನಡೆಗೆ ಕಾಂಗ್ರೆಸ್ ಮಾಜಿ ಶಾಸಕರ ವಿರೋಧ

ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ವಿಧಾನಸಭಾ ಸದಸ್ಯರ ಕಾರ್ಯಗಾರವನ್ನು ಆಯೋಜಿಸುವುದಾಗಿ ಸ್ಪೀಕರ್‌ರವರು ತಿಳಿಸಿದ್ದಾರೆಂದು ರಮೇಶ್‌ ಬಾಬುರವರು ತಿಳಿಸಿದ್ದಾರೆ.

- Advertisement -
- Advertisement -

ನೂತನ ಶಾಸಕರಿಗೆ ಏರ್ಪಡಿಸಿರುವ ಕಾರ್ಯಾಗಾರದಲ್ಲಿ ಪ್ರೇರಣಾ ಉಪನ್ಯಾಸ ನೀಡಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಡೆ, ಆರ್ಟ್‌ ಆಫ್‌ ಲಿವಿಂಗ್‌ನ ರವಿಶಂಕರ್ ಗುರೂಜಿ, ಜಮಾತೆ ಇಸ್ಲಾಮಿ ಹಿಂದ್ ನ ಮುಹಮ್ಮದ್ ಕುಂಞ, ಬ್ರಹ್ಮಕುಮಾರಿಯ ಆಶಾ ದೀದಿ ಮತ್ತು ಬಲಪಂಥೀಯ ಬರಹಗಾರ ಗುರುರಾಜ ಕರ್ಜಗಿಯವರನ್ನು ಆಹ್ವಾನಿಸಿರುವ ಸ್ಪೀಕರ್ ಯು.ಟಿ ಖಾದರ್ ಕ್ರಮಕ್ಕೆ ಮಾಜಿ ಪರಿಷತ್ ಸದಸ್ಯರು ಮತ್ತು ಕಾಂಗ್ರೆಸ್ ವಕ್ತಾರರಾದ ರಮೇಶ್‌ ಬಾಬುರವರು ವಿರೋಧ ವ್ಯಕ್ತಪಡಿಸಿದ್ದಾರೆ.

ಹೊಸದಾಗಿ ಆಯ್ಕೆಯಾದ ಸುಮಾರು 58 ಶಾಸಕರಿಗೆ ಜೂನ್ 26 ರಿಂದ 28ರ ವರೆಗೆ ನೆಲಮಂಗಲದಲ್ಲಿರುವ ವೀರೇಂದ್ರ ಹೆಗ್ಗಡೆಯವರ ‘ಕ್ಷೇಮವನ’ದಲ್ಲಿ ಮೂರುದಿನಗಳ ಶಿಬಿರ ಏರ್ಪಡಿಸಲಾಗಿದೆ. ಆದರೆ ಅಲ್ಲಿ ಮಾತನಾಡಲು ಆಹ್ವಾನಿಸಿರುವ ವ್ಯಕ್ತಿಗಳು ಒಂದಲ್ಲ ಹಲವು ರೀತಿಯಲ್ಲಿ ವಿವಾದಾತ್ಮಕವೆನಿಸಿದ್ದಾರೆ. ವಿವಾದಾತ್ಮಕ ಗುರು ರವಿಶಂಕರ್ ಗುರೂಜಿ ಮೇಲೆ ಅಕ್ರಮ ಭೂಪರಭಾರೆ ಪ್ರಕರಣವಿದೆ. ಅಲ್ಲದೇ ಅವರು ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ನಕ್ಸಲರಾಗುತ್ತಾರೆ ಎಂಬ ದ್ವೇ‍ಷದ ಹೇಳಿಕೆ ನೀಡಿದ್ದರು. ಇನ್ನು ಡಾ. ವಿರೇಂದ್ರ ಹೆಗಡೆಯವರು ಬಿಜೆಪಿ ನಾಮನಿರ್ದೇಶಿತ ರಾಜ್ಯಸಭಾ ಸಂಸದರಾಗಿದ್ದಾರೆ. ಡಾ. ಗುರುರಾಜ್ ಕರ್ಜಗಿ ಬಲಪಂಥೀಯ ಭಾಷಣಕಾರರಾಗಿದ್ದು, ಇತಿಹಾಸ ತಿರುಚುತ್ತಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಬ್ರಹ್ಮಕುಮಾರಿಯ ಆಶಾ ದೀದಿ ಹಾಗೂ ಮೊಹಮ್ಮದ್ ಕುಂಞ ಸಹ ನೂತನ ಶಾಸಕರಿಗೆ ಪ್ರೇರಣೆ ಹೇಗೆ ನೀಡಬಲ್ಲರು ಎಂಬ ಪ್ರಶ್ನೆಗಳೆದ್ದಿವೆ.

ಕರ್ನಾಟಕ ವಿಧಾನಸಭಾ ಸದಸ್ಯರಿಗೆ 3 ದಿನಗಳ ಕಾಲ ತರಬೇತಿ ಶಿಬಿರ ಆಯೋಜನೆ ಸಮಂಜಸವಾಗಿರುತ್ತದೆ. ಭೌದ್ದಿಕವಾಗಿ ಮತ್ತು ದೈಹಿಕವಾಗಿ ಶಾಸಕರನ್ನು ಗಟ್ಟಿಗೊಳಿಸುವ ಯಾವುದೇ ಪ್ರಯತ್ನ ಔಚಿತ್ಯಪೂರ್ಣವಾಗಿರುತ್ತದೆ. ಇಂತಹ ತರಭೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಗಳು ಸಮಾಜಮುಖಿಗಳಾಗಿರಬೇಕು. ಇವರು ಜೀವನಬದ್ಧತೆ, ಗಟ್ಟಿತನದ ಮೌಲ್ಯ ಮತ್ತು ಸಂವಿಧಾನದ ಆಶಯಗಳಿಗೆ ಪೂರಕವಾಗಿ ವಿಶಾಲವಾದ ಮಾನವೀಯ ಮೌಲ್ಯಗಳ ಚಿಂತನೆಗಳನ್ನು ಹೊಂದಿರಬೇಕು. ಯಾವುದೇ ಒಂದು ಸಿದ್ಧಾಂತಕ್ಕೆ ಅಂಟಿಕೊಂಡವರನ್ನು ಅಥವಾ ಪೂರ್ವಗ್ರಹ ಪೀಡಿತರಾಗಿ ಚಿಂತಿಸುವವರನ್ನು ತರಭೇತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ವಿಷಯ ಮಂಡನೆಗೆ ನೀಡಿದರೆ, ಅಂತಹ ಬೋಧನೆಗಳು ಅಥವಾ ಚರ್ಚೆಗಳು ಶಿಬಿರದ ಒಟ್ಟಾರೆ ಮೌಲ್ಯಗಳನ್ನು ಕಳಂಕಗೊಳಿಸುತ್ತದೆ ಎಂದು ರಮೇಶ್‌ ಬಾಬುರವರು ಸ್ಪೀಕರ್‌ರವರಿಗೆ ಪತ್ರ ಬರೆದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸಲು ಮತ್ತು ಕುವೆಂಪುರವರ ಸರ್ವಧರ್ಮಗಳ ಶಾಂತಿಯ ತೋಟದ ಕಲ್ಪನೆಗೆ ಭಂಗ ತರಲು ಪ್ರಯತ್ನಿಸಿದವರ ಹಿನ್ನೆಲೆಯನ್ನು, ತಂತ್ರಗಾರಿಕೆಯ ಪ್ರಯತ್ನವನ್ನು ತಾವು ಸೂಕ್ಷ್ಮವಾಗಿ ಗಮನಿಸಿರುತ್ತೀರಿ. ಅನೇಕ ಸಂದರ್ಭಗಳಲ್ಲಿ ಇಂತಹ ಶಕ್ತಿಗಳ ಕುತಂತ್ರಗಳನ್ನು ನೀವೂ ಸೇರಿದಂತೆ ನಾವೆಲ್ಲರೂ ಆಸಹಾಯಕರಾಗಿ ಎದುರಿಸಿದ ಪ್ರಸಂಗಗಳಿದೆ. ಇದರ ಹಿನ್ನೆಲೆಯಲ್ಲಿ ಸಂವಿಧಾನದ ಮೌಲ್ಯಗಳನ್ನು ಸಂರಕ್ಷಿಸುವ ಕೆಲಸವನ್ನು ನಾವೆಲ್ಲರೂ ತರಭೇತಿ ಶಿಬಿರಗಳಲ್ಲಿ ನಿರೀಕ್ಷಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಹಿರಿಯ ಸಂಸದೀಯ ಪಟುಗಳ ಅನುಭವದ ಹಂಚಿಕೆಯ ಜೊತೆಗೆ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ವಿಷಯಗಳಿಗೆ ಮತ್ತು ಈ ದೇಶದ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಹಾಗೂ ಅದಕ್ಕೆ ಅನುಗುಣವಾಗಿ ಶಾಸಕರು ಕರ್ತವ್ಯ ನಿರ್ವಹಣೆ ಮಾಡುವ ಹಿನ್ನೆಲೆಯಲ್ಲಿ ತರಭೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ತಾವು ಉದ್ದೇಶಿತ ತರಭೇತಿ ಶಿಬಿರಕ್ಕೆ ಆಯ್ಕೆ ಮಾಡಿರುವ ಸಂಪನ್ಮೂಲ ವ್ಯಕ್ತಿಗಳ ಕುರಿತು ಅನೇಕ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ದಯಮಾಡಿ ಇದನ್ನು ಮರುಪರಿಶೀಲಿಸಲು ಕೋರುತ್ತೇನೆ. ಕೆಲವು ನಿವೃತ್ತ ಅಧಿಕಾರಿಗಳು ತಮಗೆ ತಪ್ಪು ಮಾಹಿತಿ ನೀಡಿರುವ ಸಾದ್ಯತೆ ಇದ್ದು, ದಯಮಾಡಿ ಸಂಸದೀಯ ವ್ಯವಸ್ಥೆಯ ಮೌಲ್ಯಗಳ ರಕ್ಷಣೆಯ ದೃಷ್ಟಿಯಿಂದ ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ ಎಂದು ಅವರು ಒತ್ತಾಯಿಸಿದ್ದಾರೆ.

ಆನಂತರ ಮತ್ತೊಂದು ಪತ್ರಿಕಾ ಹೇಳಿಕೆ ಹೊರಡಿಸಿ, “ಸಂಪನ್ಮೂಲ ವ್ಯಕ್ತಿಗಳನ್ನು ಕರೆಸುವ ಸಂಬಂಧ ವಿಧಾನಸಭೆಯ ಗೌರವಾನ್ವಿತಾ ಸ್ಪೀಕರ್ ರವರಿಗೆ ನಾನು ಮನವಿಯನ್ನು ಸಲ್ಲಿಸಿ ಸುಧೀರ್ಘವಾಗಿ ಚರ್ಚಿಸಿರುತ್ತೇನೆ. ಗೌರವಾನ್ವಿತ ಸ್ಪೀಕರ್ ರವರು ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಸಂಬಂಧ ಅಂತಿಮ ಪಟ್ಟಿ ಇನ್ನೂ ಆಖೈರುಗೊಳಿಸಬೇಕಾಗಿದೆ ಎಂದು ತಿಳಿಸಿರುತ್ತಾರೆ. ಕರ್ನಾಟಕ ವಿಧಾನಸಭೆಯ ಪರಂಪರೆಗೆ ಅನುಗುಣವಾಗಿ ಮತ್ತು ರಾಜ್ಯದ ಸಂಸ್ಕೃತಿಗೆ ಅನುಗುಣವಾಗಿ ಎಲ್ಲರ ಭಾವನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಪನ್ಮೂಲ ವ್ಯಕ್ತಿಗಳಿಗೆ ಆದ್ಯತೆ ನೀಡುವುದಾಗಿ ತಿಳಿಸಿರುತ್ತಾರೆ. ಮಾನ್ಯ ಸ್ಪೀಕರ್ ರವರು ನಾನು ನೀಡಿದ ಪತ್ರದಲ್ಲಿನ ಭಾವನೆಗಳನ್ನು ಪರಿಗಣಿಸುವುದಾಗಿ ತಿಳಿಸಿ ರಾಜ್ಯದ ವಿಧಾನಸಭೆಯ ಸಂಪ್ರದಾಯಕ್ಕೆ ಅನುಗುಣವಾಗಿ ಮತ್ತು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ವಿಧಾನಸಭಾ ಸದಸ್ಯರ ಕಾರ್ಯಗಾರವನ್ನು ಆಯೋಜಿಸುವುದಾಗಿ ಮತ್ತು ಕಾನೂನು ರಚನೆಯ ಹಿನ್ನೆಲೆಯಲ್ಲಿ ವಿಧಾನಸಭಾ ಸದಸ್ಯರಿಗೆ ಉಪಯುಕ್ತ ಆಗುವ ರೀತಿಯಲ್ಲಿ ಕಾರ್ಯಾಗಾರ ನಡೆಸುವುದಾಗಿ ತಿಳಿಸಿರುತ್ತಾರೆ. ಕಾರ್ಯಾಗಾರ ಶಿಬಿರದ ಸಂಬಂಧ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಬಂದಿರುವ ಎಲ್ಲಾ ಸಕರಾತ್ಮಕ ಅಂಶಗಳನ್ನು ಪರಿಗಣಿಸುವುದಾಗಿ ತಿಳಿಸಿರುತ್ತಾರೆ, ನನ್ನ ಪತ್ರದ ಸಂಬಂಧ ಮಾನ್ಯ ಸ್ಪೀಕರ್ ರವರು ಸುಧೀರ್ಘ ಸಮಯ ಚರ್ಚಿಸಿ ಪತ್ರದಲ್ಲಿನ ಅಂಶಗಳನ್ನು ಪರಿಗಣಿಸುವುದಾಗಿ ತಿಳಿಸಿದ್ದು, ಮಾನ್ಯ ಗೌರವಾನ್ವಿತ ಸ್ಪೀಕರ್ ರವರಿಗೆ ಮತ್ತು ವಿಧಾನಸಭಾ ಸಚಿವಲಾಯಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ರಮೇಶ್‌ ಬಾಬುರವರು ತಿಳಿಸಿದ್ದಾರೆ.

ಇದನ್ನೂ ಓದಿ: ನೂತನ ಶಾಸಕರಿಗೆ ಪ್ರೇರಣಾ ಉಪನ್ಯಾಸ ನೀಡಲು ಗುರುರಾಜ ಕರ್ಜಗಿ, ರವಿಶಂಕರ್ ಗುರೂಜಿಗೆ ಆಹ್ವಾನ: ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...