Homeಮುಖಪುಟ2024 ರವರೆಗೂ ಪ್ರತಿಭಟನೆ ಮುಂದುವರಿಸಲು ಸಿದ್ಧರಿದ್ದೇವೆ: ರೈತ ನಾಯಕ ರಾಕೇಶ್ ಟಿಕಾಯತ್

2024 ರವರೆಗೂ ಪ್ರತಿಭಟನೆ ಮುಂದುವರಿಸಲು ಸಿದ್ಧರಿದ್ದೇವೆ: ರೈತ ನಾಯಕ ರಾಕೇಶ್ ಟಿಕಾಯತ್

"ದೇಶದ ವಿರೋಧ ಪಕ್ಷಗಳು ದುರ್ಬಲವಾಗಿವೆ. ಅದಕ್ಕಾಗಿಯೇ ರೈತರು ಕೇಂದ್ರದ ಹೊಸ ಕಾನೂನುಗಳ ವಿರುದ್ಧ ಈ ಆಂದೋಲನವನ್ನು ಪ್ರಾರಂಭಿಸಬೇಕಾಯಿತು" ಎಂದು ಅವರು ಆರೋಪಿಸಿದರು.

- Advertisement -
- Advertisement -

ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ರೈತರು ಮಾಡುತ್ತಿರುವ ಪ್ರತಿಭಟನೆಯನ್ನು 2024 ರವರೆಗೆ ಮುಂದುವರೆಸಲು ರೈತರು ಶಕ್ತರಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಭಾನುವಾರ ಹೇಳಿದ್ದಾರೆ. ಜೊತೆಗೆ ಇದನ್ನು “ಸೈದ್ಧಾಂತಿಕ ಕ್ರಾಂತಿ” ಎಂದು ಬಣ್ಣಿಸಿದ್ದಾರೆ.

ನಾಗ್ಪುರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಕೇಶ್ ಟಿಕಾಯತ್, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕುರಿತು ಕಾನೂನು ಖಾತರಿಯಾಗಬೇಕು ಎಂದು ಹೇಳಿದ್ದಾರೆ.

ರೈತರು ಇನ್ನೂ ಎಷ್ಟು ದಿನ ಪ್ರತಿಭಟನೆ ಮಾಡಬಹುದು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಟಿಕಾಯತ್, “ನಾವು ಮೇ 2024 ರವರೆಗೂ ಪ್ರತಿಭಟನೆ ಮಾಡಲು ಸಿದ್ಧರಿದ್ದೇವೆ. ಮೂರು ಕಾನೂನುಗಳನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು ಮತ್ತು ಕನಿಷ್ಟ ಬೆಂಬಲ ಬೆಲೆಗೆ ಸರ್ಕಾರ ಕಾನೂನು ಖಾತರಿ ನೀಡಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

“ಇದು ದೆಹಲಿಯಿಂದ ಪ್ರಾರಂಭವಾದ ರೈತರ ಸೈದ್ಧಾಂತಿಕ ಕ್ರಾಂತಿಯಾಗಿದೆ. ಇದು ವಿಫಲವಾಗುವುದಿಲ್ಲ. ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯುವವರೆಗೆ ನಾವು ಹಿಂತಿರುಗಲು ನಮ್ಮ ಹಳ್ಳಿಗಳ ರೈತರು ಬಯಸುವುದಿಲ್ಲ. ಮಸೂದೆಗಳನ್ನು ಹಿಂತೆಗೆದುಕೊಳ್ಳುವ ಬಗ್ಗೆ ಸರ್ಕಾರದ ನಿಲುವು ಅಚಲವಾಗಿದೆ. ಈ ಆಂದೋಲನ ದೀರ್ಘಕಾಲ ಮುಂದುವರಿಯಲಿದೆ” ಎಂದು ಹೇಳಿದರು.

“ದೇಶದ ವಿರೋಧ ಪಕ್ಷಗಳು ದುರ್ಬಲವಾಗಿವೆ. ಅದಕ್ಕಾಗಿಯೇ ರೈತರು ಕೇಂದ್ರದ ಹೊಸ ಕಾನೂನುಗಳ ವಿರುದ್ಧ ಈ ಆಂದೋಲನವನ್ನು ಪ್ರಾರಂಭಿಸಬೇಕಾಯಿತು” ಎಂದು ಆರೋಪಿಸಿದರು.

ಇದನ್ನೂ ಓದಿ: ತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರ

ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ 2020 ರ ನವೆಂಬರ್ 26 ರಿಂದ ದೆಹಲಿಯ ವಿವಿಧ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾನೂನುಗಳು ಕಾರ್ಪೊರೇಟ್‌ಗಳ ಪರವಾಗಿದ್ದು, ಇದು ಕನಿಷ್ಟ ಬೆಂಬಲ ಬೆಲೆ ಮತ್ತು ಮಂಡಿ ವ್ಯವಸ್ಥೆಯನ್ನು ರದ್ದುಗೊಳಿಸುತ್ತದೆ ಎಂದು ರೈತರು ಆರೋಪಿಸಿದ್ದಾರೆ.

ಜನವರಿ 12 ರಂದು ಸುಪ್ರೀಂ ಕೋರ್ಟ್ ಮೂರು ಹೊಸ ಕೃಷಿ ಕಾನೂನುಗಳ ಅನುಷ್ಠಾನವನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿದೆ ಎಂದು ಆದೇಶ ಹೊರಡಿಸಿತ್ತು. ರೈತರ ಸಮಸ್ಯೆಯನ್ನು ಪರಿಹರಿಸಲು ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಲು ನಿರ್ಧರಿಸಿತು. ಆದರೆ ಹೋರಾಟ ನಿರತ ರೈತರು ಈ ಸಮಿತಿಯ ಭಾಗವಾಗುವುದಿಲ್ಲ ಎಂದು ಹೇಳಿದ್ದರು.


ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...