Homeಮುಖಪುಟಪ್ಯಾಲೆಸ್ತೀನ್‌ಗೆ ನೆರವು ಹೆಚ್ಚಿಸಲು ಬದ್ದ : ವಿಶ್ವಸಂಸ್ಥೆಯಲ್ಲಿ ಪುನರುಚ್ಚರಿಸಿದ ಭಾರತ

ಪ್ಯಾಲೆಸ್ತೀನ್‌ಗೆ ನೆರವು ಹೆಚ್ಚಿಸಲು ಬದ್ದ : ವಿಶ್ವಸಂಸ್ಥೆಯಲ್ಲಿ ಪುನರುಚ್ಚರಿಸಿದ ಭಾರತ

- Advertisement -
- Advertisement -

“ಪ್ಯಾಲೆಸ್ತೀನ್ ಜನರಿಗೆ ನೆರವು ಹೆಚ್ಚಿಸಲು ಭಾರತ ಬದ್ದ” ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿರುವ ಪರ್ವತನೇನಿ ಹರೀಶ್ ಅವರು ಬುಧವಾರ (ಅ.30) ಹೇಳಿದ್ದಾರೆ.

ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಆಯೋಜಿಸಿದ್ದ ಮುಕ್ತ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದ ಅವರು,”ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ ಫಾರ್ ಫ್ಯಾಲೆಸ್ತೀನ್ ರೆಫ್ಯೂಜಿ (UNRWA)ಗೆ 37 ಮಿಲಿಯನ್ ಡಾಲರ್ ನೆರವು ಸೇರಿದಂತೆ ಪ್ಯಾಲೆಸ್ತೀನ್‌ಗೆ ಅಭಿವೃದ್ದಿ ನೆರವಾಗಿ ಪ್ರಸ್ತುತ 120 ಮಿಲಿಯನ್ ಡಾಲರ್‌ ಅನ್ನು ಭಾರತ ನೀಡುತ್ತಿದೆ” ಎಂದು ತಿಳಿಸಿದ್ದಾರೆ.

ಅಕ್ಟೋಬರ್ 22ರಂದು ಭಾರತವು UNRWAಗೆ ಆರು ಟನ್ ಔಷಧಿಗಳು ಮತ್ತು ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿದೆ ಎಂದು ಹರೀಶ್ ತಿಳಿಸಿದ್ದಾರೆ. ಇದೇ ವೇಳೆ 2023ರ ಅಕ್ಟೋಬರ್ 7ರಂದು ಹಮಾಸ್ ಗುಂಪು ಇಸ್ರೇಲ್ ಮೇಲೆ ನಡೆಸಿದ ದಾಳಿಯನ್ನು ಅವರು ಖಂಡಿಸಿದ್ದಾರೆ.

ಗಾಝಾದಲ್ಲಿ ತುರ್ತು ಕದನ ವಿರಾಮ ಘೋಷಿಸಬೇಕು. ಹಮಾಸ್ ಕೂಡ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು. ಎರಡು ರಾಷ್ಟ್ರಗಳು ದ್ವಿರಾಷ್ಟ್ರ ನೀತಿಯನ್ನು ಒಪ್ಪಿಕೊಳ್ಳಬೇಕು. ಪ್ಯಾಲೆಸ್ತೀನ್ ಸ್ವತಂತ್ರ ರಾಷ್ಟ್ರವಾಗಬೇಕು ಎಂದು ಹರೀಶ್ ಹೇಳಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಭಾರತ ಸಹಕಾರ ನೀಡಲಿದೆ ಎಂದಿರುವ ಹರೀಶ್, ಇತರ ರಾಷ್ಟ್ರಗಳು ಕೂಡ ಈ ಪ್ರಯತ್ನವನ್ನು ಬೆಂಬಲಿಸುವಂತೆ ಕೋರಿದ್ದಾರೆ.

ಇದನ್ನೂ ಓದಿ : ಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...