Homeಮುಖಪುಟಸಂಭಾಲ್‌ಗೆ ಏಕಾಂಗಿಯಾಗಿ ಹೋಗಲು ಸಿದ್ಧ, ಪೊಲೀಸರು ಅನುಮತಿ ನೀಡುತ್ತಿಲ್ಲ: ರಾಹುಲ್ ಗಾಂಧಿ

ಸಂಭಾಲ್‌ಗೆ ಏಕಾಂಗಿಯಾಗಿ ಹೋಗಲು ಸಿದ್ಧ, ಪೊಲೀಸರು ಅನುಮತಿ ನೀಡುತ್ತಿಲ್ಲ: ರಾಹುಲ್ ಗಾಂಧಿ

- Advertisement -
- Advertisement -

ಮಸೀದಿ ಸಮೀಕ್ಷೆ ಸಂಧರ್ಭದಲ್ಲಿ ಹಿಂಸಾಚಾರ ನಡೆದ ಸಂಭಾಲ್‌ಗೆ ತೆರಳುತ್ತಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬುಧವಾರ ಇಲ್ಲಿನ ಗಾಜಿಪುರ ಗಡಿಯಲ್ಲಿ ತಡೆದಿದ್ದಾರೆ.

“ನಾನು ಪೊಲೀಸರೊಂದಿಗೆ ಸಂಭಾಲ್‌ಗೆ ಏಕಾಂಗಿಯಾಗಿ ಹೋಗಲು ಸಿದ್ಧನಿದ್ದೇನೆ. ಆದರೆ, ಅವರು ಅನುಮತಿಸಲಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.

ರಾಯ್ ಬರೇಲಿ ಸಂಸದ ರಾಹುಲ್ ಗಾಂಧಿ, ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ಹಿರಿಯ ಕಾಂಗ್ರೆಸ್ ನಾಯಕರು ಬೆಳಿಗ್ಗೆ ಘಾಜಿಪುರ ಗಡಿಯನ್ನು ತಲುಪಿದರು. ಅಲ್ಲಿ ಭಾರೀ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಸಂಭಾಲ್‌ಗೆ ಪ್ರವೇಶಿಸುವುದನ್ನು ತಡೆಯಲು ಬ್ಯಾರಿಕೇಡ್‌ಗಳನ್ನು ಹಾಕಲಾಯಿತು. ಹಲವು ಹೊತ್ತಿನ ಮಾತುಕತೆ ಬಳಿಕ ರಾಹುಲ್ ಗಾಂಧಿ ದೆಹಲಿಗೆ ತೆರಳಿದರು.

ನಂತರ ಮಾತನಾಡಿದ ಅವರು, “ನಾವು ಸಂಭಾಲ್‌ಗೆ ಹೋಗಲು ಪ್ರಯತ್ನಿಸುತ್ತಿದ್ದೇವೆ, ಪೊಲೀಸರು ನಿರಾಕರಿಸುತ್ತಿದ್ದು, ನಮಗೆ ಅವಕಾಶ ನೀಡುತ್ತಿಲ್ಲ. ಲೋಕಸಭೆಯ ವಿರೋಧ ಪಕ್ಷದ ನಾಯಕನಾಗಿ ಸ್ಥಳಕ್ಕೆ ಹೋಗುವುದು ನನ್ನ ಹಕ್ಕು.. ನಾನು ಒಬ್ಬನೇ ಹೋಗಲು ಸಿದ್ಧ ಎಂದು ಪೊಲೀಸರೊಂದಿಗೆ ಹೇಳಿದೆ. ಆದರೆ ಅವರು ಅದನ್ನು ಸ್ವೀಕರಿಸಲಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.

“ಕೆಲವು ದಿನಗಳಲ್ಲಿ ಹಿಂತಿರುಗಿದರೆ, ಅವರು ನಮ್ಮನ್ನು ಬಿಡುತ್ತಾರೆ ಎಂದು ಹೇಳುತ್ತಿದ್ದಾರೆ. ವಾಸ್ತವವಾಗಿ ಇದು ಲೋಕಸಭೆಯ ವಿರೋಧ ಪಕ್ಷದ ನಾಯಕನ ಹಕ್ಕಿಗೆ ವಿರುದ್ಧವಾಗಿದೆ. ನನಗೆ ಹೋಗಲು ಅವಕಾಶ ನೀಡಬೇಕು” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಕೈಯಲ್ಲಿ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡ ಗಾಂಧಿ, ಪೊಲೀಸರ ನಿರ್ಧಾರ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು.

“ನಾವು ಸಂಭಾಲ್‌ಗೆ ಹೋಗಿ ಅಲ್ಲಿ ಏನಾಯಿತು ಎಂಬುದನ್ನು ನೋಡಲು ಬಯಸುತ್ತೇವೆ. ನಾವು ಜನರನ್ನು ಭೇಟಿಯಾಗಲು ಬಯಸುತ್ತೇವೆ. ಆದರೆ, ನನ್ನ ಸಾಂವಿಧಾನಿಕ ಹಕ್ಕನ್ನು ನನಗೆ ಅನುಮತಿಸಲಾಗುತ್ತಿಲ್ಲ.  ಸಂವಿಧಾನವನ್ನು ಕೊನೆಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ, ನಾವು ಹೋರಾಟವನ್ನು ಮುಂದುವರಿಸುತ್ತೇವೆ” ಎಂದು ಅವರು ಹೇಳಿದರು.

ವಯನಾಡ್ ಸಂಸದೆ ಪ್ರಿಯಾಂಕಾ ವಾದ್ರಾ ಮಾತನಾಡಿ, “ಸಂಭಾಲ್‌ನಲ್ಲಿ ನಡೆದದ್ದು ತಪ್ಪಾಗಿದೆ. ರಾಹುಲ್ ವಿರೋಧ ಪಕ್ಷದ ನಾಯಕ. ಅವರಿಗೆ ಸಾಂವಿಧಾನಿಕ ಹಕ್ಕಿದೆ. ಅವರು ಇತರ ಜನರಿಗಿಂತ ಭಿನ್ನರು. ಅವರನ್ನು ತಡೆಯಲು ಸಾಧ್ಯವಿಲ್ಲ, ಸಂತ್ರಸ್ತರನ್ನು ಭೇಟಿ ಮಾಡಲು ಸಾಂವಿಧಾನಿಕ ಹಕ್ಕು ಇದೆ; ಅವರಿಗೆ ಅವಕಾಶ ನೀಡಬೇಕು” ಎಂದರು.

ಸಂಭಾಲ್‌ನಲ್ಲಿ ಭಾನುವಾರದಂದು ಮುಕ್ತಾಯಗೊಳ್ಳಲಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್‌) ಸೆಕ್ಷನ್ 163 (ಉಪದ್ರವ ಅಥವಾ ಅಪಾಯದ ತುರ್ತು ಪ್ರಕರಣಗಳಲ್ಲಿ ಆದೇಶವನ್ನು ನೀಡುವ ಅಧಿಕಾರ) ಅಡಿಯಲ್ಲಿ ನಿರ್ಬಂಧಗಳನ್ನು ಈಗ ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.

ಸಂಭಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪೆನ್ಸಿಯಾ ಅವರು ಮಂಗಳವಾರ ಗೌತಮ್ ಬುದ್ಧ ನಗರ ಮತ್ತು ಗಾಜಿಯಾಬಾದ್‌ನ ಪೊಲೀಸ್ ಕಮಿಷನರ್‌ಗಳು, ಅಮ್ರೋಹಾ ಮತ್ತು ಬುಲಂದ್‌ಶಹರ್ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದು ರಾಹುಲ್ ಗಾಂಧಿಯನ್ನು ತಮ್ಮ ಜಿಲ್ಲೆಗಳ ಗಡಿಯಲ್ಲಿ ನಿಲ್ಲಿಸುವಂತೆ ಸೂಚಿಸಿದ್ದಾರೆ.

“ನಾವು ರಾಹುಲ್ ಗಾಂಧಿಯವರನ್ನು ಸಂಭಾಲ್‌ ಪ್ರವೇಶಕ್ಕೆ ಅನುಮತಿಸುವುದಿಲ್ಲ. ಏಕೆಂದರೆ, ಅಲ್ಲಿನ ಆಡಳಿತವು ನಿಷೇಧಾಜ್ಞೆಗಳನ್ನು ಹೊರಡಿಸಿದೆ. ಪೊಲೀಸರು ಅವರನ್ನು ಯುಪಿ ಗೇಟ್‌ನಲ್ಲಿ ನಿಲ್ಲಿಸುತ್ತಾರೆ” ಎಂದು ಗಾಜಿಯಾಬಾದ್ ಪೊಲೀಸ್ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸ್ಥಳದಲ್ಲಿ ಸಾಕಷ್ಟು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಹೇಳಿದರು.

ನವೆಂಬರ್ 19 ರಿಂದ ಸಂಭಾಲ್‌ನಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಮೊಘಲರ ಕಾಲದ ಮಸೀದಿಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಈ ಹಿಂದೆ ಹರಿಹರ ದೇವಾಲಯವೊಂದು ಆ ಸ್ಥಳದಲ್ಲಿತ್ತು ಎಂಬ ಹೇಳಿಕೆಯ ಮೇರೆಗೆ ಸಮೀಕ್ಷೆ ನಡೆಸಲಾಯಿತು.

ನವೆಂಬರ್ 24 ರಂದು ನಡೆದ ಎರಡನೇ ಸಮೀಕ್ಷೆಯ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಪ್ರತಿಭಟನಾಕಾರರು ಶಾಹಿ ಜಾಮಾ ಮಸೀದಿ ಬಳಿ ಜಮಾಯಿಸಿ ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದರು. ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಇದನ್ನೂ ಓದಿ; ಸಂಭಾಲ್‌ ಹಿಂಸಾಚಾರ: ಪರಿಸ್ಥಿತಿ ಅವಲೋಕಿಸಲು ಘಟನಾ ಸ್ಥಳಕ್ಕೆ ಹೊರಟ ರಾಹುಲ್-ಪ್ರಿಯಾಂಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...