Homeಮುಖಪುಟಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಸಾಮಾನ್ಯ ಜ್ಞಾನವಿಲ್ಲ: ಸಿದ್ದರಾಮಯ್ಯ ತಿರುಗೇಟು

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಸಾಮಾನ್ಯ ಜ್ಞಾನವಿಲ್ಲ: ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರೆ, ನೀವು ಆರೋಪಿಸಿದಂತೆ CBI, IT ,ED ಮೇಲೆ ನನ್ನ ನಿಯಂತ್ರಣ ಇರುವುದು ನಿಜವೇ ಆಗಿದ್ದರೆ 56 ಇಂಚು ಎದೆಯ ಪ್ರಧಾನಿ ನರೇಂದ್ರ ಮೋದಿಯವರಿಗೇನು ಕೆಲಸ? ರಾಜೀನಾಮೆ ಕೊಟ್ಟು ಮನೆಗೆ ಹೋಗಲು ಹೇಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಛೇಡಿಸಿದ್ದಾರೆ.

ನಿನ್ನೆ ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸುದ್ದಿಗಾರರೊಂದಿಗ ಮಾತನಾಡುತ್ತಾ ಡಿ.ಕೆ ಶಿವಕುಮಾರ್ ಬಂಧನದ ಹಿಂದೆ ಸಿದ್ದರಾಮಯ್ಯನವರ ಕೈವಾಡವಿದೆ ಎಂದು ಆರೋಪಿಸಿದ್ದರು. ಅದಕ್ಕೆ ಈ ಮೇಲಿನ ರೀತಿಯಾಗಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಒಬ್ಬ ಸಂಸದರಿಗೆ, ಅದರಲ್ಲೂ ಒಂದು ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಿಗೆ ಇ.ಡಿ, ಐ.ಟಿ ಇಲಾಖೆ ಯಾರ ಅಧೀನದಲ್ಲಿ ಬರುತ್ತದೆ ಎಂಬ ಕನಿಷ್ಠ ಜ್ಞಾನವಾದರೂ ಬೇಡವೇ? ಇದುವರೆಗೂ ಬಿಜೆಪಿ ಸಮಾಜದ ಎರಡು ಕೋಮುಗಳ ನಡುವೆ ಬೆಂಕಿಹಚ್ಚಿ ತನ್ನ ಸ್ವಾರ್ಥ ಸಾಧಿಸಿಕೊಳ್ಳುತ್ತಿತ್ತು, ಈಗ ತನ್ನ ಎದುರಾಳಿ ನಾಯಕರ ನಡುವೆಯೇ ಹುಳಿ ಹಿಂಡುವ ಹೀನ ಕಾರ್ಯಕ್ಕೆ ಇಳಿದಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದ ದಿನದಿಂದ ವರ್ಗಾವಣೆ ಮತ್ತು ದ್ವೇಷ ರಾಜಕಾರಣ ಬಿಟ್ಟು ಬೇರೇನು ಮಾಡುತ್ತಿಲ್ಲ. ಪ್ರವಾಹದಿಂದ ಎಲ್ಲವನ್ನೂ ಕಳೆದುಕೊಂಡವರ ಬದುಕು ಬೀದಿಗೆ ಬಂದಿದೆ, ಈಶ್ವರಪ್ಪನವರು ಈ ನಿರಾಶ್ರಿತರಿಗೆ ಹತ್ತು ಸಾವಿರ ರೂಪಾಯಿ ಕೊಟ್ಟಿರುವುದೇ ಹೆಚ್ಚು ಎನ್ನುತ್ತಾರೆ. ಇಂಥವರಿಗೆ ಜನರ ಬಗ್ಗೆ ಕಾಳಜಿ, ಕರುಣೆ ಏನಾದರೂ ಇದೆಯೇ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಇವಿಎಂ ಬಗ್ಗೆ ಸಾಕಷ್ಟು ಅನುಮಾನಗಳಿವೆ. ನನಗೆ ಅಧಿಕಾರವಿದ್ದರೆ ಇವಿಎಂ ರದ್ದುಪಡಿಸಿ, ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಯುವಂತೆ ಮಾಡುತ್ತಿದ್ದೆ. ಮುಂಬರುವ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಬೇಕು. ಎಲ್ಲ ಪಕ್ಷಗಳು ಇದಕ್ಕೆ ಸಹಕಾರ ನೀಡಿದರೆ, ಕಾಂಗ್ರೆಸ್ ಪಕ್ಷ ಇದರ ನೇತೃತ್ವ ವಹಿಸಿಕೊಳ್ಳಲು ಸಿದ್ಧವಿದೆ ಎಂದು ಅವರು ಘೋಷಿಸಿದ್ದಾರೆ.

ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಜಿ.ಡಿ.ಪಿ ಕುಸಿಯುತ್ತಲೇ ಇದೆ, ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಕೇವಲ ಭಾಷಣದಲ್ಲಿ ಕಾಲ ಕಳೆಯುತ್ತಿರುವ ಪ್ರಧಾನಿಗಳು ಆಡಳಿತವನ್ನು ಮರೆತೇ ಬಿಟ್ಟಿದ್ದಾರೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಆರ್ಥಿಕ ಶಿಸ್ತು ಕಾಪಾಡಿದ್ದರು.‌ ಮೋದಿಯವರ ಆಡಳಿತದಲ್ಲಿ ದೇಶದ ಆರ್ಥಿಕತೆ ಅಧೋಗತಿ ತಲುಪಿದೆ ಎಂದು ಸಹ ಆರೋಪಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಪ್ರಮಾಣಿಕತೆ ಯಿಂದ ಹಾಗೂ ನಿಷ್ಪಕ್ಷಪಾತ ದಿಂದ ಚುನಾವಣೆ ನಡೆಯುವಂತಾಗಳು ಸಿದ್ದರಾಮಯ್ಯ ನವರು ಚುನಾವಣಾ ಆಯೋಗದ ವರೀಗೆ ವಿನಂತಿಯ ಜೊತೆಗೆ ಹಿಂದೆ ನಡೆದ ಎಲ್ಲ EVM ಗೊಟಾಲೆ ಗಳನ್ನು ವಿವರಿಸ ಬೇಕು ಬೆಲೆಟ್ ಪೆಪರ್ ನಿಂದ ಮಾತ್ರ ಪ್ರಜಾಪ್ರಭುತ್ವ ಸಾದ್ಯ ನಿಮಗೆ ಚೆನ್ನಾಗಿ ಗೊತ್ತಿದೆ. ಜೈ ಹಿಂದ್ ಜೈ ಕರ್ನಾಟಕ.

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...