Homeಮುಖಪುಟಲೋಕಸಭೆ ಚುನಾವಣೆ: ಮಣಿಪುರದ 11 ಮತಗಟ್ಟೆಗಳಲ್ಲಿ ಇಂದು ಮರು ಮತದಾನ

ಲೋಕಸಭೆ ಚುನಾವಣೆ: ಮಣಿಪುರದ 11 ಮತಗಟ್ಟೆಗಳಲ್ಲಿ ಇಂದು ಮರು ಮತದಾನ

- Advertisement -
- Advertisement -

ಒಳ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಇಂದು (ಏ.22) ಮರು ಮತದಾನ ನಡೆಯುತ್ತಿದೆ. ಈ ಮತಗಟ್ಟೆಗಳಲ್ಲಿ ಮೊದಲ ಹಂತದ ಮತದಾನದ ವೇಳೆ ದುಷ್ಕರ್ಮಿಗಳ ಗುಂಪು ಗುಂಡಿನ ದಾಳಿ ನಡೆಸಿತ್ತು ಮತ್ತು ಇವಿಎಂಗಳನ್ನು ಒಡೆದು ಹಾಕಿತ್ತು.

ಏಪ್ರಿಲ್ 19ರಂದು ನಡೆದ ಮತದಾನದ ವೇಳೆ ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದಿತ್ತು. ಈ ಹಿನ್ನೆಲೆ ಇಂದು ಮತ್ತೊಮ್ಮೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಮತ್ತು ಸೇನೆ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯದ ನಂತರ, ಮಣಿಪುರದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಒಳ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸಲಾಗುವುದು ಎಂದು ಘೋಷಿಸಿದ್ದರು. ಈ ಮತಗಟ್ಟೆಗಳಲ್ಲಿ ಏ.19ರಂದು ನಡೆದ ಮತದಾನ ‘ಅಸಿಂಧು’ ಎಂದು ತಿಳಿಸಿದ್ದರು.

ಮೊದಲ ಹಂತದ ಮತದಾನದ ವೇಳೆ ಇಂಫಾಲ್ ಪೂರ್ವ ಜಿಲ್ಲೆಯ ಮತದಾನ ಕೇಂದ್ರದ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಈ ಸಂಬಂಧ ಮೂವರನ್ನು ಮಣಿಪುರ ಪೊಲೀಸರು ಬಂಧಿಸಿದ್ದಾರೆ. ಮೊದಲ ಹಂತದಲ್ಲಿ ಮಣಿಪುರದಲ್ಲಿ ಶೇ. 69.18ರಷ್ಟು ಮತದಾನವಾಗಿದೆ.

ಮಣಿಪುರದ 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಪಕ್ಷ ಆಗ್ರಹಿಸಿದ್ದು, ಮತದಾನದ ವೇಳೆ ಮತ ಗಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರವೆಸಗಲಾಗಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ : ಬಿಜೆಪಿಗೆ ನಿರ್ಗಮನ ಹಾದಿ ತೋರಿಸುತ್ತೇವೆ: ರಾಂಚಿಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್‌ ರ್‍ಯಾಲಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

0
ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆಯಾ? ಹೌದು ಈಗೊಂದು ಆರೋಪವನ್ನು ಸ್ಪರ್ಧೆಯ ಆಕಾಂಕ್ಷಿಗಳಾಗಿದ್ದ ಹಲವು ಅಭ್ಯರ್ಥಿಗಳು ಮಾಡಿದ್ದಾರೆ. ವಾರಾಣಾಸಿಯಲ್ಲಿ ಚುನಾವಣಾಧಿಕಾರಿಗಳು ಮತ್ತು ಬಿಜೆಪಿ-ಆರ್‌ಎಸ್‌ಎಸ್‌ನೊಂದಿಗೆ ನಂಟು ಹೊಂದಿದ್ದ...