Homeಮುಖಪುಟಪ.ಬಂಗಾಳ: ಚುನಾವಣೆ ಫಲಿತಾಂಶದ ಮುನ್ನಾ ದಿನ ಎರಡು ಮತಗಟ್ಟೆಗಳಲ್ಲಿ ಮರು ಮತದಾನ

ಪ.ಬಂಗಾಳ: ಚುನಾವಣೆ ಫಲಿತಾಂಶದ ಮುನ್ನಾ ದಿನ ಎರಡು ಮತಗಟ್ಟೆಗಳಲ್ಲಿ ಮರು ಮತದಾನ

- Advertisement -
- Advertisement -

ಲೋಕಸಭೆ ಚುನಾವಣೆಯ ಮತ ಎಣಿಕೆಗೆ ಒಂದು ದಿನ ಮೊದಲು ಪಶ್ಚಿಮ ಬಂಗಾಳದ ಬರಾಸತ್ ಮತ್ತು ಮಥುರಾಪುರ ಲೋಕಸಭಾ ಕ್ಷೇತ್ರಗಳಲ್ಲಿ ತಲಾ ಒಂದು ಮತಗಟ್ಟೆಯಲ್ಲಿ ಮರು ಮತದಾನ ನಡೆಯುತ್ತಿದೆ.

ಚುನಾವಣಾ ಆಯೋಗದ ಆದೇಶದ ಪ್ರಕಾರ, ಬರಾಸತ್ ಸಂಸದೀಯ ಕ್ಷೇತ್ರದ -ದೇಗಂಗಾ ವಿಧಾನಸಭಾ ವ್ಯಾಪ್ತಿಯ 61 ಕದಂಬಗಚಿ ಸರದರ್ ಪದ ಎಫ್‌ಪಿ ಶಾಲೆಯ ಕೊಠಡಿ ಸಂಖ್ಯೆ 2 ಮತ್ತು ಮಥುರಾಪುರ ಸಂಸದೀಯ ಕ್ಷೇತ್ರದ ಕಾಕ್‌ಡಿವಿಸಿ ವಿಧಾನಸಭಾ ವ್ಯಾಪ್ತಿಯ 26 ಆದಿರ್ ಮಹಲ್ ಶ್ರೀಚೈತನ್ಯ ಬಿದ್ಯಾಪೀಠ ಎಫ್‌ಪಿ ಶಾಲೆಯಲ್ಲಿ ಮರು ಮತದಾನ ನಡೆಯುತ್ತಿದೆ.

ಈ ಎರಡೂ ಕ್ಷೇತ್ರಗಳಲ್ಲಿ ಜೂನ್ 1ರಂದು ಮತದಾನ ನಡೆದಿತ್ತು. ಶನಿವಾರ ನಡೆದ ಮತದಾನದ ವೇಳೆ ಚುನಾವಣಾ ಅಕ್ರಮ ವಿಚಾರಕ್ಕೆ ಸಂಬಂಧಿಸಿ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವ್ಯಾಪಕ ಹಿಂಸಾಚಾರ ನಡೆದಿದ್ದು, ಹಲವು ಮಂದಿ ಗಾಯಗೊಂಡಿದ್ದರು.

ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಶೆಲ್‌ ಸಿಡಿಸಿ, ಲಾಠಿ ಪ್ರಹಾರ ನಡೆಸಿದ್ದರು. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿವಿಧ ರಾಜಕೀಯ ಪಕ್ಷಗಳು 1,899 ದೂರುಗಳನ್ನು ನೀಡಿವೆ ಎಂದು ಚುನಾವಣಾ ಆಯೋಗ ತಿಳಿಸಿದ್ದು, ಪೋಲಿಂಗ್‌ ಏಜೆಂಟರನ್ನು ಮತಗಟ್ಟೆ ಪ್ರವೇಶಿಸದಂತೆ ತಡೆದಿರುವುದು ಹಿಂಸಾಚಾರಕ್ಕೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಈ ಮಧ್ಯೆ ಬಸಿರ್‌ಹತ್‌ನ ಸಂದೇಶಖಾಲಿಗೆ ಶನಿವಾರ ನಡೆದ ಹಿಂಸಾಚಾರದ ಆರೋಪಿಯನ್ನು ಬಂಧಿಸಲು  ಪೊಲೀಸರು ಹೋದಾಗ, ಸ್ಥಳೀಯ ಮಹಿಳೆಯರು ಇದನ್ನು ವಿರೋಧಿಸಿ ಪೊಲೀಸರ ಜೊತೆ ಗಲಾಟೆ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತ ಸಾಧನ್ ನಂದಿಯನ್ನು ಬಂಧಿಸಲು ಸಂದೇಶಖಾಲಿಗೆ ತೆರಳಿದ್ದರು.

ಈ ಕುರಿತು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ವೀಕ್ಷಕರ ವರದಿ ಆಧರಿಸಿ ಚುನಾವಣಾ ಆಯೋಗವು ಮರು ಮತದಾನ ನಡೆಸಲು ಆದೇಶಿಸಿದೆ. ಲೋಕಸಭೆ ಚುನಾವಣೆಗೆ 7 ಹಂತಗಳಲ್ಲಿ ಮತದಾನ ಪೂರ್ಣಗೊಂಡಿದೆ. ನಾಳೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ದೇಶದ ಪ್ರಜೆಗಳ ಚಿತ್ತ ಚುನಾವಣಾ ಫಲಿತಾಂಶದತ್ತ ನೆಟ್ಟಿದೆ.

ಇದನ್ನು ಓದಿ: ಸರಿಯಾದ ಸಮಯಕ್ಕೆ ಬಂಧಿಸದ ಕಾರಣ ನೀರವ್ ಮೋದಿ, ಮಲ್ಯ, ಮೆಹುಲ್ ಚೋಕ್ಸಿ ಭಾರತದಿಂದ ಪಲಾಯನ ಮಾಡಿದ್ರು: ಮುಂಬೈ ಕೋರ್ಟ್

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...