Homeಮುಖಪುಟಜಮ್ಮು-ಕಾಶ್ಮೀರದಲ್ಲಿ ಯಾವುದೇ ಸಮಯದಲ್ಲಿ ಚುನಾವಣೆಗೆ ಸಿದ್ದ: ಸುಪ್ರೀಂಗೆ ಹೇಳಿದ ಕೇಂದ್ರ

ಜಮ್ಮು-ಕಾಶ್ಮೀರದಲ್ಲಿ ಯಾವುದೇ ಸಮಯದಲ್ಲಿ ಚುನಾವಣೆಗೆ ಸಿದ್ದ: ಸುಪ್ರೀಂಗೆ ಹೇಳಿದ ಕೇಂದ್ರ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಸಮಯದಲ್ಲಿ ಚುನಾವಣೆ ನಡೆಸಲು ಸರಕಾರ ಸಿದ್ದವಾಗಿದೆ ಎಂದು ಕೇಂದ್ರ ಸರಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಕೇಂದ್ರ ಚುನಾವಣಾ ಆಯೋಗ ಮತ್ತು ಕೇಂದ್ರಾಡಳಿತ ಪ್ರದೇಶದ ಚುನಾವಣಾ ಸಮಿತಿ ಈ ಕುರಿತು ಚುನಾವಣೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

370 ವಿಧಿ ರದ್ಧತಿ ಕುರಿತ ವಿಚಾರಣೆಯ ವೇಳೆ  ಕೇಂದ್ರಾಡಳಿತ ಪ್ರದೇಶವಾಗಿರುವ  ಜಮ್ಮು ಕಾಶ್ಮೀರಕ್ಕೆ ಯಾವಾಗ ಚುನಾವಣೆ ನಡೆಸುತ್ತೀರಿ ಎಂದು ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ ಕೇಳಿತ್ತು. 2018ರಿಂದ ಚುನಾಯಿತ ಸರಕಾರದ ಆಡಳಿತವಿರದ ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಮರುಸ್ಥಾಪನೆ ಬಗ್ಗೆ ಒತ್ತಿ ಹೇಳಿತ್ತು.

ಇಂದಿನ ವಿಚಾರಣೆಯ ಸಂದರ್ಭದಲ್ಲಿ, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲು ಕಾಲಮಿತಿಯನ್ನು ನೀಡಲು ಕೇಂದ್ರವು ನಿರಾಕರಿಸಿದೆ. ಆದರೆ ಚುನಾವಣೆ ನಡೆಸಲು ಸಿದ್ದವಾಗಿದೆ ಎಂದು ಹೇಳಿದೆ.

ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ಮುಂದುವರಿಯುತ್ತದೆ ಎಂಬ ಸಾಲಿಸಿಟರ್ ಜನರಲ್ ಹೇಳಿಕೆಗೆ ಲಡಾಖ್‌ನ ನಾಯಕರು ಮತ್ತು ಅರ್ಜಿದಾರರು ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದರು. ಕಳೆದ ಎರಡು ವರ್ಷಗಳಿಂದ ಲಡಾಖ್‌ನಲ್ಲಿ ರಾಜ್ಯ ಸ್ಥಾನಮಾನಕ್ಕೆ ಆಗ್ರಹಿಸಿ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ.

370 ವಿಧಿ ರದ್ದುಪಡಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ ಬಳಿಕ 2019ರ ಆಗಸ್ಟ್‌ನಲ್ಲಿ ಜಮ್ಮು-ಕಾಶ್ಮೀರಕ್ಕೆ ಸರಿಯಾದ ಸಮಯದಲ್ಲಿ ರಾಜ್ಯದ ಸ್ಥಾನಮಾನ ನೀಡುವುದಾಗಿ ಕೇಂದ್ರ ಸರಕಾರ ಹೇಳಿತ್ತು. ಇದೇ ಮಾತನ್ನು ಅಮಿತ್ ಶಾ ಕೂಡ ಪುನರುಚ್ಚರಿಸಿದ್ದರು. ಆದರೆ ನಿಗದಿತ ಸಮಯವನ್ನು ಹೇಳಿರಲಿಲ್ಲ.

ಇದನ್ನು ಓದಿ: ಬನಾರಸ್ ಹಿಂದೂ ವಿವಿಯಲ್ಲಿ ದಲಿತ ಪ್ರಾಧ್ಯಾಪಕಿಗೆ ಕಿರುಕುಳ, ಹಲ್ಲೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಸುವ ಹಡಗಿಗೆ ಬಂದರಿನಲ್ಲಿ ನಿಲುಗಡೆ ನಿಷೇಧಿಸಿದ ಸ್ಪೇನ್

0
ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಸಾಗಿಸುವ ಹಡಗನ್ನು ಸ್ಪೇನ್ ಬಂದರಿನಲ್ಲಿ ನಿಲ್ಲಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಅಲ್ಬರೆಸ್ ಗುರುವಾರ ಹೇಳಿದ್ದಾರೆ. "ಇದೇ ಮೊದಲ ಬಾರಿಗೆ ನಾವು ಇಸ್ರೇಲ್‌ಗೆ ತೆರಳುತ್ತಿದ್ದ ಹಡಗಿಗೆ...