Homeಕರ್ನಾಟಕವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

- Advertisement -
- Advertisement -

ವಿಧಾನಸಭೆಯ ಮಳೆಗಾಲದ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ‘ಕ್ಷಮೆ ಕೇಳಲು ಸಿದ್ದ’ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ (ಆ.26) ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಿಮಗೆ ಕ್ಷಮೆ ಬೇಕಾ?..ಓಕೆ…ಎಲ್ಲಾ ಕಾಂಗ್ರೆಸಿಗರಿಗೆ, ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳ ಗೆಳೆಯರಿಗೆ ಬೇಜಾರಾಗಿದ್ರೆ, ನಾನು ತಪ್ಪು ಮಾಡಿದ್ದೇನೆ ಎಂದನಿಸಿದ್ದರೆ ‘ನಾನು ಕ್ಷಮೆ ಕೇಳಲು ಮತ್ತು ಅವರ ಸಲಹೆಗಳನ್ನು ಸ್ವೀಕರಿಸಲು ಸಿದ್ದ” ಎಂದಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿಯವರು ಮಾತನಾಡಿದಂತಹ ಸಂದರ್ಭದಲ್ಲಿ, ಅವರ ಪಕ್ಷ, ಸಿದ್ದಾಂತ ಎಲ್ಲದರ ಬಗ್ಗೆ ನನಗೆ ಅರಿವಿದೆ ಎಂದು ಕಾಲೆಳೆದಿದ್ದೆ. ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆಯಲ್ಲಿ, ವಿಧಾನಸಭೆಯಲ್ಲೇ ನಾನು ನನ್ನ ಆಚಾರ-ವಿಚಾರಗಳನ್ನು ಮಾತನಾಡಿದ್ದೇನೆ” ಎಂದು ತಿಳಿಸಿದ್ದಾರೆ.

1980ರಿಂದ ಸತತವಾಗಿ ವಿದ್ಯಾರ್ಥಿ ನಾಯಕನಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡು, ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡು ಬಂದವನು. ನಾನೇನು ಹೊಸದಾಗಿ ಪಕ್ಷಕ್ಕೆ ಸೇರಿದವನಲ್ಲ. ಯಾರಿಂದ ಪಾಠ ಕೂಡ ನನಗೆ ಅವಶ್ಯಕತೆಯಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಆರ್. ಅಶೋಕ್ ಮಾತನಾಡಿದಂತಹ ಸಂದರ್ಭದಲ್ಲಿ “ನಿನ್ನ ಇತಿಹಾಸ ಗೊತ್ತಿದೆಯಪ್ಪ, ನೀನು ಯಾವಾಗಿಂದ ಬಂದೇ ಗೊತ್ತಿದೆ” ಎಂದು ಪರಮೇಶ್ವರ್ ಅವರ ಪಕ್ಕದಲ್ಲಿ ಕುಳಿತು ಮಾತನಾಡದ್ದೆ. ಆ ಸಂದರ್ಭದಲ್ಲಿ  ಭೂಮಿಗೆ ಹೇಗೆ ಪ್ರಾರ್ಥನೆ ಮಾಡ್ತಾರೆ ಎಂದು ನಾನು ತಿಳಿದುಕೊಂಡ ಎರಡು ಲೇನ್ ಹೇಳಿದ್ದೆ. ಅದನ್ನು ಕಟ್ ಮಾಡಿ, ಪೇಸ್ಟ್ ಮಾಡಿ, ಎಲ್ಲೆಲ್ಲಿಗೋ ಲಿಂಕ್ ಮಾಡಿ ನ್ಯಾಷನಲ್ ನ್ಯೂಸ್, ಇಂಟರ್‌ನ್ಯಾಷನಲ್ ನ್ಯೂಸ್, ಎಲ್ಲಾ ಭಾಷೆಗಳಲ್ಲಿ ಸುದ್ದಿ ಮಾಡಿಬಿಟ್ರು ಎಂದಿದ್ದಾರೆ.

ನಾನು ಮೊನ್ನೆ ಬಿಹಾರಕ್ಕೆ ಹೋದಾಗ ಕೆಲವರು ನನ್ನ ಹೇಳಿಕೆ ಬಗ್ಗೆ ಕೇಳಿದ್ರು. ಒಬ್ಬರು ನಮ್ಮ ಪಕ್ಷದ ಹಿರಿಯ ನಾಯಕ, ನನ್ನ ಗೆಳೆಯ ಬಹಳ ದೊಡ್ಡ ದೊಡ್ಡ ಸಲಹೆಗಳನ್ನೆಲ್ಲಾ ನೀಡಿದ್ದಾರೆ. ಅದು ಬಹಳ ಸಂತೋಷದ ವಿಷಯ. ನಾನು ಯಾರಿಗಿಂತಲೂ ದೊಡ್ಡವನಲ್ಲ. ಅವರಿಗಿಂತ ದೊಡ್ಡವನಲ್ಲ. ಇರಲಿ, ಆ ಬಗ್ಗೆ ಸಂತೋಷವಿದೆ ಎಂದು ಡಿಕೆಶಿ ಹೇಳಿದ್ದಾರೆ.

ನನ್ನ ಹೇಳಿಕೆ ಬಗ್ಗೆ ಮಾಧ್ಯಮಗಳಲ್ಲಿ ಮಾತನಾಡುತ್ತಿದ್ದಾರೆ. ಮಾಧ್ಯಮಗಳಲ್ಲಿ ಹೇಳಿಕೆ ಕೊಡುವ ಅವಶ್ಯಕತೆ ಇಲ್ಲ. ನೀವು ಕಾಂಗ್ರೆಸ್ ಕಚೇರಿಗೆ ಬನ್ನಿ, ಸಭೆ ಮಾಡಿ ಚರ್ಚೆ ಮಾಡೋಣ. ಮಾಧ್ಯಮ ಹೇಳಿಕೆಗಳಿಂದ ನಿಮಗೆ ಸಮಾಧಾನ ಆಗಬಹುದು, ಯಾವುದೇ ಲಾಭ ಆಗುವುದಿಲ್ಲ. ಹಲವರು ಸಲಹೆ ಕೊಟ್ಟಿದ್ದಾರೆ. ಖಂಡಿತ ನಾನು ನಿಮ್ಮ ಸಲಹೆಗಳಿಗಿಂದ ದೊಡ್ಡವನಲ್ಲ ಎಂದು ಕುಟುಕಿದ್ದಾರೆ.

ನಾನು ಎಲ್ಲರ ಕಷ್ಟ ಕಾಲದಲ್ಲಿ ಅವರ ಜೊತೆ ನಿಂತವನು. ಈಗಲೂ ನಾನು ಅವರ ಜೊತೆ ನಿಲ್ಲುತ್ತೇನೆ. ನಾನು ಏನೇ ಆಗಿಬರಹುದು, ಏನೋ ಆಗಬಹುದು. ಯಾವುದೇ ಹುದ್ದೆಯಲ್ಲಿರಬಹುದು. ಅದು ಮುಖ್ಯ ಅಲ್ಲ. ನಾನೊಬ್ಬ ನಿಷ್ಠಾವಂತ ಕಾಂಗ್ರೆಸಿಗನಾಗಿ ಯಾರ ಮನಸ್ಸಿಗೂ ನೋಯಿಸುವ ಅಗತ್ಯವಿಲ್ಲ. ನನ್ನ ಜೀವನ ನಿಮ್ಮಗಳ ಬದುಕಿಗೆ ಒಂದು ಅಡಿಪಾಯ ಹಾಕಬೇಕು, ನಿಮ್ಮ ಜೀವನಕ್ಕೆ ಮೆಟ್ಟಿಲಾಗಬೇಕು. ಅದಲ್ಲದೆ, ನಾನು ಯಾರ ಭಾವನೆಗೂ ನೋವುಂಟು ಮಾಡಲು ಬಯಸುವುದಿಲ್ಲ. ನಾನು ಹುಟ್ಟು ಕಾಂಗ್ರೆಸಿಗ, ನಾನು ಕಾಂಗ್ರೆಸಿಗನಾಗಿಯೇ ಸಾಯುತ್ತೇನೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 6635 ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...