Homeಮುಖಪುಟಸರ್ಕಾರದ ಅಹಂ ಮುರಿಯಲು ಸಜ್ಜಾಗಿದ್ದೇವೆ: ಕೃಷಿ ಸಚಿವರಿಗೆ ಸಂಯುಕ್ತ ಮೋರ್ಚಾ ಎಚ್ಚರಿಕೆ

ಸರ್ಕಾರದ ಅಹಂ ಮುರಿಯಲು ಸಜ್ಜಾಗಿದ್ದೇವೆ: ಕೃಷಿ ಸಚಿವರಿಗೆ ಸಂಯುಕ್ತ ಮೋರ್ಚಾ ಎಚ್ಚರಿಕೆ

"ಹಿಂತೆಗೆದುಕೊಂಡ ಮೂರು ಕೃಷಿ ಕಾನೂನುಗಳನ್ನು ನಂತರದ ದಿನಗಳಲ್ಲಿ ಮತ್ತೆ ಜಾರಿಗೆ ತರಬಹುದು” ಎಂದು ಕೇಂದ್ರ ಕೃಷಿ ಸಚಿವ ತೋಮರ್ ಹೇಳಿದ್ದರು.

- Advertisement -
- Advertisement -

“ಹಿಂತೆಗೆದುಕೊಂಡ ಮೂರು ಕೃಷಿ ಕಾನೂನುಗಳನ್ನು ನಂತರದ ದಿನಗಳಲ್ಲಿ ಮತ್ತೆ ಜಾರಿಗೆ ತರಬಹುದು” ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ರೈತ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ, “ಸರ್ಕಾರದ ಅಹಂ ಮುರಿಯಲು ಎಲ್ಲಾ ಸಮಯದಲ್ಲಿಯೂ ಸಜ್ಜಾಗಿದ್ದೇವೆ” ಎಂದು ಎಚ್ಚರಿಕೆ ನೀಡಿದೆ.

ಇಂದು ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ತೋಮರ್, “ನಾವು ಕೃಷಿ ತಿದ್ದುಪಡಿ ಕಾನೂನುಗಳನ್ನು ಜಾರಿಗೆ ತಂದೆವು. ಸ್ವಾತಂತ್ರ್ಯ ಬಂದ 70 ವರ್ಷಗಳ ನಂತರದಲ್ಲಿ ಸುಧಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಜಾರಿಗೆ ತಂದ ಈ ಕಾನೂನುಗಳನ್ನು ಕೆಲವು ಜನರು ಇಷ್ಟಪಡಲಿಲ್ಲ. ಆದರೆ ಸರ್ಕಾರ ನಿರಾಶೆಗೊಂಡಿಲ್ಲ. ನಾವು ಒಂದು ಹೆಜ್ಜೆ ಹಿಂದೆ ಸರಿದಿದ್ದೇವೆ ಮತ್ತು ನಾವು ಮತ್ತೆ ಮುಂದುವರಿಯುತ್ತೇವೆ. ಏಕೆಂದರೆ ರೈತರು ಭಾರತದ ಬೆನ್ನೆಲುಬು” ಎಂದು ಹೇಳಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಸಂಯುಕ್ತ ಕಿಸಾನ್ ಮೋರ್ಚಾ “ಕೃಷಿ ಸಚಿವ ನರೇಂದ್ರ ತೋಮರ್ ಅವರ ಈ ಹೇಳಿಕೆ ದುರಹಂಕಾರದಿಂದ ಕೂಡಿದೆ. ಬಿಜೆಪಿ ಸರ್ಕಾರ ಒಂದು ಹೆಜ್ಜೆ ಹಿಂದೆ ಸರಿದು ಮತ್ತು ಎರಡು ಹೆಜ್ಜೆ ಮುಂದೆ ಹೋಗಬೇಕೆಂದು ಭಾವಿಸಿದರೆ ಅದು ಸಾಧ್ಯವಿಲ್ಲ. ರೈತರು ಮತ್ತು ರೈತ ಸಂಘಟನೆಗಳು ಎಂಎಸ್‌ಪಿ ಸೇರಿದಂತೆ ಎಲ್ಲಾ ವಿಷಯಗಳಲ್ಲಿ ಒಗ್ಗಟ್ಟಾಗಿವೆ ಮತ್ತು ಈ ಸರ್ಕಾರದ ಅಹಂ ಮುರಿಯಲು ಎಲ್ಲಾ ಸಮಯದಲ್ಲೂ ಸಿದ್ಧವಾಗಿದ್ದೇವೆ” ಎಂದು ಹೇಳಿದೆ.

ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸುಗ್ರೀವಾಜ್ಞೆ ಮೂಲಕ ವಿವಾದಿತ 3 ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿತ್ತು. ನಂತರ ಎರಡೂ ಸದನಗಳಲ್ಲಿ ಅಂಗೀಕರಿಸಿತ್ತು. ಈ ಕುರಿತು ದೇಶಾದ್ಯಂತದ ರೈತರು 15 ತಿಂಗಳಿಗೂ ಹೆಚ್ಚು ಕಾಲ ಹೋರಾಟ ನಡೆಸಿದ್ದರು. ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶದ ರೈತರು ದೆಹಲಿಯ ಗಡಗಳಲ್ಲಿ ಮೊಕ್ಕಾಂ ಹೂಡಿದ್ದರು. ಕೊನೆಗೂ ರೈತರ ಸುಧೀರ್ಘ ಹೋರಾಟಕ್ಕೆ ಮಣಿದ ಸರ್ಕಾರ ನವೆಂಬರ್ 29 ರಂದು ಸಂಸತ್ತಿನ ಅಧಿವೇಶನದಲ್ಲಿ 3 ಕಾಯ್ದೆಗಳನ್ನು ವಾಪಸ್ ಪಡೆದಿದೆ. ರೈತರ ಎಲ್ಲಾ ಹಕ್ಕೊತ್ತಾಯಗಳನ್ನು ಒಪ್ಪಿಕೊಂಡು ಎಂಎಸ್‌ಪಿ ಜಾರಿಗಾಗಿ ಕಾನೂನು ರಚಿಸುವುದಾಗಿ ರೈತರಿಗೆ ಲಿಖಿತ ಭರವಸೆ ನೀಡಿದೆ. ತದನಂತರ ರೈತರು ತಮ್ಮ ಐತಿಹಾಸಿಕ ರೈತ ಹೋರಾಟವನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಂಡಿದ್ದಾರೆ.


ವಿವಾದಿತ ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೊಳಿಸುವ ಸೂಚನೆ ನೀಡಿದ ಕೇಂದ್ರ ಕೃಷಿ ಸಚಿವ ತೋಮರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...